ನಿರಂತರ ಸುರಿದ ಮಳೆಗೆ ಕೆರೆ, ಚೆಕ್‌ಡ್ಯಾಂ ಭರ್ತಿ

ಬರದ ನಾಡಿನಲ್ಲಿ ನೀರಿನ ಬವಣೆಗೆ ತಾತ್ಕಾಲಿಕ ಪರಿಹಾರ „ ರೈತರ ಮೊಗದಲ್ಲಿ ಮೂಡಿದ ಮಂದಹಾಸ

Team Udayavani, Oct 10, 2019, 4:50 PM IST

10-October-19

ಮುಳಬಾಗಿಲು: ಜಿಲ್ಲೆಯ ಬರಪೀಡಿತವಾಗಿರುವ ತಾಲೂಕಿನಲ್ಲಿ ಕಳೆದ ಎರಡು-ಮೂರು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಚೆಕ್‌ಡ್ಯಾಂ, ನಾಲೆ, ಕೆರೆಗಳು ಭರ್ತಿಯಾಗುವ ಹಂತದಲ್ಲಿವೆ. ಜತೆಗೆ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಈ ಭಾಗದ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಸಿಗಲಿದೆ.

ರೈತರ ಮೊಗದಲ್ಲಿ ಮಂದಹಾಸ: ತಾಲೂಕಿನಲ್ಲಿ ಮಳೆಯ ಕೊರತೆಯಿಂದ ಕಮರುತ್ತಿದ್ದ ಬೆಳೆಗಳಿಗೆ ಜೀವಕಳೆ ಬಂದಿದೆ. ತಾಲೂಕಿನ ರೈತರು ಬೆಳೆದಿದ್ದ ಭತ್ತ, ರಾಗಿ, ನೆಲಗಡಲೆ ಸೇರಿದಂತೆ ದ್ವಿದಳ ದಾನ್ಯಗಳಾದ ತೊಗರಿ, ಅವರೆ, ಅಲಸಂಧೆಗಳ ಉತ್ತಮ ಫ‌ಸಲು ದೊರೆಯುವ ನಿರೀಕ್ಷೆ ಮೂಡಿದೆ. ಇದರಿಂದಾಗಿ ರೈತರು, ಮತ್ತೊಮ್ಮೆ ಬೆಳೆ ನಷ್ಟದ ಸಂಕಷ್ಟದಿಂದ ಪಾರಾಗಿದ್ದಾರೆ. ಜತೆಗೆ ತಾಲೂಕಿನಲ್ಲಿರುವ ಬಹುತೇಕ ಕೆರೆಗಳು, ಚೆಕ್‌ಮ್‌ಂಗಳಿಗೆ ನೀರು ಹರಿದು ಬಂದಿರವುದು ರೈತರಲ್ಲಿ ಮತ್ತಷ್ಟು ಸಂತಸ ತಂದಿದೆ.

ತಾಲೂಕಿನಲ್ಲಿ ಮಳೆಯ ಪ್ರಮಾಣ: ಜೂನ್‌ನಲ್ಲಿ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗುತ್ತದೆ. ಆದರೆ ತಾಲೂಕಿನಲ್ಲಿ ಮಳೆಯ ಕೊರತೆ ಎದುರಾಗಿ, ಬರಪೀಡಿತವಾಗಿತ್ತು. ತಾಲೂಕಿನಲ್ಲಿ ಏಪ್ರಿಲ್‌ನಲ್ಲಿ 30 ಮಿ. ಮೀ., ಮೇ ತಿಂಗಳಿನಲ್ಲಿ 71 ಮಿ.ಮೀ., ಮತ್ತು ಜೂನ್‌ ತಿಂಗಳಿನಲ್ಲಿ ಆವಣಿ ಹೋಬಳಿಯಲ್ಲಿ 125 ಮಿ.ಮೀ., ಮಳೆಯಾಗಿತ್ತು. ಭೈರಕೂರು 105 ಮಿ.ಮೀ., ದುಗ್ಗಸಂದ್ರ 130 ಮಿ.ಮೀ., ಕಸಬಾ 113 ಮಿ. ಮೀ., ತಾಯಲೂರು 194 ಮಿ.ಮೀ., ಮಳೆಯಾಗಿದ್ದರಿಂದ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಂಡಿದ್ದರು.

