ಎಪಿಪಿ ನೇಮಕಾತಿ ಅಕ್ರಮ: ಮಾಹಿತಿ ಕೇಳಿದ ಕೋರ್ಟ್‌

Team Udayavani, Oct 10, 2019, 3:06 AM IST

court-desicion

ಬೆಂಗಳೂರು: 2013-14ನೇ ಸಾಲಿನಲ್ಲಿ ನಡೆದ 197 ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳ (ಎಪಿಪಿ) ನೇಮಕಾತಿಯ ಉತ್ತರ ಪತ್ರಿಕೆಗಳನ್ನು ತಿರುಚಲಾಗಿದ್ದು, ಮೌಲ್ಯಮಾಪನ ಮಾಡಿದ್ದ ಹೈಕೋರ್ಟ್‌ನ ನ್ಯಾಯಮೂರ್ತಿಗಳ ಕೈಬರಹ ಹಾಗೂ ಸಹಿಯನ್ನು ನಕಲು ಮಾಡಲಾಗಿದೆ ಎಂದು ಲೋಕಾಯುಕ್ತ ಸಂಸ್ಥೆ ಹೈಕೋರ್ಟ್‌ಗೆ ಬುಧವಾರ ತಿಳಿಸಿದೆ.

ಈ ಕುರಿತು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಪಕ ಎಸ್‌.ಆರ್‌. ಹಿರೇಮಠ ಹಾಗೂ ವಕೀಲೆ ಸುಧಾ ಕಾಟವಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ. ಎ.ಎಸ್‌. ಓಕಾ ಹಾಗೂ ನ್ಯಾ. ಎಸ್‌.ಆರ್‌. ಕೃಷ್ಣಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು.

ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲ ವೆಂಕಟೇಶ್‌ ಎಸ್‌. ಅರಬಟ್ಟಿ ವಾದ ಮಂಡಿಸಿ, 197 ಎಪಿಪಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಉತ್ತರ ಪತ್ರಿಕೆಗಳನ್ನು ತಿರುಚಲಾಗಿದ್ದು, ಮೌಲ್ಯಮಾಪನ ಮಾಡಿದ್ದ ಹೈಕೋರ್ಟ್‌ ನ್ಯಾಯಮೂರ್ತಿಗಳ ಕೈಬರಹ ಮತ್ತು ಸಹಿಯನ್ನು ನಕಲು ಮಾಡಿರುವುದು ವಿಧಿವಿಜ್ಞಾನ ಪ್ರಯೋಗಾಲಯ ದೃಢಪಡಿಸಿದೆ. ಕಳಂಕಿತ 61 ಅಭ್ಯರ್ಥಿಗಳು ಮತ್ತು 2 ಅಧಿಕಾರಿಗಳ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸುವಂತೆ ಉಪಲೋಕಾಯುಕ್ತರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಕಳಂಕಿತರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎನ್ನುವುದು ಲೋಕಾಯುಕ್ತದ ಶಿಫಾರಸು ಆಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಕಳಂಕಿತರ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತೀರಿ? ಎಂದು ಸರ್ಕಾರಿ ವಕೀಲರನ್ನು ಪ್ರಶ್ನಿಸಿತು. ಸರ್ಕಾರಿ ವಕೀಲರು ಉತ್ತರಿಸಿ, ಈ ಕುರಿತು ಸರ್ಕಾರದಿಂದ ಅಗತ್ಯ ಮಾಹಿತಿ ಪಡೆದು ತಿಳಿಸಲಾಗುವುದು. ಅದಕ್ಕಾಗಿ ಕಾಲಾವಕಾಶ ಕೋರಿದರು. ಪೀಠ ವಿಚಾರಣೆಯನ್ನು ಅ.16ಕ್ಕೆ ಮುಂದೂಡಿತು.

ಅಭಿಯೋಜನಾ ಇಲಾಖೆಯ 197 ಎಪಿಪಿ ಹುದ್ದೆಗಳ ಭರ್ತಿಗೆ 2013ರಲ್ಲಿ ಪೂರ್ವಭಾವಿ ಹಾಗೂ 2014ರಲ್ಲಿ ಮುಖ್ಯಪರೀಕ್ಷೆ ನಡೆದಿತ್ತು. ಅಕ್ರಮ ನಡೆದಿರುವ ವಿಚಾರ ಹೊರಬಂದಿತ್ತು. ಸಮಗ್ರ ತನಿಖೆ ನಡೆಸಿ 2018ರ ಮಾ.15ರಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ, ಯಾರಿಗೂ ಶಿಕ್ಷೆ ಆಗಿಲ್ಲ. ಸರ್ಕಾರವೂ ಕ್ರಮ ಕೈಗೊಂಡಿಲ್ಲ. ಹೀಗಾಗಿ, 197 ಎಪಿಪಿಗಳ ನೇಮಕಾತಿ ಪಟ್ಟಿ ರದ್ದುಪಡಿಸಬೇಕು. ಹೊಸದಾಗಿ ಆರೋಪಪಟ್ಟಿಯಲ್ಲಿ ಎಪಿಪಿಗಳ ವಿರುದ್ಧ ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.