ವಸ್ತು ಪ್ರದರ್ಶನ ಹೊಸತನದಿಂದ ಕೂಡಿರಲಿ


Team Udayavani, Nov 10, 2019, 6:20 PM IST

tk-tdy-2

ತುಮಕೂರು: ಶಿರಾ ತಾಲೂಕು ಪಟ್ಟನಾಯಕನ ಹಳ್ಳಿಯಲ್ಲಿ 2020ರ ಜ.16ರಿಂದ 22ರವರೆಗೆ ನಡೆಯಲಿರುವ ಶ್ರೀ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಜಾತ್ರೆಯಲ್ಲಿ ವಿವಿಧ ಇಲಾಖೆಗಳಿಂದ ಏರ್ಪಡಿಸುವ ವಸ್ತುಪ್ರದರ್ಶನ ಹೊಸತನದಿಂದ ಕೂಡಿರಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್‌ ಅಧಿಕಾರಿಗಳಿಗೆ ಸೂಚಿಸಿದರು.

ಪ್ಲಾಸ್ಟಿಕ್‌ ಬಳಸಬಾರದು: ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿ, ಇಲಾಖೆ ಕಾರ್ಯಕ್ರಮ ಹಾಗೂ ಸಾಧನೆ ಕುರಿತು ಮಳಿಗೆ ತೆರೆದು ವಸ್ತುಪ್ರದರ್ಶನ ಏರ್ಪಡಿಸಬೇಕು. ವಸ್ತುಪ್ರದರ್ಶನದಲ್ಲಿ ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಎಲ್ಲ ಇಲಾಖೆಗಳು ಸಾರ್ವಜನಿಕ ಅರಿವು ಮೂಡಿಸಬೇಕು. ಫ್ಲೆಕ್ಸ್‌ ಮತ್ತಿತರ ಪ್ರಚಾರ ಸಾಮಗ್ರಿಗಳಿಗೆ ಪ್ಲಾಸ್ಟಿಕ್‌ ಬಳಸಬಾರದು ಎಂದು ತಾಕೀತು ಮಾಡಿದರು.

ಉಪಯುಕ್ತ ಮಾಹಿತಿ ನೀಡಿ: ಶಿಕ್ಷಣ, ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ, ಮೀನುಗಾರಿಕೆ, ಕೈಮಗ್ಗ ಮತ್ತು ಜವಳಿ, ವಾರ್ತಾ ಮತ್ತು ಸಾರ್ವಜನಿಕ, ಆರೋಗ್ಯ, ಯುವ ಸಬಲೀಕರಣ ಮತ್ತು ಕ್ರೀಡಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿ ಒಟ್ಟು 13 ಇಲಾಖೆಗಳು ವಸ್ತು ಪ್ರದರ್ಶನದಲ್ಲಿ ಭಾಗ ವಹಿಸಲಿವೆ. ಕಾಟಾಚಾರಕ್ಕೆ ಮಳಿಗೆ ತೆರೆಯದೆ ಜನರಿಗೆ ಉಪಯುಕ್ತ ಮಾಹಿತಿ ನೀಡಬೇಕು. ಇದಕ್ಕಾಗಿ ಸಿಬ್ಬಂದಿ ನೇಮಿಸಬೇಕು ಎಂದು ಹೇಳಿದರು.

ಶಿಕ್ಷಣ ಇಲಾಖೆಯಿಂದ ಮಕ್ಕಳಿಗಾಗಿ ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸುವುದರೊಂದಿಗೆ ನಾಸಾ ವಿಜ್ಞಾನಿಗಳನ್ನು ಕರೆಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಬೇಕು. ಎಸ್‌ಎಸ್‌ಎಲ್‌ಸಿ ನಂತರ ಯಾವ ಕೋರ್ಸ್‌ ಓದಬೇಕೆಂಬ ಉಪಯುಕ್ತ ಮಾಹಿತಿ ಒದಗಿಸಬೇಕೆಂದರು.

ಸೆಲ್ಫಿಪಾಯಿಂಟ್‌ ವ್ಯವಸ್ಥೆ ಮಾಡಿ: ಅರಣ್ಯ ಇಲಾಖೆಯಿಂದ ಬೀಜದುಂಡೆ ತಯಾರಿಕೆ, ನೆಡು ತೋಪು ನಿರ್ಮಾಣದ ಪ್ರಾತ್ಯಕ್ಷಿಕೆಯೊಂದಿಗೆ ವಿವಿಧ ಸಸಿ ಪ್ರದರ್ಶನಕ್ಕಿಟ್ಟು ಮಾಹಿತಿ ನೀಡಬೇಕು. ಜನಾ ಕರ್ಷಣೆಗಾಗಿ ಪರಿಸರ ರಕ್ಷಣೆ ಬಗ್ಗೆ ಘೋಷವಾಕ್ಯ ಬರೆಸಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹಿರಿಯರು ಹಾಗೂ ಮಕ್ಕಳಿಗಾಗಿ ಪ್ರತ್ಯೇಕವಾಗಿ ಸೆಲ್ಫಿ  ಪಾಯಿಂಟ್‌ ವ್ಯವಸ್ಥೆ ಮಾಡಬೇಕು. ಉಚಿತ ರಕ್ತದಾನ ಶಿಬಿರ, ಆರೋಗ್ಯ, ದಂತ ತಪಾಸಣಾ ಶಿಬಿರ ಏರ್ಪಡಿಸಬೇಕು. ಹಾವು, ನಾಯಿ ಕಡಿತಕ್ಕೆ ಪ್ರಥಮ ಚಿಕಿತ್ಸೆ ಕುರಿತು ವಿಡಿಯೋ ಪ್ರದರ್ಶಿಸಲು, ಅಸ್ಪೃಶ್ಯತೆ ನಿವಾರಣೆಗೆ ಸಂಬಂಧಿಸಿ ಬೀದಿ ನಾಟಕ ಹಮ್ಮಿ ಕೊಳ್ಳಲು, ಅಲಂಕಾರಿಕ ಮೀನು, ವಸ್ತು  ಪ್ರದರ್ಶಿಸಲು, ಸಿರಿಧಾನ್ಯಗಳಿಂದ ಆಹಾರ ತಯಾರಿಸುವ ಪ್ರಾತ್ಯಕ್ಷಿಕೆ ನೀಡಲು ಆಯಾ ಇಲಾಖೆಗಳಿಗೆ ಸಲಹೆ ನೀಡಿದರು.

ಜಿಪಂ ಉಪಕಾರ್ಯದರ್ಶಿ ಕೃಷ್ಣಮೂರ್ತಿ, ಯೋಜನಾಧಿಕಾರಿ, ಮಂಜುನಾಥ್‌, ಶಿರಾ ತಾಪಂ ಇಒ ಮೋಹನ್‌, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲಲಿತಾ ಕುಮಾರಿ ಇದ್ದರು.

ಟಾಪ್ ನ್ಯೂಸ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.