ಕೊಣ್ಣೂರು ಹೆದ್ದಾರಿಯಲ್ಲಿ ಸರ್ಕಸ್‌!

Team Udayavani, Nov 9, 2019, 1:28 PM IST

gadaga-tdy-1

ನರಗುಂದ: ರಸ್ತೆ ತುಂಬೆಲ್ಲ ತಗ್ಗುದಿನ್ನೆ ಎದುರಿನ ವಾಹನದ ಮಾರ್ಗ ನೋಡಿಕೊಂಡು ಮತ್ತೂಂದೆಡೆವಾಲದಂತೆ ಸಾಗಬೇಕು.. ಬೈಕ್‌ ಸವಾರರ ತಾಪತ್ರಯ ಹೇಳತೀರದು.. ಒಟ್ಟಾರೆ ಧೂಳಿನಿಂದ ಕೂಡಿದ ಹೆದ್ದಾರಿಯಲ್ಲಿ ವಾಹನಗಳು ಸಂಚಾರಕ್ಕೆ ಸರ್ಕಸ್‌ ಮಾಡುವಂತಾಗಿದೆ.

ನಿತ್ಯ ಸಾವಿರಾರು ವಾಹನಗಳ ದಟ್ಟಣೆ ಹೊಂದಿದ ನಂ. 218ರ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ತಾಲೂಕಿನ ಕೊಣ್ಣೂರ ಬಳಿಯ ಮಲಪ್ರಭಾ ನದಿ ಸೇತುವೆ ಅಕ್ಕಪಕ್ಕ ಈ ಪರಿಸ್ಥಿತಿಯಿದೆ.

ಭಾರೀ ವಾಹನಗಳ ಪರದಾಟ: 400 ಮೀಟರ್‌ನಷ್ಟು ಸಂಚಾರ ತೀರಾ ಕಡಿದಾಗಿದ್ದು, ಭಾರೀ ವಾಹನಗಳ ಪಾಡು ಹೇಳತೀರದು. ವಾಹನಗಳು ತಗ್ಗು ದಿನ್ನೆಗಳಲ್ಲಿ ಎತ್ತಲಾದರೂ ವಾಲಿದರೆ ನೆಲಕಚ್ಚುವುದು ನಿಶ್ಚಿತ.

ಹೀಗಾಗಿ ಭಾರೀ ವಾಹನಗಳ ಸವಾರರು ಮೈಯೆಲ್ಲ ಕಣ್ಣಾಗಿ ವಾಹನ ಚಲಾಯಿಸಬೇಕು. ಇನ್ನು ಬೆಲೆಬಾಳುವ ಕಾರುಗಳು ನೆಲದಿಂದ ಒಂದಡಿಯಷ್ಟೇ ಎತ್ತರ ಇರುವುದರಿಂದ ತಗ್ಗು ದಿನ್ನೆಗಳಲ್ಲಿ ಎಲ್ಲಿ ವಾಹನ ಮುಂಭಾಗ ನಜ್ಜುಗುಜ್ಜಾಗುತ್ತದೋ ಎಂಬ ಆತಂಕದಲ್ಲೇ ಸಾಗಬೇಕು. ಬೈಕ್‌ ಸವಾರರು ನಿಧಾಗತಿಯಲ್ಲಿ ಸಾಗಿದರೂ ಮೇಲೆ ಕುಂತವರು ಎದ್ದು ಕೂಡುತ್ತಲೇ ಸಾಗಬೇಕು.

ಒಟ್ಟಾರೆ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸರ್ಕಸ್‌ನಂತೆ ಗೋಚರಿಸುತ್ತಿದೆ. ಎರಡು ತಿಂಗಳ ಅವಧಿಯಲ್ಲಿ ಮೂರು ಬಾರಿ ಬಂದ ಮಲಪ್ರಭಾ ನದಿ ಪ್ರವಾಹದಿಂದ ಈ ಸಮಸ್ಯೆ ಎದುರಾಗಿದೆ. ಸೇತುವೆಯಿಂದ ಕೊಣ್ಣೂರು ಕಡೆಗಿನ ಸಂಪರ್ಕ ರಸ್ತೆಯನ್ನು ಪ್ರವಾಹ ಸಂದರ್ಭದಲ್ಲಿ 2-3 ಕಡೆಗೆ ಜೆಸಿಬಿಯಿಂದ ಕೊರೆದ ಪರಿಣಾಮ ಇಂದಿಗೂ ತಾತ್ಕಾಲಿಕ ಸಂಚಾರಕ್ಕೆ ಅನುವಿರುವ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಸಂಚಕಾರ ತರುವಂತಿದೆ. ಹೆಜ್ಜೆಗೊಂದು ಕಂದಕಗಳು ಸಂಚಾರಕ್ಕೆ ಮಾರಕವಾಗಿದೆ. ಇಲ್ಲಿನ ಧೂಳು ಪ್ರಯಾಣಿಕರ ನಿದ್ದೆಗೆಡಿಸಿದೆ.

