ಉಪನೋಂದಣಿ ಕಚೇರಿಯಲ್ಲಿ ಜನದಟ್ಟಣೆ

ನಿಧಾನಗತಿ ಪ್ರಕ್ರಿಯೆ; ತಾಂತ್ರಿಕ ಸಮಸ್ಯೆ ಇಲ್ಲ: ಅಧಿಕಾರಿಗಳು

Team Udayavani, Oct 23, 2019, 4:24 AM IST

T-18

ಪುತ್ತೂರು: ಕೆಲವು ದಿನಗಳಿಂದ ಪುತ್ತೂರು ಉಪ ನೋಂದಣಿ ಕಚೇರಿಯಲ್ಲಿ ಜನದಟ್ಟಣೆ ಕಾಣಿಸಿಕೊಂಡಿದೆ. ನೋಂದಣಿಗೆ ಸಂಬಂಧಿಸಿದ ಪ್ರಕ್ರಿಯೆಗಳು ನಿಧಾನ ಗತಿಯಲ್ಲಿ ನಡೆಯುತ್ತಿವೆ ಎನ್ನುವ ಆರೋಪ ಸಾರ್ವಜನಿಕ ಕಡೆಯಿಂದ ಬಂದರೆ, ಈಗ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲ ಎನ್ನುವ ಉತ್ತರವನ್ನು ಅಧಿಕಾರಿಗಳು ನೀಡುತ್ತಿದ್ದಾರೆ.

ಈ ತಿಂಗಳ ಆರಂಭದಿಂದಲೇ ನೋಂದಣಿಗೆ ಸಂಬಂಧಿಸಿದ ಸಾಫ್ಟ್‌ ವೇರ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿ ಕೊಂಡು ಕಚೇರಿಯಲ್ಲಿ ವಿವಾಹ ಮತ್ತು ಭೂ ದಾಖಲೆಗಳ ನೋಂದಣಿ ಪ್ರಕ್ರಿಯೆ ಸ್ಥಗಿತಗೊಂಡು ಸಮಸ್ಯೆ ಉಂಟಾಗಿತ್ತು. ಅನಂತರ ಉಪ ನೋಂದಣಾಧಿಕಾರಿ ಬೆಂಗಳೂರು ಮುಖ್ಯ ಕಚೇರಿಗೆ ತೆರಳಿ ಅದನ್ನು ಸರಿಪಡಿಸಿಕೊಂಡು ಬಂದಿದ್ದರು. ಈ ಮಧ್ಯೆ ಸುಮಾರು ಎರಡು ವಾರಗಳ ಕಾಲ ನೋಂದಣಿ ಪ್ರಕ್ರಿಯೆಗಳಿಗೆ ಹಿನ್ನಡೆಯಾಗಿತ್ತು. ಸಾರ್ವಜನಿಕರಿಗೂ ತೊಂದರೆಯಾಗಿತ್ತು.

ಉಪನೋಂದಣಿ ಕಚೇರಿಯಲ್ಲಿ ವಿವಾಹ ನೋಂದಣಿಯೊಂದಿಗೆ ಅಗ್ರಿಮೆಂಟ್‌ ರಿಜಿಸ್ಟ್ರೇಶನ್‌, ಮನೆ ಮಾರಾಟ ನೋಂದಣಿ ಸಹಿತ ಭೂಮಿಗೆ ಸಂಬಂಧಿಸಿದ ಎಲ್ಲ ರೀತಿಯ ನೋಂದಣಿ ಪ್ರಕ್ರಿಯೆಗಳು ನಡೆಯುತ್ತವೆ. ಜನರಿಗೆ ಅತಿ ಅಗತ್ಯದ ಕಚೇರಿ ಇದಾಗಿರುವುದರಿಂದ ಜನ ದಟ್ಟಣೆಯೂ ಉಂಟಾಗುತ್ತದೆ. ಪ್ರಸ್ತುತ ಎಲ್ಲ ಸರಕಾರಿ ಕಚೇರಿಗಳಲ್ಲಿ ಇರುವಂತೆ ಸರ್ವರ್‌ ನಿಧಾನಗತಿಯಲ್ಲಿಯೂ ಇದೆ. ಜತೆಗೆ ನೋಂದಣಿ ಸ್ಥಗಿತಗೊಂಡ ದಿನಗಳ ಕೆಲಸವನ್ನೂ ಮುಗಿಸ ಬೇಕಾಗಿದ್ದರಿಂದ ಒಂದಷ್ಟು ಜನದಟ್ಟಣೆ ಉಂಟಾಗಿದೆ ಎನ್ನುವುದು ಅಧಿಕಾರಿಗಳ ಸಮಜಾಯಿಷಿ.

