ದೇಶಾದ್ಯಂತ ಕಾಂಗ್ರೆಸ್‌ಗೆ ದಯನೀಯ ಸ್ಥಿತಿ: ಸುರೇಶ ಕುಮಾರ್‌

Team Udayavani, Oct 24, 2019, 9:15 PM IST

Suresh-Kumar-750

ಬಾಗಲಕೋಟೆ:ದೇಶದಲ್ಲಿ ಕಾಂಗ್ರೆಸ್‌ ದಯನೀಯ ಸ್ಥಿತಿಗೆ ತಲುಪಿದೆ. ಆಡಳಿತ ಪಕ್ಷಕ್ಕೆ ಒಂದು ಉತ್ತಮವಾದ ವಿರೋಧ ಪಕ್ಷವೂ ದೇಶದಲ್ಲಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ್‌ ಹೇಳಿದರು.

ಪ್ರವಾಹದಿಂದ ಹಾನಿಗೊಳಗಾದ ಮುಧೋಳ ತಾಲೂಕಿನ ಒಂಟಗೋಡಿ ಶಾಲೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಇಂದು ಪ್ರಚಾರಕ್ಕೂ ಬರದೇ ಇರುವಂತಹ ದಯನೀಯ ಸ್ಥಿತಿಗೆ ಬಂದು ತಲುಪಿದೆ. ರಾಜ್ಯದಲ್ಲಿ, ದೇಶದಲ್ಲಿ ಉತ್ತಮ ವಿರೋಧ ಪಕ್ಷ ಇರಬೇಕು. ಅದನ್ನು ಉಳಿಸಿಕೊಳ್ಳುವುದು ಅವರಿಗೆ ಬಿಟ್ಟದ್ದು. ಮಹಾರಾಷ್ಟ್ರ, ಹರಿಯಾಣ ಚುನಾವಣೆ ಫಲಿತಾಂಶ ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆಯಾಗಿದೆ. ಇನ್ನಾದರೂ ಅವರು ಎಚ್ಚೆತ್ತುಕೊಳ್ಳಬೇಕು ಎಂದರು.

ಮಹಾರಾಷ್ಟ್ರದಲ್ಲಿ ನಮಗೂ, ಶಿವಸೇನೆಗೂ ಹಳೆಯ ಸಂಬಂಧವಿದೆ. ಶಿವಸೇನೆ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಟ್ಟಿರುವ ವಿಷಯ ನಮ್ಮ ನಾಯಕರು ಬಗೆಹರಿಸುತ್ತಾರೆ. ಪಠ್ಯ ಪುಸ್ತಕದಿಂದ ಟಿಪ್ಪು ಪಾಠ ತೆಗೆದು ಹಾಕುವ ಕುರಿತು ಮಾಜಿ ಸಚಿವ ಅಪ್ಪಚ್ಚು ರಂಜನ್‌ ಅವರು ಬರೆದಿದ್ದು ಇನ್ನೂ ನನಗೆ ಬಂದಿಲ್ಲ. ಪತ್ರ ಬರೆಯುವ ಹಕ್ಕು ಎಲ್ಲರಿಗೂ ಇದೆ. ಪತ್ರ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ನೆಲದ ಮೇಲೆ ಮಕ್ಕಳ; ಬಿಇಒಗೆ ಕ್ಲಾಸ್‌
ಒಂಟಗೋಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಳೆದ ಆಗಸ್ಟ್‌ನಲ್ಲಿ ಸುರಿದ ಮಳೆಯಿಂದ ಬಿರುಕುಬಿಟ್ಟು ಬೀಳುವ ಸ್ಥಿತಿ ತಲುಪಿದ್ದು, ಇಲ್ಲಿನ ಮಕ್ಕಳಿಗೆ ತಾತ್ಕಾಲಿಕ ಶೆಡ್‌ನ‌ಲ್ಲಿ ಪಾಠ ಮಾಡಲಾಗುತ್ತಿದೆ. ಈ ಸ್ಥಳಕ್ಕೆ ಡಿಸಿಎಂ ಗೋವಿಂದ ಕಾರಜೋಳ ಜತೆಗೆ ಭೇಟಿ ನೀಡಿದ ಸಚಿವ ಸುರೇಶಕುಮಾರ, ನೆಲದ ಮೇಲೆ ಮಕ್ಕಳನ್ನು ಕೂಡಿಸಿರುವುದು ಕಂಡು ಗರಂ ಆದರು. ಶೆಡ್‌ ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಲು ಬೋರ್ಡ್‌ ಇಲ್ಲ. ದಾನಿಗಳು ನೀಡಿದ ಮ್ಯಾಟ್‌ ಮಕ್ಕಳು ಕುಳಿತಕೊಳ್ಳಲು ಹಾಕಿಲ್ಲ ಎಂದು ಮುಧೋಳ ಬಿಇಒ ವಿಠuಲ ಅವರನ್ನು ತರಾಟೆಗೆ ತೆಗೆದುಕೊಂಡರು.

ಮಕ್ಕಳಿಂದ ಮಗ್ಗಿ ಹೇಳಿಸಿದ ಸಚಿವರು
ಒಂಟಗೋಡಿಯಲ್ಲಿ ಶೆಡ್‌ನ‌ಲ್ಲಿ ನಡೆಯುತ್ತಿರುವ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಸುರೇಶಕುಮಾರ, ಮಕ್ಕಳೊಂದಿಗೆ ಆತ್ಮೀಯವಾಗಿ ಬೆರೆತು ಅವರಿಂದ ಮಗ್ಗಿ ಹೇಳಿಸಿದರು. ಸಚಿವರು, ವಿದ್ಯಾರ್ಥಿಗಳತ್ತ ಬೊಟ್ಟು ಮಾಡಿ ನೀನು ಮಗ್ಗಿ ಹೇಳು ಎಂದು ಕೇಳುತ್ತಿದ್ದರು. ಈ ವೇಳೆ ಡಿಸಿಎಂ ಕಾರಜೋಳ ಸಹಿತ ಇದ್ದರು.

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.