ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದರೂ ಸಾವಿನ ವರದಿ ಬಗ್ಗೆ ಸ್ಪಷ್ಟತೆಯಿಲ್ಲ

3 ತಿಂಗಳಲ್ಲಿ 12ಕ್ಕೂ ಅಧಿಕ ಸಾವು; 3 ಪ್ರಕರಣವಷ್ಟೇ ದೃಢ

Team Udayavani, Oct 11, 2019, 6:00 AM IST

u-30

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಡೆಂಗ್ಯೂ ಹಿನ್ನೆಲೆಯಲ್ಲಿ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಅಧಿಕವಾಗುತ್ತಿದ್ದು, ಜ್ವರ ನಿಯಂತ್ರಣಕ್ಕೆ ಬರುತ್ತಿಲ್ಲ.

ದ.ಕ. ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಶಂಕಿತ ಡೆಂಗ್ಯೂ ಜ್ವರದಿಂದ 12ಕ್ಕೂ ಹೆಚ್ಚು ಮಂದಿ ಕಳೆದ ಮೂರ್‍ನಾಲ್ಕು ತಿಂಗಳ ಅವಧಿಯೊಳಗೆ ಮೃತಪಟ್ಟಿದ್ದಾರೆ. ಬಹುಶಃ ಇತ್ತೀಚಿನ ಕೆಲವು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಸಂಖ್ಯೆಯಲ್ಲಿ ಡೆಂಗ್ಯೂವಿನಂಥ ಜ್ವರ ಬಾಧೆಯಿಂದ ಸಾವು ಸಂಭವಿಸಿದೆ. ಕಳೆದ ವರ್ಷ ಸುಮಾರು ಏಳು ಮಂದಿ ಡೆಂಗ್ಯೂ ಬಾಧೆಯಿಂದ ಮೃತಪಟ್ಟಿದ್ದರು. ಮೃತರ ಪೈಕಿ ಬಹುತೇಕರು ಡೆಂಗ್ಯೂ ಜ್ವರದಿಂದಲೇ ಮೃತಪಟ್ಟಿದ್ದಾರೆಂದು ಸಂಬಂಧಿಕರು, ಕುಟುಂಬಿಕರು ಹೇಳಿದ್ದಾರೆ. ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ಶಂಕಿತ ಪ್ರಕರಣ ಎಂದೋ, ಬೇರೆ ಕಾಯಿಲೆಯಿಂದ ಸಾವು ಸಂಭವಿಸಿದೆ ಎಂದೇ ಹೇಳುವ ಮೂಲಕ ಏನೂ ಆಗಿಲ್ಲ ಎಂಬುದಾಗಿ ಬಿಂಬಿಸುತ್ತಿದ್ದಾರೆ.

ಆಡಳಿತದ ನಿರಾಸಕ್ತಿ
ಜಿಲ್ಲೆಯಲ್ಲಿ ಈ ಬಾರಿ ಡೆಂಗ್ಯೂ ಇಷ್ಟೊಂದು ವ್ಯಾಪಕವಾಗಿ ವ್ಯಾಪಿಸಿದ್ದರೂ ಅದರ ನಿಯಂತ್ರಣ ಅಥವಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವತ್ತ ಜಿಲ್ಲಾಡಳಿತವಾಗಲಿ, ಆರೋಗ್ಯ ಇಲಾಖೆಯಾಗಲಿ ಇತ್ತೀಚಿನ ದಿನಗಳಲ್ಲಿ ಅಷ್ಟಾಗಿ ಗಮನಹರಿಸುತ್ತಿಲ್ಲ ಎನ್ನುವುದು ವಾಸ್ತವ.

