ಗಾಂಧೀಜಿ ಚಿಂತನೆಗಳು ಚಳವಳಿಗೆ ಪ್ರೇರಣೆ

Team Udayavani, Oct 27, 2019, 3:08 AM IST

gandhiji

ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಹಲವು ಜನಪರ ಚಳವಳಿಗಳ ಮೇಲೆ ಗಾಂಧೀಜಿ ಅವರ ಚಿಂತನೆಗಳು ಪ್ರಭಾವ ಬೀರಿವೆ ಎಂದು ಲೇಖಕ ಹಾಗೂ ಬೆಂಗಳೂರು ವಿವಿಯ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ನಟರಾಜ್‌ ಹುಳಿಯಾರ್‌ ಅಭಿಪ್ರಾಯಪಟ್ಟರು.

ಕೇಂದ್ರ ಸಾಹಿತ್ಯ ಅಕಾಡೆಮಿ, ಸೆಂಟ್ರಲ್‌ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ “ಕನ್ನಡದಲ್ಲಿ ಗಾಂಧೀ ಸ್ವೀಕಾರ’ ಕುರಿತ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವನೂರು ಮಹಾದೇವ ಅವರ ದಲಿತ ಚಳವಳಿ ಸೇರಿದಂತೆ ಹಲವು ಚಳವಳಿಗಳಲ್ಲಿ ಗಾಂಧೀಜಿ ಅವರ ಚಿಂತನೆಗಳಿವೆ ಎಂದರು.

ಗಾಂಧೀಜಿ ಚಿಂತನೆ ಮತ್ತು ಶಾಂತಿಯುತ ಹೋರಾಟಗಳು ಒಂದು ಕಾಲಘಟ್ಟಕ್ಕೆ ಸೀಮಿತವಾಗಿಲ್ಲ. ಹೀಗಾಗಿಯೇ ಎಲ್ಲಾ ಕಾಲಘಟ್ಟಕ್ಕೂ ಪ್ರಸ್ತುತವಾಗಿ ನಿಲ್ಲುತ್ತವೆ. ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದಾಗ ಗಾಂಧೀಜಿ ಅವರನ್ನು ಮತ್ತೆ ಓದುವ ಅವಶ್ಯಕತೆಯಿದೆ ಎನಿಸುತ್ತದೆ ಎಂದು ತಿಳಿಸಿದರು.

ರಾಷ್ಟ್ರಕವಿ ಕುವೆಂಪು, ಪಿ.ಲಂಕೇಶ್‌, ಶಿವರಾಮ ಕಾರಂತ, ಪೂರ್ಣಚಂದ್ರ ತೇಜಸ್ವಿ, ಚಂದ್ರಶೇಖರ ಕಂಬಾರ ಮತ್ತು ಸಿದ್ದಲಿಂಗಯ್ಯ ಅವರ ಸಾಹಿತ್ಯದಲ್ಲೂ ಗಾಂಧೀಜಿ ಅವರನ್ನು ಕಾಣಬಹುದಾಗಿದೆ. ಕಾರಂತರ ಚೋಮನದುಡಿ, ದೇವನೂರರ‌ ಎದೆಗೆ ಬಿದ್ದ ಅಕ್ಷರ, ತೇಜಸ್ವಿಯ ಕರ್ವಾಲೋ ಸೇರಿದಂತೆ ಅನೇಕರ ಕೃತಿಗಳಲ್ಲಿ ಗಾಂಧೀಯ ಚಿಂತನೆಗಳಿವೆ ಎಂದು ಹೇಳಿದರು.

ಗಾಂಧೀಜಿ ಅವರ ಅಹಿಂಸೆ ಮಾರ್ಗ ದುರ್ಬಲ ಅಸ್ತ್ರವಲ್ಲ ಅದು ಶೌರ್ಯದ ಅಸ್ತ್ರವಾಗಿದೆ. ಮಹಾತ್ಮ ಗಾಂಧಿಯವರ ಆತ್ಮಕತೆ ಹಲವಾರು ಭಾಷೆಗಳಿಗೆ ಭಾಷಾಂತರವಾಗಿದೆ. ಆದರೆ ಎಂದಿಗೂ ಅವರು ಆ ಕೃತಿಯನ್ನು ಆತ್ಮಕತೆ ಎನ್ನದೆ ಸತ್ಯಾನ್ವೇಷಣೆ, ಸತ್ಯದೊಂದಿಗಿನ ಪ್ರಯೋಗ ಎಂದಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಭಾಷಾಂತರ ಕೇಂದ್ರದ ಗೌರವ ನಿರ್ದೇಶಕ ಎಸ್‌.ಆರ್‌.ವಿಜಯಶಂಕರ ಮಾತನಾಡಿ, ಇತ್ತೀಚಿನ ವಿದ್ಯಮಾನಗಳನ್ನು ಗಮನಿಸಿದಾಗ ಗಾಂಧೀಜಿ ಅವರು ಪ್ರಸ್ತುತವಾಗಿ ನಿಲ್ಲುತ್ತಾರೆ ಎಂದು ಹೇಳಿದರು. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ, ಕವಿ ಸಿದ್ದಲಿಂಗಯ್ಯ, ಹಿರಿಯ ವಿದ್ವಾಂಸ ಶಿವರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.