ಅರ್ಜಿ ವಿಚಾರಣೆ ಮುಂದಕ್ಕೆ
Team Udayavani, Oct 31, 2019, 3:03 AM IST
ಬೆಂಗಳೂರು: ಟಿಪ್ಪು ಜಯಂತಿ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ರಾಜ್ಯ ಸರ್ಕಾರದ ಆದೇಶ ರದ್ದು ಪಡಿಸುವಂತೆ ಕೋರಿ ಉತ್ತರ ಪ್ರದೇಶದ ಲಕ್ನೋ ನಿವಾಸಿ ಬಿಲಾಲ್ ಆಲಿ ಷಾ, ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಮತ್ತು ಟಿಪ್ಪು ರಾಷ್ಟ್ರೀಯ ಸೇವಾ ಸಂಘ ಸಲ್ಲಿಸಿದ್ದ ಅರ್ಜಿ, ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ, ರಾಜ್ಯ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಹಾಜರಾಗಿ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣಾ ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಕೋರಿದರು. ಆಗ ಅರ್ಜಿದಾರರ ಪರ ವಕೀಲರು ನ.10ಕ್ಕೆ ಜಯಂತಿ ಇದೆ. ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಸಮಯ ಕಡಿಮೆ ಇದೆ. ಆದ್ಯತೆ ಮೇಲೆ ಈ ಅರ್ಜಿ ಪರಿಗಣಿಸಬೇಕು ಎಂದು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ನ.4ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