ಡೆಂಗ್ಯೂನಿಂದಾಗಿ 1,000ಕ್ಕೂ ಹೆಚ್ಚು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಈಗಲೂ ದಾಖಲಾಗುವವರ ಸಂಖ್ಯೆ ಮುಂದುವರಿಯುತ್ತಿದೆ. ಆದರೆ ಇಲಾಖೆ ಅಧಿಕಾರಿಗಳು ಕಳೆದೆರಡು ದಿನಗಳಲ್ಲಿ ಸುಮಾರು 10-20 ಮಂದಿಯಷ್ಟೇ ದಾಖಲಾಗಿದ್ದು, ಡೆಂಗ್ಯೂ ನಿಯಂತ್ರಣದಲ್ಲಿದೆ ಎನ್ನುತ್ತಾರೆ.

ಇಲಾಖೆಗೆ ಮಾಹಿತಿ ಇಲ್ಲ
ಖಾಸಗಿ ಸುದ್ದಿ ವಾಹಿನಿ ಕೆಮರಾಮನ್‌ ನಾಗೇಶ್‌ ಪಡು, ಕಡಬದ ವೀಣಾ ನಾಯಕ್‌, ವಿದ್ಯಾರ್ಥಿನಿ ಶ್ರದ್ಧಾ ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ದೃಢಪಡಿಸಿದೆ. ಆದರೆ ಪುತ್ತೂರಿನ ಉದ್ಯಮಿ ಪ್ರಶಾಂತ್‌ ಸರಳಾಯ, ತೊಕ್ಕೊಟ್ಟಿನ ಹರ್ಷಿತ್‌ ಗಟ್ಟಿ, ಗಣೇಶ್‌ ಕರ್ಕೇರ, ವಿದ್ಯಾರ್ಥಿ ಕೃಷ್‌, ಕಡಬದ ಶ್ರೀಧರ ಗೌಡ, ಬೋಳಾರ ಮುಳಿಹಿತ್ಲು ನಿವಾಸಿ ಕಾರ್ತಿಕ್‌ ಶೆಟ್ಟಿ, ಬೆಂಗ್ರೆಯ ಎಂಟು ವರ್ಷದ ಬಾಲಕಿ, ಪುತ್ತೂರಿನ ರಂಜನ್‌ ಹಾಗೂ ಕಳೆದ ಸೋಮವಾರ ಮೃತಪಟ್ಟ ಪಾಂಡೇಶ್ವರದ ಸುಧಾಕರ ಆಚಾರ್ಯ ಅವರ ಸಾವಿನ ಕುರಿತು ಆರೋಗ್ಯ ಇಲಾಖೆಯ ಬಳಿ ಸರಿಯಾದ ಮಾಹಿತಿ ಇಲ್ಲ.

ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣದಲ್ಲಿದೆ. ಈಗ ಯಾವ ಸ್ಥಿತಿಯಲ್ಲಿದೆ ಎಂಬ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾಹಿತಿ ತರಿಸಿಕೊಂಡು ಆ ಬಗ್ಗೆ ಗಮನ ಹರಿಸಲಾಗುವುದು.
-ಸಿಂಧೂ ರೂಪೇಶ್‌, ಜಿಲ್ಲಾಧಿಕಾರಿ

ಆತಂಕ ಬೇಡ
ಜಿಲ್ಲೆಯಲ್ಲಿ ಮೂವರು ಡೆಂಗ್ಯೂನಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಉಳಿದ ಕೆಲವು ಪ್ರಕರಣಗಳ ವರದಿ ಕೈ ಸೇರಿದ್ದು, ಯಾವ ಸಾವೂ ಡೆಂಗ್ಯೂ ಜ್ವರದಿಂದ ಸಂಭವಿಸಿಲ್ಲ. ಎಲ್ಲವನ್ನೂ ಡೆಂಗ್ಯೂ ಜ್ವರ ಎಂದು ನಿರ್ಧರಿಸುವುದು ಸರಿಯಲ್ಲ. ದೃಢಪಡಿಸುವುದಕ್ಕೆ ಕೆಲವು ಪ್ರಕ್ರಿಯೆಗಳಿರುತ್ತವೆ. ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಸದ್ಯ ನಿಯಂತ್ರಣದಲ್ಲಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ.
-ಡಾ| ರಾಮಕೃಷ್ಣ ರಾವ್‌, ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.