ಸಂಸದರಿಂದ ಯೋಜನೆ ಪ್ರಗತಿ ಸಭೆ


Team Udayavani, Sep 25, 2019, 3:04 AM IST

sansadarinda

ಬೆಂಗಳೂರು: ಲೋಕಸಭಾ ಸದಸ್ಯ ಉಮೇಶ್‌ ಜಾಧವ್‌ ಅವರ ಅಧ್ಯಕ್ಷತೆಯಲ್ಲಿ ಬಂಜಾರ ಆರ್ಥಿಕ ಮತ್ತು ಸಾಂಸ್ಕೃತಿಕ ಉತ್ತೇಜನ ಕೇಂದ್ರ (ಕೌಶಲ್ಯ ಪಾರ್ಕ್‌)ದ ಯೋಜನೆ ಪ್ರಗತಿ ಸಭೆ ನಡೆಯಿತು.

ಭಾನುವಾರ ನಗರದ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಕತಾಂ ಅನಿನಿ ವ್ಯವಸ್ಥಾಪಕ ನಿರ್ದೇಶಕ ಚಂದ್ರನಾಯ್ಕ, ಕಂದಾಯ ಗ್ರಾಮ ಕೋಶದ ನಿರ್ದೇಶಕ ಹೀರಾನಾಯ್ಕ, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್‌ ಕನ್ಸಲ್ಟೆಂಟ್‌ ಕಿರಣ್‌ ಕುಮಾರ್‌ ಶೆಟಕರ್‌, ಗುಲ್ಬರ್ಗಾ ಕೆ.ಬಿ.ಎನ್‌. ವಿಶ್ವವಿದ್ಯಾನಿಲಯದ ಸಹ ಉಪ ಕುಲಪತಿ ಪ್ರೊ.ವಿರೂಪಾಕ್ಷಯ್ಯ, ಕತಾಂಅನಿನಿ, ಕಾರ್ಯಪಾಲಕ ಅಭಿಯಂತರರು ಕೆ.ಟಿ. ನಾಗರಾಜು, ಯೋಜನಾ ಸಲಹೆಗಾರ ಕೆ.ಎನ್‌.ಪೂಜಾರ್‌, ಸಹಾಯಕ ಕಾರ್ಯಪಾಲಕ ಅಭಿಯಂತರರು ಸತೀಶ್‌ ಕುಮಾರ್‌ ಭಾಗವಹಿಸಿದ್ದರು.

ಸಭೆಯನ್ನು ಕುರಿತು ಮಾತನಾಡಿದ ಸಂಸದರು ಬಂಜಾರ ಆರ್ಥಿಕ ಮತ್ತು ಸಾಂಸ್ಕೃತಿಕ ಉತ್ತೇಜನ ಕೇಂದ್ರ (ಕೌಶಲ್ಯ ಪಾರ್ಕ್‌) ಯೋಜನೆಗೆ 2015-16ನೇ ಸಾಲಿನಲ್ಲಿ 6.0 ಕೋಟಿ ರೂ. ಮಂಜೂರಾಗಿತ್ತು. ಮಂಜೂರಾದ ಅನುದಾನದಲ್ಲಿ ಬಂಜಾರರ ಪಾರಂಪರಿಕ ಕಸೂತಿ ಕಲೆಯನ್ನು ಉಳಿಸಿ ಬೆಳೆಸಲು ಹಾಗೂ ಆ ಭಾಗದ ಮಹಿಳೆಯರ ಸಬಲೀಕರಣ ಮತ್ತು ನಿರುದ್ಯೋಗ ನಿರ್ಮೂಲನೆಗಾಗಿ ಬೀದರ್‌ ಜಿಲ್ಲೆಯ ಹುಮ್ನಾಬಾದ್‌ ತಾಲೂಕಿನ ಬೋರಂಪಲ್ಲಿ ಬಳಿಯಿರುವ ಲಾಲ್‌ಧರಿ ಪ್ರದೇಶದಲ್ಲಿ ಕೌಶಲ್ಯ ಪಾರ್ಕ್‌ ಸ್ಥಾಪಿಸಲಾಗಿದೆ.

