ಮನೆಯ ಚಾವಡಿಯಲ್ಲಿ ಆರಂಭಗೊಂಡ ಶಾಲೆಗೀಗ 115ರ ಸಂಭ್ರಮ

ಸ. ಮಾ.ಹಿ.ಪ್ರಾ. ಶಾಲೆ ಪೆರ್ವಾಜೆ

Team Udayavani, Nov 7, 2019, 5:19 AM IST

pervaje

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಕಾರ್ಕಳ : ಪೆರ್ವಾಜೆಯ ಕಿನ್ನಿಮಾದ ಶೆಟ್ಟಿಗಾರ ಎಂಬವರ ಮನೆಯ ಆವರಣದಲ್ಲಿ 1902ರಲ್ಲಿ ಆರಂಭಗೊಂಡ ಈ ಸರಕಾರಿ ಪ್ರಾಥಮಿಕ ಶಾಲೆಯೀಗ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.
1977ರಲ್ಲಿ ಎಚ್‌. ಶಿವರಾಮ ಶೆಟ್ಟರು ಮುಖ್ಯಶಿಕ್ಷಕರಾಗಿ ನಿಯುಕ್ತಿಗೊಂಡ ಬಳಿಕ
ಈ ಶಾಲೆ ಹಂತ ಹಂತವಾಗಿ ಅಭಿವೃದ್ಧಿಯತ್ತ ಸಾಗಿತು.

ಪ್ರಸ್ತುತ ಈ ಸಂಸ್ಥೆಯಲ್ಲಿ ಒಟ್ಟು 465 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶ್ರೀಮತಿ ಲಕ್ಷಿ¾à ಹೆಗಡೆ ಮುಖ್ಯಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದು, 10 ಮಂದಿ ಸಹಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ.

ವಿಶೇಷ ತರಗತಿ

ಪಾಠ ಪ್ರವಚನದ ಜತೆಗೆ ಯೋಗ ಶಿಕ್ಷಣ, ಭಾರತ ಸೇವಾದಲ, ಗೈಡ್ಸ್‌ ತರಬೇತಿಗಳು ನಡೆಸಲ್ಪಡುತ್ತಿವೆ. ಗುಬ್ಬಚ್ಚಿ ನ್ಪೋಕನ್‌ ಇಂಗ್ಲೀಷ್‌, ಕಂಪ್ಯೂಟರ್‌ ಶಿಕ್ಷಣ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬೆಳಗ್ಗೆ 9 ಗಂಟೆಯಿಂದ
ವಿಶೇಷ ತರಗತಿ, ನುರಿತ ಶಿಕ್ಷಕರಿಂದ ನಲಿ-ಕಲಿ ತರಗತಿ, ಸುಸಜ್ಜಿತವಾದ
ವಾಚನಾಲಯ ವ್ಯವಸ್ಥೆ, ವಿಜ್ಞಾನ ಪ್ರಯೋಗಾಲಯ ಸಹಿತ ಎಲ್ಲ
ವ್ಯವಸ್ಥೆಗಳೂ ಈ ಶಾಲೆಯಲ್ಲಿವೆ.

ಇಂಗ್ಲಿಷ್‌ ಶಿಕ್ಷಣ
2019-20ನೇ ಶೈಕ್ಷಣಿಕ ವರ್ಷದಿಂದ 1ನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ
ಪ್ರಾರಂಭವಾಗಿದೆ. 7ನೇ ತರಗತಿಯ ವಿದ್ಯಾರ್ಥಿಗಳಿಗೆ ನ್ಪೋಕನ್‌ ಇಂಗ್ಲೀಷ್‌ ನೆರೆಯ ಸುಂದರ ಪುರಾಣಿಕ ಸ್ಮಾರಕ ಪ್ರೌಢಶಾಲೆಯಲ್ಲಿ ಉಚಿತವಾಗಿ ನೀಡಲ್ಪಡುತ್ತಿದೆ. ಅಲ್ಲದೆ ಪ್ರೌಢಶಾಲೆಯ ಅಟಲ್‌ ಟಿಂಕರಿಂಗ್‌ ಲ್ಯಾಬ್‌ ಕೂಡ 6ನೇ ಮತ್ತು 7ನೇ ತರಗತಿಯವರಿಗೆ ಬಳಕೆಯಾಗುತ್ತಿದೆ. ಶ್ರೀರಮಣ ಆಚಾರ್‌ 11 ವರ್ಷಗಳ ಕಾಲ ಎಸ್‌.ಡಿ.ಎಂ.ಸಿ. ಅಧ್ಯಕ್ಷರಾಗಿ ಶಾಲಾಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

