ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ

ಗಣಿತ-ವಿಜ್ಞಾನ ಶಿಕ್ಷಕರಿಲ್ಲದೇ ಕಲಿಕೆಗೆ ಹಿನ್ನಡೆ ಕುಡಿಯುವ ನೀರು-ಶೌಚಾಲಯ ಸೌಲಭ್ಯವಿಲ್ಲದೇ ಪರದಾಟ

Team Udayavani, Nov 8, 2019, 12:02 PM IST

8-November-7

„ರವಿ ಶರ್ಮಾ
ಮಾನ್ವಿ:
ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಬಹುತೇಕ ಶಿಕ್ಷಕರ ಹುದ್ದೆ ಖಾಲಿ ಇವೆ. ಪ್ರೌಢಶಾಲೆಗಳಲ್ಲಿ ಗಣಿತ, ವಿಜ್ಞಾನ ಶಿಕ್ಷಕರ ಕೊರತೆ ಇದ್ದು ಎಸ್ಸೆಸ್ಸೆಲ್ಸಿ ಸೇರಿದಂತೆ ವಿವಿಧ ತರಗತಿ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆ ಆಗುತ್ತಿದೆ.

ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸಮಸ್ಯೆಗಳ ಗೂಡಾಗಿವೆ. ಶಿಕ್ಷಕರ ಕೊರತೆ, ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿವೆ. ಕಳೆದ ಮೂರು ವರ್ಷಗಳ ಹಿಂದೆ ನೂತನವಾಗಿ ಪ್ರಾರಂಭವಾದ ತಡಕಲ್‌, ಚೀಕಲಪರ್ವಿ, ಮಲ್ಲಟ, ಅರೋಲಿ, ಕವಿತಾಳ(ಉರ್ದು) ಪ್ರೌಢಶಾಲೆಗಳಿಗೆ ಇದುವರೆಗೆ ಶಿಕ್ಷಕರನ್ನೇ ನೇಮಿಸಿಲ್ಲ. ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಚಿಂತೆ
ಆಗಿದೆ. ಈ ಪ್ರೌಢಶಾಲೆಗಳಿಗೆ ಕಟ್ಟಡವೂ ಇಲ್ಲದಿರುವುದರಿಂದ ಪ್ರಾಥಮಿಕ ಶಾಲೆಗಳ ಕೊಠಡಿಗಳಲ್ಲೇ ಪ್ರೌಢಶಾಲೆ ನಡೆಸಲಾಗುತ್ತಿದೆ.

ಹುದ್ದೆ ಖಾಲಿ: ತಾಲೂಕಿನಲ್ಲಿ 370 ಪ್ರಾಥಮಿಕ ಶಾಲೆಗಳ ಪೈಕಿ 1,564 ಶಿಕ್ಷಕರ ಹುದ್ದೆಗಳಿವೆ. ಇದರಲ್ಲಿ 1,031 ಶಿಕ್ಷಕರಿದ್ದು, 533 ಹುದ್ದೆಗಳು ಖಾಲಿ ಇವೆ. ಇನ್ನು 56 ಪ್ರೌಢಶಾಲೆಗಳಲ್ಲಿ 466 ಹುದ್ದೆ ಮಂಜೂರಾಗಿವೆ. ಈ ಪೈಕಿ 307 ಶಿಕ್ಷಕರಿದ್ದು, 159 ಹುದ್ದೆಗಳು ಖಾಲಿ ಇವೆ. ಗಣಿತ ಮತ್ತು ವಿಜ್ಞಾನ ವಿಷಯ ಶಿಕ್ಷಕರ ಕೊರತೆಯೇ ಹೆಚ್ಚಿದೆ. ಕೆಲ ಶಾಲೆಗಳಲ್ಲಿ ಮುಖ್ಯ ಗುರುಗಳ ಹುದ್ದೆ ಖಾಲಿ ಇವೆ. ಪ್ರಭಾರಿ ಮುಖ್ಯಗುರುಗಳನ್ನು ನೇಮಕ ಮಾಡಲಾಗಿದೆ. ಶಿಕ್ಷಕರ ಕೊರತೆಯಿಂದಾಗಿ ತಾಲೂಕಿನಲ್ಲಿ ವರ್ಷದಿಂದ ವರ್ಷಕ್ಕೆ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ.

