ಕೃಷ್ಣ ಮೃಗ ಸಂರಕ್ಷಣಾ ಪ್ರದೇಶದ ಅಧ್ಯಯನ ಶೀಘ್ರ

ಅಮೃತ ಮಹಲ್‌ ಕಾವಲ್‌ ನಿರ್ವಹಣಾ ಸಮಿತಿ ಸಭೆಯಲ್ಲಿ ತೀರ್ಮಾನ

Team Udayavani, Nov 7, 2019, 5:54 PM IST

7-November-11

„ಎಸ್‌.ಕೆ. ಲಕ್ಷ್ಮೀ ಪ್ರಸಾದ್‌

ಚಿಕ್ಕಮಗಳೂರು: ಬಾಸೂರು ಅಮೃತ ಮಹಲ್‌ ಕಾವಲ್‌ ಕೃಷ್ಣಮೃಗ ಸಂರಕ್ಷಣಾ ಪ್ರದೇಶದಲ್ಲಿ ವೈಜ್ಞಾನಿಕ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದೆ.

ರಾಜ್ಯ ಸರ್ಕಾರ ರಚಿಸಿರುವ ಅಮೃತ ಮಹಲ್‌ ಕಾವಲ್‌ ಕೃಷ್ಣಮೃಗ ನಿರ್ವಹಣಾ ಸಮಿತಿ ಸಭೆ ನ.5ರಂದು, ಸಮಿತಿ ಅಧ್ಯಕ್ಷರೂ ಆದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್‌ಮೋಹನ್‌ ರಾಜ್‌ ಅಧ್ಯಕ್ಷತೆಯಲ್ಲಿ ನಡೆದಿದ್ದು, ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬಾಸೂರು ಕಾವಲ್‌ ಆಡಳಿತಾತ್ಮಕ ನಿರ್ವಹಣಾ ಯೋಜನೆ ರೂಪಿಸಲು ಉಪ ಸಮಿತಿಯೊಂದನ್ನು ರಚಿಸಲಾಗಿದೆ. ಈ ಸಮಿತಿ 45 ದಿನದೊಳಗೆ ಬಾಸೂರು ಕಾವಲ್‌ ಹಾಗೂ ಅಲ್ಲಿರುವ ವನ್ಯ ಪ್ರಾಣಿಗಳ ಸಂರಕ್ಷಣೆಗೆ ಅಗತ್ಯವಾದ ರೂಪುರೇಷೆಗಳನ್ನು ಸಿದ್ಧಪಡಿಸಿ ವರದಿ ನೀಡಲಿದೆ.

ಒಣಭೂಮಿ ಆವಾಸ ಸ್ಥಾನವೆಂದು ಗುರುತಿಸಲಾಗಿರುವ ಅಮೃತ ಮಹಲ್‌ ಕಾವಲ್‌ ಪಶುಸಂಗೋಪನಾ ಇಲಾಖೆಗೆ ಸೇರಿದ್ದರೂ ಅದರ ನಿರ್ವಹಣೆಯನ್ನು ಸರ್ಕಾರ ಅರಣ್ಯ ಇಲಾಖೆಗೆ ವಹಿಸಿದೆ.

ಇತ್ತೀಚೆಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿರ್ವಹಣಾ ಸಮಿತಿ ರಚಿಸಲಾಗಿದೆ. ಇದರ ಸದಸ್ಯರಾಗಿ ಅಜ್ಜಂಪುರದ ಅಮೃತ ಮಹಲ್‌ ಸಂವರ್ಧನ ಕೇಂದ್ರದ ಉಪ ನಿರ್ದೇಶಕರು, ಚಿಕ್ಕಮಗಳೂರು ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕಡೂರು ವಲಯ ಅರಣ್ಯಾಧಿಕಾರಿ, ಸಹಾಯಕ ಕೃಷಿ ನಿರ್ದೇಶಕರು, ದೊಡ್ಡ ಬಾಸೂರು ಗ್ರಾಪಂ ಅಧ್ಯಕ್ಷರು ಹಾಗೂ ವನ್ಯಜೀವಿ ಕಾರ್ಯಕರ್ತ ಜಿ.ವೀರೇಶ್‌, ನ್ಯಾಯವಾದಿ ಬಿ.ವಿ. ದಿನೇಶ್‌ ಕುಮಾರ್‌, ವನ್ಯಜೀವಿ ಛಾಯಾಗ್ರಾಹಕ ಕೆ.ಎನ್‌. ಪ್ರಶಾಂತ್‌ ಅವರಿದ್ದಾರೆ.

