ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ; ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ: ಜಿಲ್ಲಾಧಿಕಾರಿ
Team Udayavani, Oct 23, 2019, 7:48 PM IST
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ನ.12ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿ ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅ.31ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಪರಿಶೀಲನೆಗೆ ನ.2 ಕೊನೆಯ ದಿನವಾಗಿದ್ದು, ನಾಮಪತ್ರ ಹಿಂತೆಗೆದುಕೊಳ್ಳಲು ನ.4 ಕೊನೆಯ ದಿನ. ನ. 12ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನದ ನಡೆಯಲಿದೆ. ನ.14ರಂದು ಮತಗಳ ಎಣಿಕೆ ನಡೆಯಲಿದೆ ಎಂದರು.
ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯು ಮನಪಾ ವ್ಯಾಪ್ತಿಯಲ್ಲಿ ನ.14ರವರೆಗೆ ಜಾರಿಯಲ್ಲಿರುತ್ತದೆ. ಮಸ್ಟರಿಂಗ್, ಡಿ ಮಸ್ಟರಿಂಗ್ ಹಾಗೂ ಮತ ಎಣಿಕೆ ಕಾರ್ಯವು ಪಾಂಡೇಶ್ವರದ ರೊಸಾರಿಯೊ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ ಎಂದರು.
ಚುನಾವಣೆಯಲ್ಲಿ ನೋಟಾ ಚಲಾವಣೆಗೆ ಅವಕಾಶವಿದೆ. ಚುನಾವಣೆಗೆ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳ ಹೆಸರಿನ ಮುಂದೆ ಅವರ ಇತ್ತೀಚಿನ ಭಾವಚಿತ್ರವನ್ನು ಮುದ್ರಿಸಲಾಗುವುದು. ಚುನಾವಣೆಗೆ ಸ್ಪಧಿಸುವ ಅಭ್ಯರ್ಥಿಗಳು ತಲಾ 3 ಲಕ್ಷ ರೂ. ಚುನಾವಣಾ ವೆಚ್ಚ ಮಾಡಬಹುದು. ವೆಚ್ಚದ ಬಗ್ಗೆ ನಿಗಾ ವಹಿಸುವ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಭದ್ರತೆ ದೃಷ್ಟಿಯಿಂದ ನಗರ ವ್ಯಾಪ್ತಿಯಲ್ಲಿ ಚೆಕ್ಪೋಸ್ಟ್ ತೆರೆಯಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!