ತಗ್ಗದ ಕೃಷ್ಣೆ ಅಬ್ಬರ

Team Udayavani, Oct 25, 2019, 12:46 PM IST

25-October-8

„ಸಿದ್ದಯ್ಯ ಪಾಟೀಲ
ಸುರಪುರ: ಕಳೆದ ಎರಡ್ಮೂರು ದಿನಗಳಿಂದ ಹರಿಯುತ್ತಿರುವ ಕೃಷ್ಣೆಯ ಅಬ್ಬರದ ಪ್ರವಾಹ ಗುರುವಾರ ಕೂಡ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಇದರಿಂದ ಶೆಳ್ಳಗಿ, ಮುಷ್ಠಳ್ಳಿ, ಹೆಮ್ಮಡಗಿ, ಚೌಡೇಶ್ವರಿಹಾಳ ಸೇರಿದಂತೆ ನದಿ ಪಾತ್ರದ ಇತರೆ ಗ್ರಾಮಗಳ ಹೊಲ-ಗದ್ದೆಗಳಿಗೆ ನೀರು ನುಗ್ಗಿದ್ದು ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಬೆಳೆ ನೆಲಕಚ್ಚಿದೆ. ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ನಾರಾಯಣಪುರ ಬಸವಸಾಗರ ಜಲಾಶಯದಿಂದ ಗುರುವಾರ ನದಿಗೆ 3.75 ಲಕ್ಷ ಕ್ಯೂಸೆಕ್‌ ಹೆಚ್ಚುವರಿಯಾಗಿ ನೀರು ಹರಿಸಲಾಗುತ್ತಿದೆ.

ಪ್ರವಾಹದ ಹೊಡೆತಕ್ಕೆ ಸಿಲುಕಿ ನದಿ ದಂಡೆಯಲಿದ್ದ ಸಾವಿರಾರು ಪಂಪ್‌ಸೆಟ್‌ ನೀರು ಪಾಲಾಗಿವೆ. ಸಾವಿರಾರು ವಿದ್ಯುತ್‌ ಕಂಬಗಳು, ಪರಿವರ್ತಕ (ಟಿ.ಸಿ) ಗಳು ಸುಟ್ಟು ಹೋಗಿವೆ. ಪ್ರವಾಹದ ರಭಸಕ್ಕೆ ಕಂಬಗಳು ವಾಲಿ ನಿಂತಿದ್ದು, ಬೀಳುವ ಸ್ಥಿತಿಯಲ್ಲಿವೆ. ಕಳೆದ ಬಾರಿ ಪ್ರವಾಹದ ನಂತರ ಜೆಸ್ಕಾಂ ಇಲಾಖೆಯವರು 876 ಕಂಬ, 136 ಟಿ.ಸಿಗಳನ್ನು ಹೊಸದಾಗಿ ಹಾಕಿದ್ದರು.

ಕೆಲಸ ಮುಗಿಸುವ ಮುನ್ನವೇ ಮೊತ್ತೂಮ್ಮೆ ಎರಗಿದ ಪ್ರವಾಹ ಜೆಸ್ಕಾಂ ಇಲಾಖೆ ನಿದ್ದೆಗೆಡುವಂತೆ ಮಾಡಿದೆ. ಸಂತ್ರಸ್ತ ರೈತರಿಂದ ಆಕ್ರೋಶ: ನದಿಗೆ ನೀರು ಹರಿಸುವ ಮುನ್ನ ಯಾವುದೇ ಎಚ್ಚರಿಕೆ ನೀಡಿಲ್ಲ. ಏಕಾಏಕಿ ನದಿಯಲ್ಲಿ ನೀರು ಹರಿದು ಬಂದಿರುವುದು ಆತಂಕ ಸೃಷ್ಟಿಸಿದೆ. ಇಷ್ಟು ಪ್ರಮಾಣದಲ್ಲಿ ನದಿಗೆ ನೀರು ಹರಿಯುತ್ತಿದ್ದು, ಹೊಲಗಳಿಗೆ ನುಗ್ಗಿ ಬೆಳೆ ನಾಶವಾಗುತ್ತಿದೆ. ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕಿದ್ದ ತಾಲೂಕು ಆಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ನದಿಪಾತ್ರಗಳ ಗ್ರಾಮದ ಸಂತ್ರಸ್ತ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಾಡಳಿತ ನಿರ್ಲಕ್ಷ್ಯ : ಮುಂಜಾಗ್ರತೆ ಕ್ರಮವಾಗಿ ಎಚ್ಚರಿಕೆಯಿಂದಿರಲು ನದಿ ಪಾತ್ರದ ಗ್ರಾಮಗಳಲ್ಲಿ ತಾಲೂಕಾಡಳಿತ ಡಂಗುರ ಸಾರಬೇಕಿತ್ತು. ಮಕ್ಕಳು, ಮಹಿಳೆಯರು ಬಟ್ಟೆ ತೊಳೆಯಲು ನದಿ ಕಡೆ ಹೋಗದಂತೆ ಅಧಿಕಾರಿಗಳನ್ನು ನೇಮಿಸಿ ತಡೆಯುವ ಕಾರ್ಯ ಮಾಡಬೇಕಿತ್ತು. ಆದರೆ, ಇದ್ಯಾವುದಕ್ಕೂ ತಾಲೂಕಾಡಳಿತ ತಲೆಕೆಡಿಸಿಕೊಂಡಿಲ್ಲ.ಈ ಕುರಿತು
ಅನೇಕ ಗ್ರಾಮಗಳಲ್ಲಿ ತಾಲೂಕಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ತಲುಪದ ಬೆಳೆ ನಷ್ಟ ಪರಿಹಾರ: ಕಳೆದ ಬಾರಿ ಪ್ರವಾಹದಿಂದ ಸಾವಿರಾರು ಎಕರೆ ಪ್ರದೇಶದಲ್ಲಿನ ಬೆಳೆ ಹಾನಿಯಾಗಿತ್ತು. ಈ ಕುರಿತು ತಾಲೂಕು ಆಡಳಿತ, ಕೃಷಿ ಇಲಾಖೆ ಅ ಧಿಕಾರಿಗಳು ಸರ್ವೇ ಮಾಡಿ ವರದಿ ಸಲ್ಲಿಸಿದರೂ ಈವರೆಗೂ ಬೆಳೆ ನಷ್ಟ ಪರಿಹಾರ ನಯಾಪೈಸೆ ಸಿಕ್ಕಿಲ್ಲ. ಈ ಬಗ್ಗೆ ಕೇಳಿದರೆ ತಹಶೀಲ್ದಾರ್‌ ಉಡಾಫೆ ಉತ್ತರ ನೀಡುತ್ತಾರೆ ಎಂದು ಬೆಳೆ ನಷ್ಟ ಅನುಭವಿಸಿದ ವಿವಿಧ ಗ್ರಾಮಗಳ ರೈತರು ದೂರುತ್ತಾರೆ.

ಟಾಪ್ ನ್ಯೂಸ್

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.