ಐಹೊಳೆಯಲ್ಲಿ ಸೌಲಭ್ಯ ಮರೀಚಿಕೆ

Team Udayavani, Sep 27, 2019, 12:23 PM IST

bk-tdy-3

ಅಮೀನಗಡ: ಭಾರತೀಯ ದೇವಾಲಯಗಳ ತೊಟ್ಟಿಲು ಖ್ಯಾತಿಯ ಐಹೊಳೆ ರಾಷ್ಟ್ರೀಯ ಪ್ರವಾಸಿ ತಾಣ. ಬಾದಾಮಿ ಚಾಲುಕ್ಯರ ಕಾಲದಲ್ಲಿ ನಿರ್ಮಾಣಗೊಂಡ ಇಲ್ಲಿನ ಹಲವು ಸ್ಮಾರಕಗಳು ವಿಶ್ವದ ಜನರ ಗಮನ ಸೆಳೆದಿವೆ.

ಆದರಿಲ್ಲಿ ಪ್ರವಾಸಿಗರಿಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸಿಲ್ಲ. ಪ್ರವಾಸಿಗರು ಬಿಡಿ ಇಲ್ಲಿ ವಾಸಿಸುವ ಜನರಿಗೂ ಬಿದ್ದ ಮನೆ ಕಟ್ಟಿಕೊಳ್ಳುವ ಸ್ವಾತಂತ್ರ್ಯವೂ ಇಲ್ಲ. ಐಹೊಳೆಯ ಸೌಂದರ್ಯ ವೀಕ್ಷಿಸಲು ಇಲ್ಲಿಗೆ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ.ಆದರೆ ಕುಡಿಯಲು ಶುದ್ಧ ನೀರಿಲ್ಲ. ಸುಲಭ ಶೌಚಾಲಯಗಳಿಲ್ಲ. ಸ್ವತ್ಛತೆಯಂತೂ ಇಲ್ಲವೇ ಇಲ್ಲ. ಇದರಿಂದ ಇಲ್ಲಿ ಆಗಮಿಸುವ ಪ್ರವಾಸಿಗರ ಸಂಖ್ಯೆ ಕ್ಷೀಣಿಸುತ್ತಿದೆ ಎನ್ನಲಾಗಿದೆ.

ಪ್ರವಾಸಿಗರಿಗೆ ನೀರಿಲ್ಲ: ಐಹೊಳೆ ನೋಡಲು ದೇಶವಿದೇಶಗಳಿಂದ ಬರುವ ಪ್ರವಾಸಿಗರು ಶುದ್ಧ ಕುಡಿಯುವ ನೀರಿಲ್ಲದೇ ಪರದಾಡುವಂತಾಗಿದೆ. ಇಲ್ಲಿಗೆ ಬರುವ ಭಾರತೀಯ ಪ್ರಜೆಗಳಿಗೆ 30ರೂ., ವಿದೇಶ ಪ್ರವಾಸಿಗರಿಗೆ 300ರೂ ಶುಲ್ಕವಿದೆ. ಆದರೆ ಅವರಿಗೆ ಶುದ್ಧ ಕುಡಿಯುವ ನೀರು ಪೂರೈಸಿಲ್ಲ. ನೀರು ಪೂರೈಸುವ ಸಾಮಗ್ರಿಗಳಿದ್ದರೂ ಹಲವಾರು ವರ್ಷಗಳಿಂದ ಅದರಲ್ಲಿ ನೀರು ಮಾತ್ರ ಬಂದಿಲ್ಲ. ಹೀಗಾಗಿ ಅವುಗಳು ತುಕ್ಕು ಹಿಡಿದಿವೆ. ಕೇವಲ ತೋರಿಕೆಗೆ ಮಾತ್ರ ಅದನ್ನು ಇಡಲಾಗಿದೆ. ಇದರಿಂದಪ್ರವಾಸಿಗರು ಹಿಡಿಶಾಪ ಹಾಕುತ್ತಿದ್ದಾರೆ.

