ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಭ್ಯಾಸ

Team Udayavani, Oct 6, 2019, 3:05 AM IST

sringeri

ಶೃಂಗೇರಿ: ಶಾರದಾಂಬೆಗೆ ಶನಿವಾರ ವೀಣಾ ಶಾರದಾ ಅಲಂಕಾರ ಮಾಡಲಾಗಿತ್ತು. ಶರನ್ನವರಾತ್ರಿ ಆಶ್ವಯುಜ ಶುಕ್ಲ ಸಪ್ತಮಿ ದಿನವಾದ ಶನಿವಾರ, ಶಾರದಾ ಪೀಠದಲ್ಲಿ ತಾಯಿ ಶಾರದೆಯು ಕರದಲ್ಲಿ ಪುಸ್ತಕ, ಜ್ಞಾನ ಮುದ್ರೆ, ಅಮೃತ ಕಲಶ ಹಾಗೂ ವೀಣೆಯನ್ನು ಹಿಡಿದು ಭಕ್ತರಿಗೆ ಆಶೀರ್ವದಿಸಿದಳು. ಅಲ್ಲದೆ, ಮಠದ ನರಸಿಂಹ ವನದ ಗುರುಭವನದಲ್ಲಿ ವಿಶ್ವದ ಬೃಹತ್‌ ವೀಣೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಶ್ರೀಚಕ್ರ ಪೂಜೆ: ಜಗದ್ಗುರುಗಳು ಪ್ರಾತಃಕಾಲದ ಆಹಿ°ಕ ಅನುಷ್ಠಾನ ನಂತರ ಗುರು ಪಾದುಕೆಗಳಿಗೆ, ಶ್ರೀ ಚಕ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹಿರಿಯ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿಯರು ಗುರು ನಿವಾಸದಿಂದ ಆಗಮಿಸಿ, ಮಠದ ಎಲ್ಲಾ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಶಾರದಾಂಬಾ ದೇಗುಲಕ್ಕೆ ತೆರಳಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಹಾಮಂಗಳಾರತಿ ನಂತರ ಭಕ್ತರಿಗೆ ಪ್ರಸಾದ ನೀಡಿದರು.

ಕಿರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು ದೋಣಿಯಲ್ಲಿ ತುಂಗಾ ನದಿ ದಾಟಿ, ಗಂಗಾ ಪೂಜೆ ನೆರವೇರಿಸಿದ ಬಳಿಕ ವಾದ್ಯಮೇಳದೊಂದಿಗೆ ಮಠದ ಹೊರ ಪ್ರಾಕಾರ ಮತ್ತು ಒಳ ಪ್ರಾಕಾರದ ದೇಗುಲಗಳಿಗೆ ಆಗಮಿಸಿ, ಪೂಜೆ ಸಲ್ಲಿಸಿದರು. ನಂತರ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಮಂಗಳಾರತಿ ಸ್ವೀಕರಿಸಿದರು. ಜಗದ್ಗುರುಗಳು ಶಾರದಾಂಬೆಗೆ ಪೂಜೆ ಸಲ್ಲಿಸಿದ ಬಳಿಕ, ಶ್ರೀ ಶಾರದಾ ದೇಗುಲದಲ್ಲಿ ಮಠದ ಆಡಳಿತಾ ಧಿಕಾರಿ ಗೌರಿಶಂಕರ್‌ ಅವರು ಗುರು ಪಾದುಕೆ ಹಾಗೂ ಸರಸ್ವತಿ ಪೂಜೆ ನೆರವೇರಿಸಿದರು.

ಸರಸ್ವತಿ ಪೂಜೆ, ಮಕ್ಕಳಿಗೆ ಅಕ್ಷರಭ್ಯಾಸ: ಶನಿವಾರ ಮೂಲಾ ನಕ್ಷತ್ರದ ಪ್ರಯುಕ್ತ ಸರಸ್ವತಿ ಪೂಜೆ ಏರ್ಪಡಿಸಲಾಗಿತ್ತು. ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಮಕ್ಕಳಿಗೆ ಅಕ್ಷರಭ್ಯಾಸ ಮಾಡಿಸಿದರು. ಅಲ್ಲದೆ, ಮಠದ ಯಾಗಶಾಲೆಯಲ್ಲಿ ಹೋಮ, ಪಾರಾಯಣ, ಸುಹಾಸಿನಿ ಪೂಜೆ ಸಹಿತ ಅನೇಕ ಧಾರ್ಮಿಕ ಕೈಂಕರ್ಯಗಳು ನಡೆದವು.

ಕಿರಿಯ ಶ್ರೀಗಳ ದರ್ಬಾರ್‌: ರಾತ್ರಿ ನಡೆದ ದಿಂಡಿ ದೀಪಾರಾಧನೆಯಲ್ಲಿ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು ದರ್ಬಾರ್‌ ನಡೆಸಿದರು. ದೇವಿಯ ಉತ್ಸವ ಮೂರ್ತಿಯನ್ನು ಮಠದ ಒಳ ಪ್ರಾಕಾರದಲ್ಲಿ ಸ್ವರ್ಣ ರಥದಲ್ಲಿ ಕುಳ್ಳಿರಿಸಿ 3 ಸುತ್ತು ಪ್ರದಕ್ಷಿಣೆ ಹಾಕಲಾಯಿತು. ನಂತರ, ಜಗದ್ಗುರುಗಳು ಮಹಾಮಂಗಳಾರತಿ ಸ್ವೀಕರಿಸಿದರು. ಮೂಲಾ ನಕ್ಷತ್ರದ ದಿನ ರಾತ್ರಿ ನಡೆಯುವ ಜಗದ್ಗುರುಗಳ ರಾಜ ದರ್ಬಾರಿನಲ್ಲಿ ಮಠಕ್ಕೆ ದತ್ತಿ ಕಾಣಿಕೆಗಳನ್ನು ನೀಡಿದ ಮಹಾರಾಜರ ಹೆಸರಿನಲ್ಲಿ ದೇವಿಗೆ ಕಾಣಿಕೆ ಸಮರ್ಪಣೆ ನಡೆಯಿತು. ಶನಿವಾರದಿಂದ ಮಹಾನವಮಿವರೆಗೆ ಪ್ರತಿನಿತ್ಯ ರಾತ್ರಿ ದರ್ಬಾರಿನ ನಂತರ ಶ್ರೀಗಳವರು ಆಸೀನರಾಗಿದ್ದ ಸ್ವರ್ಣ ಸಿಂಹಾಸನಕ್ಕೆ ಪೂಜೆ ಸಲ್ಲಿಸಲಾಗುತ್ತದೆ.

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.