ಬಾಸೂರು ಕಾವಲ್‌ ಹಿನ್ನೆಲೆ: ಬಾಸೂರು ಕಾವಲ್‌ ಅನ್ನು ಉಳಿಸುವಂತೆ ಪರಿಸರಾಸಕ್ತರು ಸಲ್ಲಿಸಿದ್ದ ಮನವಿ ಸ್ವೀಕರಿಸಿದ ರಾಜ್ಯ ಸರ್ಕಾರ ಇದನ್ನು ಜೈವಿಕ ಪರಿಸರ ಸಂರಕ್ಷಣಾ ಪ್ರದೇಶವೆಂದು ಘೋಷಿಸಿ, ನಿರ್ವಹಣಾ ಸಮಿತಿ ರಚಿಸಿತ್ತು. ನ.5 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾವಲ್‌ ಸಂರಕ್ಷಣೆಗೆ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂದು ಸೂಕ್ತ ವರದಿ ತಯಾರಿಸಿ ಆಡಳಿತಾತ್ಮಕ ಯೋಜನೆ ರೂಪಿಸಲು ನಿರ್ಧರಿಸಲಾಗಿದೆ.

ಆಡಳಿತಾತ್ಮಕ ಯೋಜನೆ ರೂಪಿಸುವ ಮುನ್ನ ಅಮೃತ ಮಹಲ್‌ ಕಾವಲ್‌ ಬಗ್ಗೆ ವೈಜ್ಞಾನಿಕ ವರದಿಯೊಂದನ್ನು ಸಿದ್ಧಪಡಿಸಲು ಆಲೋಚಿಸಲಾಗಿದ್ದು, ಇದನ್ನು ತಜ್ಞರ ಸಮಿತಿ ಮೂಲಕ ಮಾಡಿಸಲು ಯೋಚಿಸಲಾಗಿದೆ.

ಪರಿಸರಾಸಕ್ತರ ಪ್ರಕಾರ ಹುಲ್ಲುಗಾವಲು ಈಗಾಗಲೇ ಅಲ್ಲಲ್ಲಿ ಒತ್ತುವರಿಯಾಗಿದೆ. ಇಲ್ಲಿರುವ ಭೂ ವಿವಾದಗಳನ್ನು ಪರಿಹರಿಸಬೇಕಾಗಿದೆ. ಅಮೃತ ಮಹಲ್‌ ತಳಿ ಹೊರತುಪಡಿಸಿ ಉಳಿದಂತೆ ಪ್ರತಿನಿತ್ಯ ಮೇಯಲು ಬರುವ ಕುರಿಮಂದೆಗಳನ್ನು ಹಾಗೂ ಇತರೆ ಜಾನುವಾರುಗಳನ್ನು ತಡೆಯಬೇಕು. ಅಕ್ರಮ ಬೇಟೆ ನಡೆಸುವುದು ಮತ್ತು ಉರುಳು ಹಾಕುವುದನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು. ರಕ್ಷಣಾ ಸಿಬ್ಬಂದಿಯನ್ನು ನೇಮಿಸುವುದು ಹಾಗೂ ಯಾವುದೇ ರೀತಿ ಕೃಷಿಗೆ ಅವಕಾಶ ನೀಡಬಾರದೆಂದು ತಿಳಿಸಿ, ಇಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಸೂಕ್ತ ಸಂಬಳ ಮತ್ತು ಇತರೆ ಸೌಲಭ್ಯ ನೀಡಲು ಸಲಹೆಗಳು ಕೇಳಿಬಂದವು.

ಈ ಹುಲ್ಲುಗಾವಲಿನಲ್ಲಿ ಅನಗತ್ಯವಾಗಿ 10 ಕೆರೆಗಳನ್ನು ನಿರ್ಮಿಸಲಾಗಿದೆ. ಮತ್ತೆ ಯಾವುದೇ ರೀತಿಯಲ್ಲೂ ಹುಲ್ಲುಗಾವಲನ್ನು ಕೆತ್ತುವ ಕಾಮಗಾರಿಗಳನ್ನು ಕೈಗೊಳ್ಳಬಾರದು ಎಂದು ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬುಧವಾರದ ಸಭೆಯಲ್ಲಿ ಬಾಸೂರು ಕಾವಲನ್ನು ಅದರ ನೈಸರ್ಗಿಕ ಪರಿಸರದಲ್ಲಿ ಉಳಿಸಲು ಅಗತ್ಯ ಕ್ರಮ ಕೈಗೊಳ್ಳಲು ಸಮಿತಿ ರಚನೆ ಮತ್ತು ವೈಜ್ಞಾನಿಕ ಅಧ್ಯಯನ ಮಾಡಲು ಆಲೋಚಿಸಲಾಗಿದೆ.

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.