ಸುಲಭ ಶೌಚಾಲಯವಿಲ್ಲ: ಇಲ್ಲಿ ಸುಲಭ ಶೌಚಾಲಯವಿಲ್ಲ. ಪ್ರವಾಸಿ ಕೇಂದ್ರಗಳ ಒಳಗಡೆಯಿರುವ ಶೌಚಾಲಯಗಳಿಗೆ ಹೋಗಬೇಕಾದರೆ ಪ್ರವಾಸಿ ಇಲಾಖೆ ಸಿಬ್ಬಂದಿ ಅವಕಾಶ ನೀಡಲ್ಲ. ಮೊದಲು ಟಿಕೆಟ್‌ ತೆಗೆದುಕೊಂಡು ಹೋಗಬೇಕೆಂಬ ನಿಯಮ ಅಳವಡಿಸಿಕೊಂಡಿದೆ. ಕೆಲ ಸಂದರ್ಭದಲ್ಲಿ ಪ್ರವಾಸಿಗರಿಗೆ ಬೇಗನೆ ಶೌಚಾಲಯಕ್ಕೆ ಹೋಗಲು ಸ್ಥಳಾವಕಾಶವೇ ಇಲ್ಲ.ಇದರಿಂದ ಪ್ರವಾಸಿಗರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಗಬ್ಬೆದ್ದ ಚರಂಡಿ: ದುರ್ಗಾ ದೇವಾಲಯದ ಮುಂಭಾಗದ 200 ಮೀ. ಉದ್ದದ ಚರಂಡಿ ಗಬ್ಬೆದ್ದು ನಾರುತ್ತಿದೆ. ಈ ಚರಂಡಿಯ ಅಸ್ವಚ್ಛತೆ ಯಿಂದ ಪ್ರವಾಸಿಗರು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಇದೆ. ಪ್ರಾಚ್ಯ ಇಲಾಖೆಯವರು ಸ್ವತ್ಛ ಭಾರತ ಎಂದು ತಿಂಗಳಿಗೊಂದು ಕಾರ್ಯಕ್ರಮ ಮಾಡುತ್ತಾರೆ. ಆದರೆ ಆ ಚರಂಡಿ ಮಾತ್ರ ಸ್ವತ್ಛ ಆಗುತ್ತಿಲ್ಲ. ಇತ್ತ ಗ್ರಾಪಂ ಕೂಡಾ ಈ ಬಗ್ಗೆ ವಿಚಾರ ಕೂಡಾ ಮಾಡುತ್ತಿಲ್ಲ. ಈ ಚರಂಡಿ ನಮ್ಮ ವ್ಯಾಪ್ತಿಗೆ ಬರಲ್ಲ ಎನ್ನುತ್ತಾರೆ ಗ್ರಾಪಂ ಸಿಬ್ಬಂದಿ.ಈ ಗೊಂದಲಗಳಿಂದ ಚರಂಡಿ ಮಾತ್ರ ಸ್ವತ್ಛತೆ ಕಾಣುತ್ತಿಲ್ಲ.

ಬೆಳಕು ಬೇಕು: ಐತಿಹಾಸಿಕ ಪ್ರವಾಸಿ ಕೇಂದ್ರಗಳಿಲ್ಲಿ ವಿದ್ಯುತ್‌ ಸಮಸ್ಯೆ ಇದೆ. ಇಲ್ಲಿರುವ ಪ್ರವಾಸಿ ತಾಣಗಳಿಗೆ ವಿದ್ಯುತ್‌ ಸೌಕರ್ಯವಿಲ್ಲ. ಹೀಗಾಗಿ ಪ್ರವಾಸಿ ತಾಣಗಳು ಬೆಳಕಿನಿಂದ ವಂಚಿತವಾಗಿವೆ. ಸಂಬಂಧಪಟ್ಟ ಇಲಾಖೆಯವರು ಕೂಡಲೇ ವಿದ್ಯುತ್‌ ಒದಗಿಸಿ ಸೌಂದರ್ಯಿಕರಣಕ್ಕೆ ಒತ್ತು ನೀಡಬೇಕೆಂಬುದು ಪ್ರವಾಸಿಗರ ಆಗ್ರಹ. ಗೈಡ್‌ಗಳಿಗಿಲ್ಲ ಜೀವನಾಧಾರ: ಲಕ್ಷಾಂತರ ಪ್ರವಾಸಿಗರಿಗೆ ಪ್ರವಾಸಿ ಸ್ಥಳಗಳ ಇತಿಹಾಸ ತಿಳಿಸುವ ಗೈಡ್‌ಗಳಿಗೆ ಸರ್ಕಾರದಿಂದ ಯಾವದೇ ರೀತಿಯ ಆದಾಯವಿಲ್ಲ.ಯಾವುದೇ ಸೌಲಭ್ಯಗಳೂ ಇಲ್ಲ. ತರಬೇತಿ ಕೊಟ್ಟಿರುವುದು ಬಿಟ್ಟರೆ ಬೇರ್ಯಾವ ಅನುಕೂಲ ಕಲ್ಪಿಸಿಲ್ಲ.ಯುನಿಫಾರಮ್‌ ಕೂಡಾ ವಿತರಿಸಿಲ್ಲ. ಪ್ರವಾಸಿಗರು ಕೊಡುವ ಬಿಡಿಗಾಸು ಹಣವೇ ಅವರಿಗೆ ಜೀವನಾಧಾರ.ಇತ್ತೀಚಿನ ದಿನಗಳಲ್ಲಿ ತರಬೇತಿ ಕೂಡ ಇಲ್ಲಾ. ಇದರಿಂದ ಗೈಡ್‌ಗಳ ಪರಿಸ್ಥಿತಿ ಅತಂತ್ರವಾಗಿದೆ. ಅವರ ಕುಟುಂಬಗಳ ಜೀವನ ನಿರ್ವಹಣೆ ಕಷ್ಟವಾಗಿದೆ.

-ಎಚ್‌.ಎಚ್‌. ಬೇಪಾರಿ

ಟಾಪ್ ನ್ಯೂಸ್

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.