ಪ್ಲಾಸ್ಟಿಕ್‌ ಬಳಸಿದರೆ ಆರಂಭದಲ್ಲೇ ಐದನೂರು ರೂ. ದಂಡ

Team Udayavani, Oct 15, 2019, 12:49 PM IST

gadaga-tdy-2

ನರಗುಂದ: ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಪ್ಲಾಸ್ಟಿಕ್‌ ಬಳಕೆ ಮತ್ತು ಮಾರಾಟ ನಿಷೇಧಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ನರಗುಂದ ಪಟ್ಟಣವನ್ನು ಪ್ಲಾಸ್ಟಿಕ್‌ ಮುಕ್ತವಾಗಿಸಲು ಸ್ಥಳೀಯ ಪುರಸಭೆ ಪಣ ತೊಟ್ಟಿದೆ.

ಪುರಸಭೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದು, ದಾಳಿ ನಡೆಸಿದ ಸಂದರ್ಭದಲ್ಲಿ ಅಂಗಡಿ ಮುಂಗಟ್ಟುಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಕಂಡುಬಂದಲ್ಲಿ ಆರಂಭದಲ್ಲಿ ಸ್ಥಳದಲ್ಲೇ ಐನೂರು ರೂಪಾಯಿ ದಂಡ ವಿಧಿಸುತ್ತಿದ್ದಾರೆ. ಸೋಮವಾರ ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಸಂಗಮೇಶ ಬ್ಯಾಳಿ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಪಟ್ಟಣದಾದ್ಯಂತ ಕಾರ್ಯಾಚರಣೆ ನಡೆಸಿದರು.

ಮಧ್ಯಾಹ್ನವರೆಗೆ ಸುಮಾರು 25 ಅಂಗಡಿಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು 12 ಅಂಗಡಿಗಳಲ್ಲಿ ದೊರೆತ ಪ್ಲಾಸ್ಟಿಕ್‌ ವಶಪಡಿಸಿಕೊಂಡು ದಂಡ ವಸೂಲಿ ಮಾಡಿದರು. ಬಳಿಕ ಪ್ಲಾಸ್ಟಿಕ್‌ ಕಡ್ಡಾಯವಾಗಿ ಬಳಸದಂತೆ ತಾಕೀತು ಮಾಡಿದರು.

ಗರಿಷ್ಠ 5 ಸಾವಿರ ದಂಡ: ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ದೊರೆತರೆ ಆರಂಭದಲ್ಲಿ 100 ರೂ.ಯಿಂದ 5 ಸಾವಿರ ರೂ. ವರೆಗೆ ಗರಿಷ್ಠ ದಂಡ ವಿಧಿಸಲಾಗುತ್ತದೆ. ಸೋಮವಾರ 12 ಅಂಗಡಿಗಳಿಗೆ ದಂಡ ವಸೂಲಿ ಮಾಡಲಾಗಿದೆ.

ಪಟ್ಟಣದಲ್ಲಿ ಮುನ್ನೆಚ್ಚರಿಕೆ ನೀಡಲಾಗಿತ್ತು. ಎರಡನೇ ಬಾರಿಗೆ ದಾಳಿ ನಡೆಸಿದಾಗ ಪ್ಲಾಸ್ಟಿಕ್‌ ದೊರೆತರೆ ನ್ಯಾಯಾಲಯ ನೊಟೀಸ್‌ ನೀಡಲಾಗುತ್ತದೆ. ಅಲ್ಲಿ ಕನಿಷ್ಠ 5 ಸಾವಿರ ರೂ. ದಂಡ ವಿಧಿಸಲಾಗುತ್ತದೆ ಎಂದು ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಸಂಗಮೇಶ ಬ್ಯಾಳಿ ತಿಳಿಸಿದರು.

ಪ್ಲಾಸ್ಟಿಕ್‌ ನಿಷೇಧ ಜಾಗೃತಿ: ಪಟ್ಟಣದ ಎಲ್ಲ ಅಂಗಡಿಗಳಲ್ಲಿ ಪುರಸಭೆಯಿಂದ ಪ್ಲಾಸ್ಟಿಕ್‌ ನಿಷೇಧ ಬಗ್ಗೆ ಮತ್ತು ಯಾವುದೇ ತೂಕದ ಪ್ಲಾಸ್ಟಿಕ್‌ ಬಳಕೆ ಮಾಡುವಂತಿಲ್ಲ. ಪರಿಸರ ಸಂರಕ್ಷಣೆಗಾಗಿ ಸಹಕರಿಸಿ ಎಂಬ ಕರಪತ್ರಗಳನ್ನು ಅಂಟಿಸಲಾಗಿದೆ ಎಂದು ಸಂಗಮೇಶ ಬ್ಯಾಳಿ ತಿಳಿಸಿದರು.ಕಿರಿಯ ಆರೋಗ್ಯ ನಿರೀಕ್ಷಕ ಎಚ್‌.ಎಲ್‌. ಲಿಂಗನಗೌಡ್ರ, ಮಹಾಂತೇಶ ಚಲವಾದಿ ಮುಂತಾದವರಿದ್ದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.