ಪ್ರಸ್ತುತ ರಮೇಶ್‌ ಶೆಟ್ಟಿಗಾರ್‌ ಎಸ್‌.ಡಿ.ಎಂ.ಸಿ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹಳೆ ವಿದ್ಯಾರ್ಥಿಗಳು
ಇಸ್ರೋದಲ್ಲಿ 35 ವರ್ಷ ಕಾರ್ಯನಿರ್ವಹಿಸಿರುವ ವಿಜ್ಞಾನಿ ಇಡ್ಯ ಜನಾರ್ದನ್‌ ಈ ಶಾಲೆಯ ಹಳೆ ವಿದ್ಯಾರ್ಥಿ. ಪ್ರಸ್ತುತ ಇಸ್ರೋದಲ್ಲಿರುವ ವೈ. ದೇವದಾಸ ಶೆಣೈ ಮಣಿಪಾಲ ಕೆಎಂಸಿಯ ಮೂಳೆ ತಜ್ಞ ಡಾ| ಶರತ್‌ ಸೇರಿದಂತೆ ಹಲವಾರು ಮಂದಿ ವೈದ್ಯರು ಎಂಜಿನಿಯರ್‌ಗಳು ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಕ ಪಡೆದಿದ್ದಾರೆ.

ಇಲ್ಲಿ ಗುಣಮಟ್ಟದ, ನೈತಿಕ ಶಿಕ್ಷಣ ದೊರೆಯುತ್ತಿರುವುದರಿಂದ ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕ್ರೀಡಾ ಕ್ಷೇತ್ರದಲ್ಲೂ ಇಲ್ಲಿನ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.

ಪ್ರಸ್ತುತ ನಮ್ಮ ಶಾಲೆಯಲ್ಲಿ 465 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಖಾಸಗಿ ಶಾಲೆಗಳಿಂದಲೂ ವಿದ್ಯಾರ್ಥಿಗಳು ನಮ್ಮ ಶಾಲೆಗೆ ದಾಖಲಾಗುತ್ತಿರುವು ದನ್ನು ಕಂಡಾಗ ಶಾಲೆ ಕುರಿತು ಹೆಮ್ಮೆ ಎನಿಸುತ್ತಿದೆ. ಹಳೆ ವಿದ್ಯಾರ್ಥಿಗಳ, ಪೋಷಕರ, ಊರವರ, ದಾನಿಗಳ ಸಹಾಯದಿಂದ ಶಾಲೆ ಅಭಿವೃದ್ಧಿ ಪಥದತ್ತಸಾಗುತ್ತಿದೆ.
-ಲಕ್ಷಿ¾à ಹೆಗಡೆ, , ಮುಖ್ಯಶಿಕ್ಷಕರು

1951ರ ಸಂದರ್ಭ 5ನೇ ತರಗತಿವರೆಗೆ ಅನಂತಶಯನ ಗೋಪುರದಲ್ಲಿ ಪಾಠ ಪ್ರವಚನ ನಡೆಯುತ್ತಿತ್ತು. ತಾಲೂಕಿನ ವಿವಿಧೆಡೆಯ ವಿದ್ಯಾರ್ಥಿಗಳು ಅಂದು ಈ ಶಾಲೆಯನ್ನೇ ಅವಲಂಬಿಸಿದ್ದರು. ಇಲ್ಲಿನ ಹಳೆ ವಿದ್ಯಾರ್ಥಿ ಎನ್ನುವ ಹೆಮ್ಮೆ ನನ್ನದು.
-ಇಡ್ಯ ಜನಾರ್ದನ್‌, ಇಸ್ರೋ ವಿಜ್ಞಾನಿ

-  ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.