ಟ್ರೇಡ್ ವಾರ್ ಎಫೆಕ್ಟ್; ಮೂರು ದಶಕಗಳಲ್ಲಿ ಮೊದಲ ಬಾರಿಗೆ ಚೀನಾದ ಜಿಡಿಪಿ ಭಾರೀ ಕುಸಿತ!
Team Udayavani, Oct 18, 2019, 10:22 AM IST
ಬೀಜಿಂಗ್: ಭಾರತದ ಆರ್ಥಿಕ ಅಭಿವೃದ್ಧಿ ಮಂದಗತಿಯಲ್ಲಿದೆ ಎಂಬ ಆರೋಪದ ನಡುವೆಯೇ ಇದೀಗ ಚೀನಾದ ಆರ್ಥಿಕ ಅಭಿವೃದ್ಧಿಯ ಜಿಡಿಪಿ(ಒಟ್ಟು ದೇಶೀಯ ಉತ್ಪಾದನೆ) ಶೇ.6.0ರಷ್ಟು ಕುಸಿತ ಕಂಡಿದ್ದು, ತ್ರೈಮಾಸಿಕದಲ್ಲಿ ಕಳೆದ ಮೂರು ದಶಕಗಳಲ್ಲಿಯೇ ದಾಖಲೆ ಕನಿಷ್ಠ ಮಟ್ಟದಲ್ಲಿ ಕುಸಿತ ಕಂಡಂತಾಗಿದೆ ಎಂದು ವರದಿ ತಿಳಿಸಿದೆ.
ಅಮೆರಿಕದೊಂದಿಗಿನ ವ್ಯಾಪಾರ ಬಿಕ್ಕಟ್ಟಿನಿಂದಾಗಿ ಚೀನಾದ ದೇಶೀಯ ಉತ್ಪನ್ನಗಳ ಬೇಡಿಕೆ ತೀವ್ರ ಕುಸಿತ ಕಂಡಿದೆ. ಒಂದು ದೇಶದ ಆರ್ಥಿಕ ಪ್ರಗತಿಯ ಅಳತೆಗೋಲು ಎಂದೇ ಜಿಡಿಪಿಯನ್ನು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ತ್ರೈಮಾಸಿಕ ವರದಿಯ ಅಂಕಿ ಅಂಶದ ಪ್ರಕಾರ ಚೀನಾದ ಜಿಡಿಪಿ ಶೇ.6ಕ್ಕೆ ಕುಸಿದಿದೆ. ಎರಡನೇ ತ್ರೈಮಾಸಿಕದಲ್ಲಿ ಚೀನಾದ ಜಿಡಿಪಿ ಶೇ.6.2ರಷ್ಟಿತ್ತು.
1992ರ ನಂತರ ಚೀನಾ ಅತೀ ಕನಿಷ್ಠ ಮಟ್ಟದ ಜಿಡಿಪಿ ಕುಸಿತ ಕಂಡಿದೆ. ಪ್ರಸಕ್ತ ಸಾಲಿನಲ್ಲಿ ಶೇ.6.0ರಿಂದ ಶೇ.6.5ರಷ್ಟು ಜಿಡಿಪಿ ಬೆಳವಣಿಗೆ ಗುರಿಯನ್ನು ಚೀನಾ ಹೊಂದಿತ್ತು. ಜಗತ್ತಿನ ಎರಡನೇ ಅತೀ ದೊಡ್ಡ ಆರ್ಥಿಕತೆ ಹೊಂದಿರುವ ಚೀನಾ ಮತ್ತು ಅಮೆರಿಕ ನಡುವಿನ ವ್ಯಾವಹಾರಿಕ ಬಿಕ್ಕಟ್ಟಿನ ಬೆಳವಣಿಗೆಯನ್ನು ಚೀನಾದ ಟ್ರೇಡಿಂಗ್ ಪಾರ್ಟನರ್ಸ್ಸ್ ಮತ್ತು ಹೂಡಿಕೆದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.
ಚೀನಾ ಮತ್ತು ಅಮೆರಿಕ ಟ್ರೇಡ್ ವಾರ್ ನಿಂದಾಗಿ ಜಾಗತಿಕ ಆರ್ಥಿಕ ಹಿಂಜರಿತಕ್ಕೆ ಕಾರಣವಾಗಬಹುದು ಎಂಬ ಆತಂಕ ಹೆಚ್ಚಿಸತೊಡಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