ಬಿತ್ತನೆಯಲ್ಲೂ ಕೊರತೆ: ತಾಲೂಕಿನಲ್ಲಿ ಒಟ್ಟಾರೆ 25,167 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಬೇಕಿತ್ತು. ಆದರೆ ಮಳೆ ಕೊರತೆ ಯಿಂದ ಕೇವಲ 3,147 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಇದೂ ಕೂಡ ಮಳೆ ಕೊರತೆಯಿಂದ ಬಾಡಿಹೋಗುವ ಸಂಕಷ್ಟ ಎದುರಾಗಿತ್ತು. ಆದರೆ ಸತತ ಎರಡ್ಮೂರು ದಿನಗಳಿಂದ ಸುರಿಯುತ್ತಿ ರುವ ಮಳೆಗೆ ಮತ್ತೆ ಬೆಳೆಗಳಿಗೆ ಕಳೆ ಬಂದಿದ್ದು, ಉತ್ತಮ ಫ‌ಸಲಿನ ನಿರೀಕ್ಷೆಯಿದೆ. ಮುಂದಿನ ದಿನಗಳಲ್ಲಿ ಇದೇ ರೀತಿ ಮಳೆ ಬಂದರೆ ರಾಗಿ ಬೆಳೆಯು ಉತ್ತಮ ಫ‌ಸಲು ಬರಲಿದೆ ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.

ಚೆಕ್‌ ಡ್ಯಾಂ, ಕೆರೆ, ನಾಲೆಗಳು ಭರ್ತಿ: ಸತತ ಬರಗಾಲದಿಂದ ತತ್ತರಿಸಿದ್ದ ತಾಲೂಕು, ಕೇವಲ ಎರಡ್ಮೂರು ದಿನಗಳಲ್ಲಿ ಭರಪೂರ ಮಳೆಯಿಂದ ತಣಿದಿದೆ. ಇನ್ನೂ ಹೆಚ್ಚು ಮಳೆ ಬೀಳುವ ಸಾಧ್ಯತೆಯಿದ್ದು, ತಾಲೂಕಿನ ನೀರಿನ ಸಮಸ್ಯೆ ತಾತ್ಕಾಲಿಕವಾಗಿ ಪರಿಹಾರವಾಗಲಿದೆ.

ನಿರಂತರ ಮಳೆಯಿಂದಾಗಿ ಕೆರೆ, ಚೆಕ್‌ಡ್ಯಾಂ, ನಾಲೆ, ಕಾಲುವೆಗಳು ಸಂಪೂರ್ಣ ಭರ್ತಿಯಾಗುವ ಹಂತದಲ್ಲಿವೆ. ಜಂಗಾಲಹಳ್ಳಿ ಬಳಿ ನಿರ್ಮಾಣ ಮಾಡಲಾಗಿರುವ ನಾಲಾ ಬದು, ಚೆಕ್‌ ಡ್ಯಾಂ, ಕಾಲುವೆ ತುಂಬಿವೆ. ಜಿಲ್ಲೆಯ ಅಂತರ್ಜಲ ಹೆಚ್ಚಿಸಲು ಜಿಪಂ ಸಿಇಒ ಜಿ. ಜಗದೀಶ್‌, ಸಾಕಷ್ಟು ಮುತುವರ್ಜಿ ವಹಿಸಿ 600 ಚೆಕ್‌ಡ್ಯಾಂ ನಿರ್ಮಾಣಕ್ಕೆ ಕ್ರಮಕೈಗೊಂಡಿದ್ದರು. ದುಗ್ಗಸಂದ್ರ ಹೋಬಳಿಯ ಕೂತಾಂಡಹಳ್ಳಿಯಲ್ಲಿ ನಿರ್ಮಿಸಲಾಗಿರುವ ಚೆಕ್‌ ಡ್ಯಾಂ ಮಳೆ ನೀರಿನಿಂದ ಭರ್ತಿಯಾಗಿದೆ.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.