ಕೊಡಗಿನ ಜನಪ್ರತಿನಿಧಿಗಳಿಂದ ಮಾಜಿ ಸೈನಿಕರ ಅವಗಣನೆ: ಕಾರ್ಯಪ್ಪ

Team Udayavani, Oct 15, 2019, 5:16 AM IST

karyappa

ಮಡಿಕೇರಿ: ಕೊಡಗಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಮ್ಮ ಪ್ರತಿಷ್ಠೆ ಮತ್ತು ಸ್ವಾರ್ಥಕ್ಕಾಗಿ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್‌ ತಿಮ್ಮಯ್ಯ ಅವರ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆಯೇ ಹೊರತು ದೇಶಕ್ಕಾಗಿ ಗಡಿ ಕಾದು ಬಂದ ಮಾಜಿ ಸೈನಿಕರ ಬಗ್ಗೆ ಯಾವುದೇ ಕಾಳಜಿ ತೋರುತ್ತಿಲ್ಲವೆಂದು ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಿವೃತ್ತ ಮೇಜರ್‌ ಜನರಲ್‌ ಬಿ.ಎ.ಕಾರ್ಯಪ್ಪ ಆರೋಪಿಸಿದ್ದಾರೆ.

ನಗರದ ರೋಟರಿ ಸಭಾಂಗಣದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೊಡಗಿನ ನಿವೃತ್ತ ಸೈನಿಕರಿಗೆ ಸರ್ಕಾರದ ಸೌಲಭ್ಯ ಕಲ್ಪಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫ‌ಲರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪರಮವೀರ ಚಕ್ರ, ಶೌರ್ಯಚಕ್ರ ಪಡೆದ ಯೋಧರಿಗೆ ಹರಿಯಾಣ ಸರಕಾರ ಹೆಚ್ಚು ಸೌಲಭ್ಯಗಳನ್ನು ಒದಗಿಸುತ್ತಿದೆ, ಆದರೆ ಕರ್ನಾಟಕ ಸರಕಾರ ಮಾಜಿ ಸೈನಿಕರನ್ನು ನಿರ್ಲಕ್ಷಿಸಿದೆ ಎಂದು ಟೀಕಿಸಿದರು. ಮಾಜಿ ಸೈನಿಕರಿಗೆ ಮಂಜೂರು ಮಾಡಿರುವ ಭೂಮಿಯನ್ನು ಕಸಿದುಕೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು, ಈ ಕ್ರಮ ಮುಂದುವರೆದರೆ ಸಂಘದ ವತಿಯಿಂದ ಬೃಹತ್‌ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗುವುದು ಎಂದರು.

ಸೇನೆಯಿಂದ ನಿವೃತ್ತರಾದ ಸೈನಿಕರು ಸಂಘದ ಸದಸ್ಯತ್ವ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕಾರ್ಯಪ್ಪ, ಸಂಕಷ್ಟ ಬಂದಾಗ ಮಾತ್ರ ಸಂಘವನ್ನು ನೆನಪಿಸಿಕೊಳ್ಳುವುದು ವಿಪರ್ಯಾಸವೆಂದರು. ಸರಕಾರ ಮತ್ತು ಸಂಘದ ಮೂಲಕ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ದಾಖಲೆಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಾಗ ಹುದ್ದೆಯ ರ್‍ಯಾಂಕ್‌ಗಳನ್ನು ನಮೂದಿಸುವಂತೆ ಸಲಹೆ ನೀಡಿದರು.

ನಿವೃತ್ತ ಮೇಜರ್‌ ಮಂದಪ್ಪ ಮಾತನಾಡಿ, ದೇಶ ರಕ್ಷಣೆಗಾಗಿ ಹಗಲಿರುಳು ದುಡಿದು ನಿವೃತ್ತರಾಗುವ ಯೋಧರಿಗೆ ನಿವೃತ್ತಿ ಬದುಕಿನಲ್ಲಿ ಯಾವುದೇ ಗೌರವ ಸಿಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

ಮಾಜಿ ಸೈನಿಕರ ಸಂಘದ ಹಿರಿಯರಾದ ಮೇದಪ್ಪ, ಕಾರ್ಯದರ್ಶಿ ಗಣಪತಿ, ಚೇರಂಬಾಣೆ ಸಂಘದ ಅಧ್ಯಕ್ಷ ಸುಬೇದಾರ್‌ ಮಾದಪ್ಪ, ನಾಪೋಕ್ಲು ಸಂಘದ ಶಂಭು, ಕುಶಾಲನಗರ ಸಂಘದ ಪದ್ಮನಾಭ, ಸೋಮವಾರಪೇಟೆ ಸಂಘದ ಈರಪ್ಪ, ಸುಬ್ಬಯ್ಯ ಹಾಗೂ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ನಿವೃತ್ತ ಮೇಜರ್‌ ಓ.ಎಸ್‌.ಚಿಂಗಪ್ಪ, ಸಂಘದ ವಾರ್ಷಿಕ ವರದಿ ಹಾಗೂ 2018-19ನೇ ಸಾಲಿನ ಅಡಿಟ್‌ ಮತ್ತು ಮಂಜೂರಾತಿಯನ್ನು ಓದಿದರು.

ಇದೇ ಸಂದರ್ಭ ಸಂಘದ ಬಲವರ್ಧನೆ ಮತ್ತು ನಿವೃತ್ತ ಯೋಧರ ಯೋಗಕ್ಷೇಮದ ಬಗ್ಗೆ ಚರ್ಚಿಸಲಾಯಿತು. ಮೃತ ಯೋಧರಿಗೆ ಸಂತಾಪ ಸೂಚಿಸಲಾಯಿತು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.