ಜಮೀರ್ ಅಹಮದ್ಗೆ ಲಘು ಹೃದಯಾಘಾತ
Team Udayavani, Oct 21, 2019, 3:04 AM IST
ಬೆಂಗಳೂರು: ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಲಘು ಹೃದಯಾಘಾತವಾಗಿದ್ದು, ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆಯಲ್ಲಿದ್ದ ಜಮೀರ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರ ಪತ್ನಿ ಹಾಗೂ ಮಗ ಸಮೀಪದ ವಿಕ್ರಂ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಪರೀಕ್ಷಿಸಿ ಲಘು ಹೃದಯಾಘಾತ ವಾಗಿದೆ ಎಂದು ಖಚಿತಪಡಿಸಿದ್ದಾರೆ. ಸದ್ಯ ಜಮೀರ್ ಅವರಿಗೆ ಒಂದು ಸ್ಟಂಟ್ ಅಳವಡಿಸಲಾಗಿದೆ.
ಅವರು ಉತ್ತಮವಾಗಿ ಸ್ಪಂದಿಸುತ್ತಿದ್ದು, ಶೀಘ್ರ ಚೇತರಿಸಿಕೊಳ್ಳುತ್ತಿದ್ದಾರೆ. ಮಂಗಳ ವಾರ ಬೆಳಗ್ಗೆ ಅವರನ್ನು ಆಸ್ಪತ್ರೆ ಯಿಂದ ಡಿಸಾcರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಸೇರಿ ರಾಜಕೀಯ ಮುಖಂಡರು ಹಾಗೂ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜಿಂ ಅವರು ಆಸ್ಪತ್ರೆಗೆ ಭೇಟಿ ನೀಡಿ, ಜಮೀರ್ ಆರೋಗ್ಯ ವಿಚಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
MUST WATCH
ಹೊಸ ಸೇರ್ಪಡೆ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!