ಜನರ ಸಮಸ್ಯೆ ಆಲಿಸಲು ಶಾಸಕರ ಗ್ರಾಮ ವಾಸ್ತವ್ಯ

Team Udayavani, Oct 18, 2019, 4:31 PM IST

mysuru-tdy-1

ಎಚ್‌.ಡಿ.ಕೋಟೆ: ತಾಲೂಕಿನ ಗಡಿಭಾಗದ ಆದಿವಾಸಿಗರು ಸೇರಿದಂತೆ ತಾಲೂಕಿನ ಜನರ ಸಮಸ್ಯೆ ಪರಿಹಾರ ಮತ್ತು ಅರ್ಹ ಜನತೆಗೆ ಸರ್ಕಾರಿ ಸವಲತ್ತು ದೊರಕಿಸುವುದು, ಆರೋಗ್ಯ ಮತ್ತು ಶುಚಿತ್ವಕ್ಕೆ ಆದ್ಯತ್ಯ ನೀಡುವ ಸಲುವಾಗಿ ಶಾಸಕ ಅನಿಲ್‌ ಚಿಕ್ಕಮಾದು ಗಡಿಭಾಗದ ಎನ್‌.ಬೇಗೂರು ಗ್ರಾಪಂ ವ್ಯಾಪ್ತಿಯಲ್ಲಿ 3 ದಿನಗಳ ಗ್ರಾಮ ವಾಸ್ತವ್ಯ ಆರಂಭಿಸಿದ್ದಾರೆ.

ತಾಲೂಕಿನ ಭೀಮನಕೊಲ್ಲಿ ದೇವಸ್ಥಾನ ದಿಂದ ಬೈಕ್‌ ರ್ಯಾಲಿಗೆ ಚಾಲನೆ ನೀಡಿದ ಬಳಿಕ ಬೈಕ್‌ನಲ್ಲಿ ಎನ್‌.ಬೇಗೂರು ಸೇರಿದಂತೆ ಗ್ರಾಪಂ ವ್ಯಾಪ್ತಿಗೆ ಒಳಪಡುವ ಜಾಗನಕೋಟೆ, ಕಾಳೇನಹಳ್ಳಿ, ಚರಟೆಹುಂಡಿ, ಸೋಮ ದೇವರಹುಂಡಿ, ಬೋರೆದೇವರಮಂಟಿ, ಮೊರ್ಬಾಂದ್ ಗ್ರಾಮಗಳ ವ್ಯಾಪ್ತಿಯಲ್ಲಿ ಗ್ರಾಮ ಸ್ವರಾಜ್‌ ವಿಶೇಷ ಅಭಿಯಾನ ನಡೆಸಿದರು.

ಹಾಡಿಗಳ ಜೀವನದ ನೈಜತೆ ಅವಲೋಕಿಸಿ ಮಾತನಾಡಿದ ಶಾಸಕ ಅನಿಲ್‌ ಚಿಕ್ಕಮಾದು, ಹಲವು ಕಾಮಗಾರಿಗಳನ್ನು ವಿಳಂಬ ಮಾಡದೇ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯ ಬಹುಸಂಖ್ಯೆಯಲ್ಲಿದ್ದು, ಒಟ್ಟಾರೆ ತಾಲೂಕಿನಲ್ಲಿ ಬಡಜನರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಡಿಗಳ ಮಂದಿ ಅನಾರೋಗ್ಯದಿಂದ ಬಳಲುತ್ತಿದ್ದು, ಮೂಲಭೂತ ಸೌಕರ್ಯ ಗಳಿಂದ ವಂಚಿತರಾಗಿದ್ದಾರೆ. ಪಂಚಾಯ್ತಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿದೀಪ, ಅಂಗನವಾಡಿ ಕೇಂದ್ರಗಳು, ಶೌಚಾಲಯ, ಗ್ರಾಮದ ಶುಚಿತ್ವ, ಶಾಲೆ ಮತ್ತಿತರ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.

ಬುಧವಾರ ರಾತ್ರಿ ಭೀಮನಕೊಳ್ಳಿ ತೋಟಗಾರಿಕೆ ಇಲಾಖೆಯ ಸಂಸ್ಕರಣ ತರಬೇತಿ ಕೇಂದ್ರದಲ್ಲಿ ವಾಸ್ತವ್ಯ ಹೂಡಿ ರಾತ್ರಿ ಕಳೆದರು. ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಅದ್ಧೂರಿ ಸ್ವಾಗತದೊಂದಿಗೆ ಬರಮಾಡಿಕೊಂಡರು. 2ನೇ ದಿನವಾದ ಗುರುವಾರ ಮುಂಜಾನೆಯಿಂದ ಬೀರಂಬಳ್ಳಿ, ಬೀರಂಬಳ್ಳಿ ಹಾಡಿ, ಜಕ್ಕಳ್ಳಿ ಕಾಲೋನಿ, ಗಂಡತ್ತೂರು, ಬ್ರಹ್ಮಗಿರಿ, ಬ್ರಹ್ಮಗಿರಿಹಾಡಿ, ಬುಂಡನಮಾಳ ಹಾಡಿ, ಕನಕನಹಳ್ಳಿ, ಮನ್ನಳ್ಳಿಹಾಡಿ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಶಾಸಕರು, 1.50 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಮೊದಲ ದಿನದ ಭೇಟಿ ವೇಳೆ ಜಿಪಂ ಅಧ್ಯಕ್ಷ ಪರಿಮಳಾ,, ತಾಪಂ ಅಧ್ಯಕ್ಷೆ ಮಂಜುಳಾ, ಎನ್‌.ಬೇಗೂರು ಗ್ರಾಪಂ ಅಧ್ಯಕ್ಷ ಚಂದ್ರೇಗೌಡ, ಜಿಪಂ ಸದಸ್ಯ ವೆಂಕಟಸ್ವಾಮಿ, ಕಾಳಸ್ವಾಮಿ, ವೇಣು, ಚಿಕ್ಕವೀರನಾಯ್ಕ, ಪುರಸಭಾ ಸದಸ್ಯ ಪ್ರೇಮ್‌ ಸಾಗರ್‌, ಮದುಕುಮಾರ್‌, ವಿನೋದ್‌, ಗಣೇಶ ಚಾರಿ, ಪ್ರಭಾಕರ್‌, ನರಸಿಂಹ ಮೂರ್ತಿ, ಚೆಲ್ಲಪ್ಪ, ಪ್ರೇಮ್‌, ತಹಶೀಲ್ದಾರ್‌ ಆರ್‌.ಮಂಜುನಾಥ್‌, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಗೋಪಾಲಕೃಷ್ಣಮೂರ್ತಿ, ಸಿಡಿಪಿಒ ಆಶಾ, ಗಿರಿಜನ ಅಭಿವೃದ್ಧಿ ಅಧಿಕಾರಿ ಚಂದ್ರಪ್ಪ ಇತರರಿದ್ದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.