ಮುಂದುವರಿದ ಅಹೋರಾತ್ರಿ ಧರಣಿ

Team Udayavani, Nov 8, 2019, 12:31 PM IST

bg-tdy-3

ಬೆಳಗಾವಿ: ರಾಜ್ಯ ಅಂಗವಿಕಲರು ಹಾಗೂ ವಿವಿಧೋದ್ದೇಶ, ಗ್ರಾಮೀಣ ಮತ್ತು ನಗರ ಪುನರ್ವಸತಿ ಅಂಗವಿಕಲರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರವೂ ಮುಂದುವರಿದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಬರುವವರೆಗೆ ಪ್ರತಿಭಟನೆ ಹಿಂಪಡೆಯದಿರಲು ನಿರ್ಧರಿಸಿದ್ದಾರೆ.

ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಿಸುವಂತೆ ಆಗ್ರಹಿಸಿ ನಡೆಸಿದ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರದಿಂದ ಆರಂಭಿಸಿರುವ ಧರಣಿಯಿಂದ ಹಿಂದಕ್ಕೆ ಸರಿಯಲು ಒಪ್ಪದ ಕಾರ್ಯಕರ್ತರು, ಮಳೆ-ಬಿಸಿಲು ಲೆಕ್ಕಿಸದೇ ಮುಂದುವರಿಸಿದ್ದಾರೆ. ಸ್ಥಳಕ್ಕೆ ಸಚಿವೆ ಜೊಲ್ಲೆ ಬರುವಂತೆ ಪಟ್ಟು ಹಿಡಿದು ಕುಳಿತಿದ್ದಾರೆ. ಸ್ಥಳಕ್ಕೆ ಜನಪ್ರತಿನಿ ಧಿಗಳು, ಜಿಲ್ಲಾಧಿಕಾರಿಗಳು ಭೇಟಿ ನೀಡಿಲ್ಲ. ಬೇಡಿಕೆಗಳಿಗೆ ಸ್ಪಂದಿಸದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಜಿಪಂ ಸಿಇಒ ಡಾ. ರಾಜೇಂದ್ರ ಕೆ.ವಿ. ಭೇಟಿ ನೀಡಿ ಅಂಗವಿಕಲರ ಮನವಿ ಸ್ವೀಕರಿಸಿದರು. ಧರಣಿ ಹಿಂಪಡೆಯುವಂತೆ ಪ್ರತಿಭಟನಾಕಾರರ ಮನವೊಲಿಸಲೂ ಯತ್ನಿಸಿದರೂ ಸಾಧ್ಯವಾಗಲಿಲ್ಲ. ಪೊಲೀಸರು ಬಂದು ಧರಣಿ ಹಿಂಪಡೆಯಲು ಮನವೊಲಿಸಿದರೂ ಇದಕ್ಕೆ ಒಪ್ಪದೇ ಮುಂದುವರಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಅಡುಗೆ ತಯಾರಿಸಿ ಊಟ ಮಾಡುತ್ತಿದ್ದಾರೆ. ರಾಜ್ಯದ 6022 ಗ್ರಾಮ ಪಂಚಾಯತ್‌ ಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರ ಪ್ರದೇಶದಲ್ಲಿ 613 ಜನ ಹಾಗೂ 176 ತಾಲೂಕು ಪಂಚಾಯತ್‌ಗಳಲ್ಲಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಸೇವೆ ಸಲ್ಲಿಸುತ್ತಿದ್ದಾರೆ.

ಸರಿಯಾದ ವೇತನ ಇಲ್ಲದೇ ನಿತ್ಯ ಸಮಸ್ಯೆ ಅನುಭವಿಸುವಂತಾಗಿದೆ. ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರಿಗೆ ಕೇವಲ ಮೂರು ಸಾವಿರ ರೂ. ಮತ್ತು ವಿವಿಧೋದ್ದೇಶ ಕಾರ್ಯಕರ್ತರಿಗೆ ಆರು ಸಾವಿರ ರೂ. ಗೌರವ ಧನ ನೀಡಲಾಗುತ್ತಿದೆ. ಈ ವೇತನ ಯಾವುದಕ್ಕೂ ಸಾಲುತ್ತಿಲ್ಲ. ವೇತನ ಹೆಚ್ಚಳಕ್ಕಾಗಿ ಅನೇಕ ಸಲ ಹೋರಾಟ ಮಾಡಿದರೂ ಯಾರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ರಾಜ್ಯ ಒಕ್ಕೂಟದ ಅಧ್ಯಕ್ಷ ಫಕ್ಕೀರಗೌಡ ಪಾಟೀಲ, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕಿರಣ ಈಳಗೇರ, ಸೂರಜ   ಧಾಮಣೇಕರ, ಮಹಾಂತೇಶ ಹೊಂಗಲ, ನಾಗೇಶ ಕುಂಬಾರ ಇತರರು ಇದ್ದರು.

ಟಾಪ್ ನ್ಯೂಸ್

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.