ಅನ್ನದಾತರ ವಿವಿಧ ಬೇಡಿಕೆ ಈಡೇರಿಸಿ


Team Udayavani, Oct 12, 2019, 4:32 PM IST

mandya-tdy-2

ಮದ್ದೂರು: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘಟನೆಯ(ಮೂಲ ಸಂಘಟನೆ) ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿಮಂದಿರದ ಬಳಿ ಜಮಾಯಿಸಿದ ಸಂಘಟನೆ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರಲ್ಲದೇ ಆಡಳಿತ ನಡೆಸುವ ಸರ್ಕಾರಗಳು ರೈತರನ್ನು ನಿರ್ಲಕ್ಷಿಸಿದ್ದು ಕೂಡಲೇ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ವಿಳಂಬ ಧೋರಣೆ: ಪಟ್ಟಣದ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸಾರ್ವಜನಿಕ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ನಡೆಯದೆ ಪ್ರತಿನಿತ್ಯ ದೂರದ ಗ್ರಾಮಗಳಿಂದ ಅಲೆದಾಡುತ್ತಿದ್ದು, ಜಿಲ್ಲಾಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ತಾಲೂಕಿನಲ್ಲಿ ಕಟಾವಿಗೆ ಬಂದಿರುವ ಕಬ್ಬು ಅರಿಸಲು ಎರಡೂ ಕಾರ್ಖಾನೆಗಳ ಅಧಿಕಾರಿಗಳು ಕಬ್ಬು ಸರಬರಾಜು ಮಾಡಿಸಿಕೊಳ್ಳಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ದೂರಿದರು.

ರೈತ ವಿರೋಧಿ ನೀತಿ: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರೈತಪರ ಯೋಜನೆಗಳನ್ನು ಜಾರಿಗೊಳಿಸದೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ತಾಲೂಕು ಕಚೇರಿಯಲ್ಲಿ ವಿಧವಾ ವೇತನ, ವೃದ್ಧಾಪ್ಯ, ವಿಕಲಚೇತನ, ಆರ್‌ಟಿಸಿ ತಿದ್ದುಪಡಿ, ಭೂ ದಾಖಲಾತಿಗೆ ಸಂಬಂಧಿಸಿದಂತೆ ಅರ್ಜಿಗಳು ಸಮರ್ಪಕವಾಗಿ ವಿಲೇವಾರಿಯಾಗದೆ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಹಣದ ದಾಹಕ್ಕೆ ಮುಗಿಬಿದ್ದಿದ್ದಾರೆ ಎಂದು ದೂರಿದರು.

ಬೆಳೆ ನಷ್ಟ ಪರಿಹಾರ: ಫ‌ಸಲ್‌ ಬಿಮಾ ಯೋಜನೆಯಡಿ ರೈತರಿಗೆ ಯಾವುದೇ ಯೋಜನೆಗಳು ತಲುಪುತ್ತಿಲ್ಲ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ವಿತರಿಸಲು ಜಿಲ್ಲಾಡಳಿತ ಮುಂದಾಗಬೇಕೆಂದು ಆಗ್ರಹಿಸಿದರು.

ಪ್ರತಿಭಟನೆ: ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಸಕ್ಕರೆ ಕಾರ್ಖಾನೆಗಳು ಸಮರ್ಪಕವಾಗಿ ಕಬ್ಬು ನುರಿಸದ ಹಿನ್ನೆಲೆಯಲ್ಲಿ ನ.4ರಂದು ರೈತ ಸಂಘಟನೆ ವತಿಯಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕಬ್ಬು ಬೆಳೆಗಾರರು ಭಾಗವಹಿಸಬೇಕೆಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ, ತಾಲೂಕು ಅಧ್ಯಕ್ಷ ರಮೇಶ್‌, ಉಪಾಧ್ಯಕ್ಷ ಕೆಂಪೇಗೌಡ, ಪದಾಧಿಕಾರಿಗಳಾದ ರಾಮಣ್ಣ, ರಾಮೇಗೌಡ, ಕೆ.ಜಿ.ಉಮೇಶ್‌, ಸೋ.ಸಿ.ಪ್ರಕಾಶ್‌, ಕಾಳಯ್ಯ, ನಿಂಗೇಗೌಡ, ಚಿಕ್ಕಣ್ಣ, ಸತೀಶ್‌, ಕಿರಣ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.