ಎಸ್‌ಸಿಪಿ, ಟಿಎಸ್‌ಪಿ ಯೋಜನೆ ದುರ್ಬಳಕೆ ಸಲ್ಲದು


Team Udayavani, Oct 17, 2019, 3:00 AM IST

scp-tsp

ಹಾಸನ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ಮೀಸಲಾಗಿರುವ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಗೆ ಆ ಜನಾಂಗದವರ ಹೊರತು ಬೇರೆ ಜನಾಂಗದವರು ಫ‌ಲಾನುಭಗಳಾಗುವಂತಿಲ್ಲ, ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಗಮನ ಹರಿಸಬೇಕೆಂದು ಶಾಸಕ ಶಿವಲಿಂಗೇಗೌಡ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಫ‌ಲಾನುಭವಿಗಳನ್ನು ಜನಸಂಖ್ಯಾ ಆಧಾರದಲ್ಲಿ ಅವಕಾಶ ನೀಡಿ ಆಯ್ಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಒತ್ತಡ ಹಾಕದಿರಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರೈತರಿಗೆ ನೀಡುತ್ತಿರುವ ಬಿತ್ತನೆ ಬೀಜಗಳು ಮತ್ತು ಹನಿ ನೀರಾವರಿಗಾಗಿ ನೀಡುವ ಪೈಪುಗಳು ಗುಣಮಟ್ಟದ್ದಾಗಿಲ್ಲ ಹಾಗಾಗಿ ನಿರ್ದಿಷ್ಟ ಕಂಪನಿಗಳಿಂದಲೇ ಪಡೆಯುವಂತೆ ಅಧಿಕಾರಿಗಳು ರೈತರಿಗೆ ಒತ್ತಡ ಹಾಕದೆ ಗುಣಮಟ್ಟ ಪರೀಕ್ಷಿಸಿ ಪಡೆದುಕೊಳ್ಳುವ ಅವಕಾಶವನ್ನು ರೈತರಿಗೆ ನೀಡಬೇಕು. ಜಿಲ್ಲಾಸ್ಪತ್ರೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗಿರುವ ಉಚಿತ ಚಿಕಿತ್ಸೆಗಳ ಬಗ್ಗೆ ಮಾಹಿತಿಯಿಲ್ಲ ಹಾಗಾಗಿ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು. ಚಿಕಿತ್ಸೆ ಪಡೆಯಲು ಜಾತಿ ಪ್ರಮಾಣ ಪತ್ರ ಕಡ್ಡಾಯ ಮಾಡುವಂತೆ ಹಿಮ್ಸ್‌ನ ಅಧಿಕಾರಿಗಳಿಗೆ ಶಾಸಕ ಶಿವಲಿಂಗೇಗೌಡ ನಿರ್ದೇಶನ ನೀಡಿದರು.

ಫ‌ಲಾನುಭವಿಗಳ ಸಂಖ್ಯೆ ಹೆಚ್ಚಿಸಿ: ಶಾಸಕ ಎ.ಟಿ. ರಾಮಸ್ವಾಮಿ ಮಾತನಾಡಿ, ರಸ್ತೆ ಬದಿಗಳಲ್ಲಿ ಕೃಷಿ ಹೊಂಡ ನಿರ್ಮಿಸುವುದನ್ನು ತಪ್ಪಿಸಬೇಕು. ಗಂಗಾ ಕಲ್ಯಾಣ ಯೋಜನೆ, ಹನಿ ನಿರಾವರಿ ಯೋಜನೆಯನ್ನು ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ತಲುಪಿಸಬೇಕು. ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿರುದ್ಯೋಗಿ ಯುವಕರಿಗಿರುವ ಟ್ಯಾಕ್ಸಿ ಯೋಜನೆಯಲ್ಲಿ ಫ‌ಲಾನುಭವಿಗಳ ಸಂಖ್ಯೆ ಹೆಚ್ಚಿಸಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಕಲಾತಂಡಗಳಿಗೆ ಪ್ರೋತ್ಸಾಹ: ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಲಭ್ಯವಿರುವ ಅನುದಾನವನ್ನು ಎಲ್ಲಾ ತಾಲೂಕುಗಳಿಗೆ ಸಮವಾಗಿ ಹಂಚಬೇಕು. ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಹೆಚ್ಚಿದ್ದು, ಅವರನ್ನು ಗುರುತಿಸಿ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವ ಕೆಲಸ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾಧಿಕಾರಿಗಳು ನಿರ್ವಹಿಸಬೇಕು. ಜನಪದ ಕಲೆಗಳನ್ನು ಗುರುತಿಸಿ ಜೀವ ತುಂಬುವ, ಕಲಾ ತಂಡಗಳನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಬಿ.ಎ ಪರಮೇಶ್‌ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪಿಡಿಒಗಳಿಗೆ ಜವಾಬ್ದಾರಿ: ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಧಿಕಾರಿಗಳು ಜಂಟಿ ಪರಿಶೀಲನೆ ಮಾಡಿ ಅವುಗಳ ನಿರ್ವಹಣೆ ಜವಾಬ್ದಾರಿಯನ್ನು ಪಿಡಿಒಗಳಿಗೆ ನೀಡಬೇಕು. ಕಾಲಕಾಲಕ್ಕೆ ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಬೇಕು. ಸ್ವತ್ಛ ಭಾರತ ಮಿಷನ್‌ ಅಡಿಯಲ್ಲಿ ಶೌಚಾಲಯಗಳನ್ನು ಪಡೆದಿರುವ ಫ‌ಲಾನುಭವಿಗಳು ಕಡ್ಡಾಯವಾಗಿ ಅವುಗಳನ್ನು ಬಳಸುವಂತೆ ಅರಿವು ಮೂಡಿಸಿ ಎಂದು ಶಾಸಕ ಸಿ.ಎನ್‌. ಬಾಲಕೃಷ್ಣ ತಿಳಿಸಿದರು.

ಪ್ರಗತಿ ಪರಿಶೀಲನಾ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್‌ ನೀಡುವುದರ ಜತೆಗೆ ಶಿಸ್ತು ಕ್ರಮ ಜರುಗಿಸಲಾಗುವುದು.
-ಆರ್‌.ಗಿರೀಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.