ದಲ್ಲಾಳಿಗಳ ಹಾವಳಿಯೂ ಕಾರಣ
ಉಪನೋಂದಣಿ ಕಚೇರಿಯಲ್ಲಿ ಜಮೀನು ಸಹಿತ ಇತರ ನೋಂದಣಿ ಗಳನ್ನು ಮಾಡಿಸಿಕೊಡುವ ಬ್ರೋಕರ್‌ಗಳ ಸಂಖ್ಯೆ ಹೆಚ್ಚಾಗಿದೆ. ಅಧಿಕಾರಿಗಳು ಬ್ರೋಕರ್‌ ಮೂಲಕ ಬಂದ ಅರ್ಜಿಗಳಿಗೆ ಮೊದಲ ಆದ್ಯತೆ ನೀಡುತ್ತಿದ್ದಾರೆ. ಇದರಿಂದ ನೇರವಾಗಿ ಬರುವ ಸಾರ್ವಜನಿಕರು ಗಂಟೆಗಟ್ಟಲೆ, ದಿನಗಟ್ಟಲೆ ಕಾಯುವಂತಾಗುತ್ತಿದೆ ಎನ್ನುವ ಆರೋಪವೂ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ಸರಕಾರಿ ಆಸ್ಪತ್ರೆಯ ಬಳಿ ಪ್ರತ್ಯೇಕವಾಗಿದ್ದ ಉಪ ನೋಂದಣಾ ಧಿಕಾರಿ ಕಚೇರಿಯನ್ನು ಪಾರದರ್ಶಕ ಸೇವೆಯ ದೃಷ್ಟಿಯಿಂದ ಎಲ್ಲ ಕಚೇರಿ ಗಳಿರುವ ಮಿನಿ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು ಎನ್ನುವ ಸಾರ್ವಜನಿಕ ಆಗ್ರಹದೊಂದಿಗೆ ಕೆಲವು ವರ್ಷಗಳ ಹೊಯ್ದಾಟದ ಬಳಿಕ ಕಚೇರಿ ಮಿನಿ ವಿಧಾನಸೌಧಕ್ಕೆ ಸ್ಥಳಾಂತರಗೊಂಡಿತ್ತು. ಆದರೆ ಉಪನೋಂದಣಿ ಕಚೇರಿಯ ತಾಂತ್ರಿಕ ಹಾಗೂ ಸೇವೆಯ ತೊಡಕುಗಳು ಇನ್ನೂ ಸಮರ್ಪಕಗೊಂಡಿಲ್ಲ ಎನ್ನುವ ಆರೋಪಗಳೂ ಇವೆ. ಕಚೇರಿಯಲ್ಲಿ ಪಾರದರ್ಶಕ ಸೇವೆಗೆ ಗಮನ ಹರಿಸಬೇಕು ಎಂದು ಇತ್ತೀಚೆಗೆ ಚಿಕ್ಕಮುಟ್ನೂರು ಕಲಿಯುಗ ಸೇವಾ ಸಮಿತಿಯೂ ಮನವಿಯ ಮೂಲಕ ಆಗ್ರಹಿಸಿತ್ತು.

ತೊಡಕಿಲ್ಲ
ತಾಂತ್ರಿಕ ಸಮಸ್ಯೆಯಿಂದ ಒಂದಷ್ಟು ದಿನ ನೋಂದಣಿ ಪ್ರಕ್ರಿಯೆಗಳು ಸ್ಥಗಿತಗೊಂಡ ಕಾರಣ ಸರಿಯಾದ ಬಳಿಕ ಒಂದಷ್ಟು ಜನದಟ್ಟಣೆ ಇತ್ತು. ಈಗ ಎಲ್ಲ ಪ್ರಕ್ರಿಯೆಗಳು ವೇಗವಾಗಿ ನಡೆಯುತ್ತಿವೆ. ಕೆಲವೊಮ್ಮೆ ಸರ್ವರ್‌ ನಿಧಾನ ಇರುವುದು ಬಿಟ್ಟರೆ ಯಾವುದೇ ತೊಡಕು ಇಲ್ಲ.
– ಶಶಿಧರ್‌ ಗಂಟಿ, ಉಪನೋಂದಣಾಧಿಕಾರಿ, ಪುತ್ತೂರು

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

1

Bengaluru rain: ಮಧ್ಯಾಹ್ನದ ವರುಣಾರ್ಭಟಕ್ಕೆ ನಗರ ಕೂಲ್‌

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

1

Bengaluru rain: ಮಧ್ಯಾಹ್ನದ ವರುಣಾರ್ಭಟಕ್ಕೆ ನಗರ ಕೂಲ್‌

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.