ಸಿಂಗ್, ಸೋನಿಯಾ ಭೇಟಿಯಾದ ಹಸೀನಾ
Team Udayavani, Oct 7, 2019, 6:20 AM IST
ಹೊಸದಿಲ್ಲಿ: ಭಾರತ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರವಿವಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ, ಎರಡೂ ದೇಶಗಳಿಗೆ ಸಂಬಂಧಿಸಿದ ವಿಚಾರಗಳ ಕುರಿತು ಚರ್ಚಿಸಿದ್ದಾರೆ. ಅರ್ಧ ಗಂಟೆ ಕಾಲ ಈ ಮಾತುಕತೆ ನಡೆದಿದ್ದು, ಈ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ, ಆನಂದ್ ಶರ್ಮಾ ಮತ್ತಿತರರಿದ್ದರು. ಪ್ರಿಯಾಂಕಾರನ್ನು ನೋಡುತ್ತಿದ್ದಂತೆ ಹಸೀನಾ ಅವರು ಅತ್ಯಂತ ಆತ್ಮೀಯವಾಗಿ ಆಲಿಂಗಿಸಿಕೊಂಡಿದ್ದು ಕಂಡುಬಂತು. ತದನಂತರ ಟ್ವೀಟ್ ಮಾಡಿದ ಪ್ರಿಯಾಂಕಾ, “ದೀರ್ಘಕಾಲದಿಂದ ಭೇಟಿ ಯಾಗಬೇಕೆಂದು ನಾನು ಕಾಯುತ್ತಿದ್ದ ಹಸೀನಾಜೀಯಿಂದ ನನಗಿಂದು ವಿಳಂಬವಾದ ಆಲಿಂಗನ ಸಿಕ್ಕಿತು. ಅವರು ಯಾವತ್ತೂ ನನಗೆ ಸ್ಫೂರ್ತಿಯ ಸೆಲೆಯಿದ್ದಂತೆ’ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