ಹಳೆ ಸೇತುವೆ ಬಂದ್‌: ಹೊಸ ಸೇತುವೆ ಪಕ್ಕದಲ್ಲೇ ಹಳೆಯ ಸೇತುವೆ ಸಂಪರ್ಕ ರಸ್ತೆಯೂ ಸ್ಥಗಿತದಿಂದ ಎಲ್ಲ ವಾಹನಗಳೂ ಇದೇ ಎಡರು ತೊಡರಿನ ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ಹಗಲು ರಾತ್ರಿಯೆನ್ನದೇ ವಾಹನ ದಟ್ಟಣೆಯಷ್ಟೇ ಸಂಚಾರವೂ ಕಷ್ಟಕರವಾಗಿ ಸಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ನರಗುಂದ ಉಪ ವಿಭಾಗ ಈ ಸಮಸ್ಯೆಗೆ ಯಾವಾಗ ಮುಕ್ತಿ ಹಾಡುವುದೋ ಕಾಯ್ದುನೋಡಬೇಕಿದೆ.

ಕಮಾನು ನಿರ್ಮಾಣಕ್ಕೆ ಕ್ರಿಯಾಯೋಜನೆ:  ಕೊಣ್ಣೂರ ಗ್ರಾಮದಿಂದ ಸೇತುವೆ ಸಂಪರ್ಕಿಸುವ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಇಲ್ಲಿ ಕಮಾನು ನಿರ್ಮಿಸುವ ಕ್ರಿಯಾಯೋಜನೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ತಯಾರಿಸಿದ್ದಾರೆ. ಆ. 8ರಂದು ಪ್ರವಾಹ ಉಕ್ಕಿಹರಿದ ಬಳಿಕ ಹೆದ್ದಾರಿ ದುರಸ್ತಿಗೆ 99 ಲಕ್ಷ ವೆಚ್ಚ ಕ್ರಿಯಾಯೋಜನೆ ಸಲ್ಲಿಸಿ ಸರಕಾರದಿಂದ ಅನುಮೋದನೆ ಪಡೆಯಲಾಗಿತ್ತು. ಬಳಿಕ ಮತ್ತೇ ಎರಡು ಬಾರಿ ಪ್ರವಾಹದಿಂದ ಶಾಶ್ವತ ಪರಿಹಾರಕ್ಕಾಗಿ ಈ ಭಾಗದಲ್ಲಿ 60 ಮೀ. ಉದ್ದ, 4 ಅಡಿ ಎತ್ತರ ಕಮಾನು ಮೂಲಕ ಹೆದ್ದಾರಿ ಸುಧಾರಣೆಗೆ 2.30 ಕೋಟಿ ರೂ. ಕ್ರಿಯಾಯೋಜನೆ ತಯಾರಿಸಿ ಸಲ್ಲಿಸಿದ್ದು, ಅನುಮೋದನೆ ದೊರಕಿಲ್ಲ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

99 ಲಕ್ಷ ವೆಚ್ಚದ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆಯಲಾಗಿತ್ತು. ಶಾಶ್ವತ ಪರಿಹಾರ ದೃಷ್ಟಿಯಿಂದ ಬಾಕ್ಸ್‌ ಕನ್ವರ್ಟ್‌ ಕ್ರಿಯಾಯೋಜನೆ ತಯಾರಿಸಿ 2.30 ಕೋಟಿ ವೆಚ್ಚದ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇನ್ನೂ ಅನುಮೋದನೆ ದೊರಕಿಲ್ಲ. ರಾಜೇಂದ್ರ, ರಾಷ್ಟ್ರೀಯ ಹೆದ್ದಾರಿ ಉಪವಿಭಾಗ ಎಇಇ

-ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.