ಈ ಕೇಂದ್ರದಲ್ಲಿ ವಿವಿಧ ಕೌಶಲ್ಯ ಚಟುವಟಿಕೆಗಳನ್ನು ರೂಪಿಸಿ ಕಾರ್ಯಾನುಷ್ಠಾನಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಇಲ್ಲಿ ನಿರಂತರವಾಗಿ ಕೌಶಲ್ಯಾಭಿವೃದ್ಧಿ ಮತ್ತು ಆರ್ಥಿಕ ಉತ್ತೇಜನ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಈಗಾಗಲೇ ಚಾಲನೆಯಲ್ಲಿರುವ ವಿವಿಧ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಲು ಸೂಚಿಸಿದರು.

ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚನೆ: ಲಾಲ್‌ಧರಿ ಪ್ರದೇಶವನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ರೂಪಿಸುವಲ್ಲಿ ಕ್ರಿಯಾಯೋಜನೆ ತಯಾರಿಸುವುದು, ಬಂಜಾರ ಕಸೂತಿ ಕಲೆಯ ತರಬೇತಿ ನೀಡಿ ಪುನಶ್ಚೇತನಗೊಳಿಸುವುದು, ಸಿದ್ಧ ಉಡುಪುಗಳ ಮಾರಾಟ ಕೇಂದ್ರ, ಔಷಧ ಗಿಡಮೂಲಿಕಗಳ ಸಸ್ಯವನ ನಿರ್ಮಾಣ, ಮಧ್ಯ ವರ್ಜನ ಕೇಂದ್ರ, ಆಧ್ಯಾತ್ಮಿಕ ಕೇಂದ್ರ, ಗೋ ಸಂರಕ್ಷಣಾ ಕೇಂದ್ರ ಮುಂತಾದ ಕಾರ್ಯಕ್ರಮಗಳನ್ನು ಕಾಲಮಿತಿಯೊಳಗೆ ಪ್ರಾರಂಭಿಸಿ ಪೂರ್ಣಗೊಳಿಸಲು ಸಭೆಯಲ್ಲಿ ಚರ್ಚಿಸಲಾಯಿತು.

ಅಲ್ಲದೆ, ಬಂಜಾರರಲ್ಲಿ ವಲಸೆ ಪ್ರವೃತಿ ತಡೆಗಟ್ಟಲು ಮತ್ತು ಬಡತನ ನಿರ್ಮೂಲನೆ ಮಾಡಲು ನಿರುದ್ಯೋಗಿ ಯುವಕ, ಯುವತಿಯರಿಗೆ ಕೌಶಲ್ಯ ತರಬೇತಿಗಳನ್ನು ಒದಗಿಸುವುದು. ಈ ಕೇಂದ್ರದಲ್ಲಿ ಕಸೂತಿ ಕಲೆ ತರಬೇತಿ ಪಡೆದ ಮಹಿಳೆಯರು ತಮ್ಮ ಗ್ರಾಮಗಳಿಗೆ ತೆರಳಿ ಸ್ವಯಂ ಉದ್ಯೋಗ ರೂಪಿಸಿಕೊಳ್ಳಲು, ಸದರಿ ಕೇಂದ್ರದಿಂದ ಕಚ್ಚಾ ವಸ್ತುಗಳನ್ನು ಬಳಸಿಕೊಂಡು ನಂತರ ಅವುಗಳನ್ನು ಸಿದ್ಧ ವಸ್ತುಗಳನ್ನಾಗಿ ಮಾಡಿ ಅದೇ ಕೇಂದ್ರದಲ್ಲಿ ಮಾರಾಟ ಮಾಡಿ ಆದಾಯ ಗಳಿಸುವುದು. ಸಿದ್ಧಪಡಿಸಿದ ಸಾಮಗ್ರಿಗಳಿಗೆ ಕೇಂದ್ರದಲ್ಲಿ ಆಧುನಿಕ ವಿನ್ಯಾಸಗೊಳಿಸಿ ವಿದೇಶಗಳಲ್ಲಿ ಸೂಕ್ತ ಮಾರುಕಟ್ಟೆ ಕಲ್ಪಿಸುವುದರ ಮೂಲಕ ಪ್ರಚಾರ ಪಡಿಸುವ ಬಗ್ಗೆಯೂ ಚರ್ಚಿಸಲಾಯಿತು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.