ಬಿಎಸ್ವೈ ಶಕ್ತಿ ಕುಂದಿಸಲು ಸಾಧ್ಯವಿಲ್ಲ
Team Udayavani, Sep 28, 2019, 3:00 AM IST
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಕ್ತಿಯನ್ನು ಕುಂದಿಸಲು ಯಾರಿಂ ದಲೂ ಸಾಧ್ಯವಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್ ಹೇಳಿದ್ದಾರೆ. ಬಿಬಿಎಂಪಿ ಮೇಯರ್ ಚುನಾವಣೆ ಕುರಿತ ಅನೌಪಚಾರಿಕ ಸಭೆಯಲ್ಲಿ ಮಾತನಾಡಿ, ನಗರ ಉಸ್ತುವಾರಿ ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಅಭ್ಯರ್ಥಿ ಆಯ್ಕೆ ಕುರಿತಂತೆ ಚರ್ಚಿಸಲು ವರದಿ ನೀಡುವಂತೆ ಸೂಚಿಸಿದ್ದರು.
ಅವರ ಸೂಚನೆಯ ಮೇರೆಗೆ ಆಕಾಂಕ್ಷಿಗಳ ಅಭಿಪ್ರಾಯ ಪಡೆದು ಮುಖ್ಯಮಂತ್ರಿಗೆ ವರದಿ ನೀಡಿದ್ದೇವೆ ಎಂದು ತಿಳಿಸಿದರು. ಪಕ್ಷದ ರಾಜ್ಯಾಧ್ಯಕ್ಷರು ಈ ಕುರಿತು ಸೆ. 30ರಂದು ನಗರದ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರ ಸಭೆ ಕರೆದು ಚರ್ಚಿಸಿ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಮೇಯರ್ ಆಯ್ಕೆ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಆಕಾಂಕ್ಷಿಗಳೂ ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ. ಆದರೆ, ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಿರುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