ಟಿಕ್‌ಟಾಕ್‌ಗೆ ಇಬ್ಬರು ಯುವಕರು ಬಲಿ

Team Udayavani, Sep 28, 2019, 3:08 AM IST

tiktok

ಬೆಂಗಳೂರು: ಪುಟ್ಟ ಮಕ್ಕಳಿಂದ ಹಿಡಿದು ವಯೋವದ್ಧರವರೆಗೂ ಹುಚ್ಚು ಹಿಡಿಸಿರುವ ಟಿಕ್‌ ಟಾಕ್‌ಗೆ ನಗರದಲ್ಲಿ ಇಬ್ಬರು ಯುವಕರು ಬಲಿಯಾಗಿದ್ದಾರೆ. ಶಿವರಾಮ ಕಾರಂತ ಬಡಾವಣೆ ಸಮೀಪದ ಯಲಹಂಕ ಮತ್ತು ಚನ್ನಸಂದ್ರ ರೈಲ್ವೆ ಹಳಿ ಮೇಲೆ ಟಿಕ್‌ಟಾಕ್‌ ವಿಡಿಯೋ ಮಾಡಲು ಹೋಗಿ ರೈಲಿಗೆ ಸಿಲುಕಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ಹೆಗಡೆ ನಗರದ ನಿವಾಸಿಗಳಾಗಿದ್ದ ಅಫ್ತಾಬ್‌ (19) ಮತ್ತು ಮೊಹಮ್ಮದ್‌ ಮತೀನ್‌ (29) ಎಂಬವರು ಮೃತಪಟ್ಟಿದ್ದು, ಮತ್ತೊಬ್ಬ ಯುವಕ ಜಬೀದುಲ್ಲಾ (22) ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೂವರೂ ಯುವಕರು ಸ್ನೇಹಿತರಾಗಿದ್ದು, ಅಫ್ತಾಬ್‌ ವೆಲ್ಡಿಂಗ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಇನ್ನಿಬ್ಬರು ಫ‌ುಡ್‌ ಡೆಲಿವರಿ ಬಾಯ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ.

ಶುಕ್ರವಾರ ಸಂಜೆ 5.30ರ ಸುಮಾರಿಗೆ ಮೂವರೂ ಯಲಹಂಕ ಮತ್ತು ಚನ್ನಸಂದ್ರ ನಡುವಿನ ಶಿವರಾಮ ಕಾರಂತ ಲೇಔಟ್‌ನ ರೈಲ್ವೆ ಹಳಿ ಸಮೀಪ ಹೋಗಿದ್ದಾರೆ. ಈ ವೇಳೆ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಪ್ಯಾಸೆಂಜರ್‌ ರೈಲು ಚಲಿಸುವಾಗ ಮೂವರೂ, ಮೊಬೈಲ್‌ನಲ್ಲಿದ್ದ ಟಿಕ್‌ಟಾಕ್‌ ಆ್ಯಪ್‌ನಲ್ಲಿ ವಿಡಿಯೋ ಮಾಡಲು ಮುಂದಾಗಿದ್ದಾರೆ.

ಈ ವೇಳೆ ವೇಗವಾಗಿ ಬರುತ್ತಿದ್ದ ರೈಲು ಯುವಕರಿಗೆ ತಾಗಿದ ರಭಸಕ್ಕೆ ಅಫ್ತಾಬ್‌ ಮತ್ತು ಮೊಹಮ್ಮದ್‌ ಮತೀನ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ಅಫ್ತಾಬ್‌ ಮೃತದೇಹ ರೈಲ್ವೆ ಹಳಿಯಿಂದ ಸುಮಾರು 100 ಮೀಟರ್‌ ದೂರಕ್ಕೆ ಹಾಗೂ ಮೊಹಮ್ಮದ್‌ ಮತೀನ್‌ ದೇಹ ಸುಮಾರು 20 ಅಡಿ ದೂರಕ್ಕೆ ಹಾರಿ ಬಿದ್ದಿದೆ.

ಅವಘಡದಲ್ಲಿ ತಲೆಗೆ ಪೆಟ್ಟು ಬಿದ್ದಿರುವ ಜಬೀದುಲ್ಲಾ ಸ್ಥಿತಿ ಕೂಡ ಗಂಭೀರವಾಗಿದೆ. ಯುವಕರು ಟಿಕ್‌ಟಾಕ್‌ ವಿಡಿಯೋ ಮಾಡುವಾಗ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ತಿಳಿಸಿದರು.

ಇತ್ತೀಚೆಗಷ್ಟೇ ತುಮಕೂರಿನಲ್ಲಿ ಯುವಕನೊಬ್ಬ ಟಿಕ್‌ಟಾಕ್‌ ವಿಡಿಯೋಗಾಗಿ ಜಂಪ್‌ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದ. ಆ ಘಟನೆ ನೆನಪು ಮಾಸುವ ಮುನ್ನವೇ ಇದೀಗ ನಗರದಲ್ಲಿ ಇಬ್ಬರು ಯುವಕರು ಅದೇ ಟಿಕ್‌ಟಾಕ್‌ ವಿಡಿಯೋ ಮಾಡಲು ಹೋಗಿ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.