7740 ಏಡ್ಸ್ ಸೋಂಕಿತರು

7 ಜಿಲ್ಲೆಗಳಲ್ಲಿ ಜಾಗೃತಿ ಮೂಡಿಸಲು ಆಶಾಕಾರ್ಯಕರ್ತೆಯರಿಗೆ ತರಬೇತಿ

Team Udayavani, Oct 19, 2019, 12:13 PM IST

19-October-9

ಕಲಬುರಗಿ: ಜಿಲ್ಲಾದ್ಯಂತ 2011-12ನೇ ಸಾಲಿನಿಂದ ಇದುವರೆಗೆ 7,740 ಎಚ್‌ ಐವಿ ಸೋಂಕಿತರು ಇದ್ದು, 1,221 ಜನರು ಮರಣ ಹೊಂದಿದ್ದಾರೆ ಎಂದು ರಾಜ್ಯ ಏಡ್ಸ್‌ ತಡೆ ಮತ್ತು ನಿಯಂತ್ರಣ ಘಟಕದ ಜಂಟಿ ನಿರ್ದೇಶಕ ಡಾ| ಸಂಜಯ ಪಾಟೀಲ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ಕೊಪ್ಪಳ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಏಡ್ಸ್‌ ಪ್ರಮಾಣ ಹೆಚ್ಚಾಗಿದೆ. ಇದಕ್ಕೆ ಅನಕ್ಷರತೆ, ಮಾಹಿತಿ ಕೊರತೆ ಕಾರಣವಾಗಿದ್ದು, ಅಸುರಕ್ಷಿತ ಲೈಂಗಿಕ ಮತ್ತು ರಕ್ತದಾನದಿಂದ ಸೋಂಕು ಹರಡುತ್ತದೆ ಎಂದರು.

ಹೆಚ್‌ಐವಿಗೆ ಯಾವುದೇ ಲಸಿಕೆ ಇಲ್ಲ. ಆ ಕುರಿತ ಮಾಹಿತಿ, ಶಿಕ್ಷಣ ಮತ್ತು ಸಂವಹನಗಳೇ ಸಾಮಾಜಿಕ ಲಸಿಕೆಗಳು. ಆ ಮೂಲಕ ಜಾಗೃತಿ ಮೂಡಿಸುವ ಮೂಲಕ ಸೋಂಕಿನ ತಡೆಗೆ ಯತ್ನಿಸಬೇಕಿದೆ. ಏಡ್ಸ್‌ ನಿಯಂತ್ರಣ ಕುರಿತು ಕಲಬುರಗಿ ಸೇರಿದಂತೆ ಎಲ್ಲ ಏಳು ಜಿಲ್ಲೆಗಳಲ್ಲಿ ಅ.19 ಮತ್ತು 20ರಂದು ಎರಡು ದಿನಗಳ ಕಾಲ ಮನೆ-ಮನೆ ಜನ ಜಾಗೃತಿ ಅಭಿಯಾನ ನಡೆಯಲಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ಎಂ.ಕೆ. ಪಾಟೀಲ ಮಾತನಾಡಿ, ಏಡ್ಸ್‌ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಈಗಾಗಲೇ ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗಿದೆ. ಏಳು ತಾಲೂಕುಗಳ ಒಟ್ಟು 3,90,132 ಮನೆಗಳಿಗೆ ಏಡ್ಸ್‌ ನಿಯಂತ್ರಣ ಕುರಿತು ಮಾಹಿತಿ ರವಾನಿಸಲಾಗುವುದು ಎಂದರು.

ಎರಡೂ ದಿನಗಳ ಕಾಲ 1,802 ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೆ ತೆರಳಿ ಜಾಗೃತಿ ಮೂಡಿಸುವರು. ತಲಾ ಇಬ್ಬರು ಆಶಾ ಕಾರ್ಯಕರ್ತೆಯರಂತೆ ಒಟ್ಟು 901 ತಂಡಗಳನ್ನು ರಚಿಸಲಾಗಿದೆ. ಅಲ್ಲದೇ, ಎನ್‌ಜಿಒಗಳ ಮೂಲಕ ಏಡ್ಸ್‌ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಅಭಿಯಾನದ ಮೂಲಕ ಸೋಂಕಿತರ ಕುರಿತು ಇರುವ ಕಳಂಕ ಮತ್ತು ತಾರತಮ್ಯತೆ ಹೋಗಲಾಡಿಸುವುದು. ಗರ್ಭಿಣಿಯರು ತಮ್ಮ ಮೊದಲನೇ ತ್ರೈ ಮಾಸಿಕದಲ್ಲಿ ಹೆಚ್‌ ಐವಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕು ಕಂಡುಬಂದಲ್ಲಿ ಏಆರ್‌ಟಿ ಚಿಕಿತ್ಸೆಯೊಂದಿಗೆ ಸರ್ಕಾರಿ ಆಸ್ಪತ್ರೆಯಲ್ಲಿಯೇ ಹೆರಿಗೆ ಮಾಡಿಸಿಕೊಳ್ಳುವಂತೆ ಪ್ರೇರಪಿಸಲಾಗುವುದು ಎಂದು ಹೇಳಿದರು. ಡಾ| ನಂಜೇಗೌಡ, ಡಾ| ಸೋಮಶೆಖರ, ಡಾ| ವಿವೇಕಾನಂದ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.