ಸೌಕರ್ಯಗಳಿಲ್ಲ: ತಾಲೂಕಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮೂಲ ಸೌಲಭ್ಯಗಳಿಲ್ಲ. ಮಕ್ಕಳಿಗೆ ಶುದ್ಧ ಕುಡಿಯುವ ನೀರಿಲ್ಲ. ಬೇರೆ ಪ್ರದೇಶದಿಂದ ಬರುವ ಮಕ್ಕಳು ಕುಡಿಯುವ ನೀರಿಗಾಗಿ ಬಾಟಲಿ ಹಿಡಿದುಕೊಂಡು ಶಾಲೆಯ ಸುತ್ತಲಿನ ಮನೆ, ಹೊಟೇಲ್‌ ಗಳಿಗೆ ಅಲೆಯುವಂತಾಗಿದೆ. ರಾಜೊಳ್ಳಿ ಪ್ರೌಢಶಾಲೆ ಸೇರಿ ಬಹುತೇಕ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯವಿಲ್ಲ. ವಿದ್ಯಾರ್ಥಿನಿಯರು ಪರದಾಡುವಂತಾಗಿದೆ. ಇನ್ನು ಶಾಲೆಗಳಲ್ಲಿ ಕ್ರೀಡಾ ಮೈದಾನ, ಕ್ರೀಡಾ ಸಾಮಗ್ರಿ ಇಲ್ಲ. ಇದುವರೆಗೆ ಸಮರ್ಪಕವಾಗಿ ಪಠ್ಯಪುಸ್ತಕ ವಿತರಿಸಿಲ್ಲ. ಶಿಕ್ಷಕರ ಕೊರತೆಗೆ ಬೇಸತ್ತ ಮಲ್ಲಟ ಶಾಲಾ ವಿದ್ಯಾರ್ಥಿಗಳು ಇತ್ತೀಚೆಗೆ ಶಾಸಕರಿಗೆ ಫೋನ್‌ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ.

ಸೌಲಭ್ಯ ಕಲ್ಪಿಸಲು ನಿರ್ಲಕ್ಷ್ಯ: ಗ್ರಾಮ ಪಂಚಾಯಿತಿಗೆ ಮಂಜೂರಾಗುವ ಅನುದಾನದಲ್ಲಿ ಶೇ.25ರಿಂದ 30ರಷ್ಟು ಶೈಕ್ಷಣಿಕ ಕ್ಷೇತ್ರಕ್ಕೆ ಬಳಸಿಕೊಳ್ಳಲು ಅವಕಾಶವಿದ್ದರೂ ಗ್ರಾಮ ಪಂಚಾಯಿತಿಗಳು ಮಾತ್ರ ನಿರ್ಲಕ್ಷ್ಯ ವಹಿಸುತ್ತಿವೆ. ಗ್ರಾಪಂ ವ್ಯಾಪ್ತಿಯಲ್ಲಿನ ಶಾಲೆಗಳಿಗೆ ಕುಡಿಯುವ ನೀರು ಸರಬರಾಜು, ಪೈಪ್‌ಲೈನ್‌, ಕಾಂಪೌಂಡ್‌, ಕೊಠಡಿ ನಿರ್ಮಾಣ, ಕ್ರೀಡಾ ಮೈದಾನ ಅಭಿವೃದ್ಧಿ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಗ್ರಾಪಂ ಅನುದಾನ ಮೀಸಲಿಡಬೇಕು. ಆದರೆ ಗ್ರಾಪಂ ಅಧಿಕಾರಿಗಳು ಮತ್ತು ಸದಸ್ಯರು ಇದಕ್ಕೆ ಆಸಕ್ತಿ ತೋರುತ್ತಿಲ್ಲ. ಹೀಗಾಗಿ ಶಾಲೆಗಳು ಸೌಲಭ್ಯ ವಂಚಿತ ಆಗುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.

ತಾಲೂಕಿನ ಪ್ರೌಢಶಾಲೆಗಳಲ್ಲಿ ವಿಷಯವಾರು ಶಿಕ್ಷಕರನ್ನು ನೇಮಿಸದಿದ್ದಲ್ಲಿ ಮುಂಬರುವ ಎಸ್ಸೆಸ್ಸೆಲ್ಸಿ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಗಮನಹರಿಸಬೇಕು. ಶಿಕ್ಷಕರನ್ನು ನೇಮಕ ಮಾಡಬೇಕು. ಶಾಲೆಗಳಿಗೆ ಸೌಲಭ್ಯ ಕಲ್ಪಿಸಬೇಕೆಂದು ಪಾಲಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.