ಕುಷ್ಟಗಿಯಲ್ಲಿ ನಿತ್ಯ ಧೂಳು ಮಜ್ಜನ


Team Udayavani, Nov 11, 2019, 2:54 PM IST

kopala-tdy-2

ಕುಷ್ಟಗಿ: ಪಟ್ಟಣದ ಮುಖ್ಯ ರಸ್ತೆಗಳಲ್ಲಿ ವಾಹನ ದಟ್ಟನೆ ಹೆಚ್ಚುತ್ತಿರುವ ಜೊತೆಗೆ ಧೂಳಿನ ಪ್ರಮಾಣವೂ ಹೆಚ್ಚಾಗುತ್ತಿದ್ದು, ಇದರಿಂದ ಪಟ್ಟಣ ಧೂಳುಮಯ ರಸ್ತೆಯಲ್ಲಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಸಂಚರಿಸುವಂತಾಗಿದೆ.

ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ಬಸ್‌ ನಿಲ್ದಾಣ ಮಾರ್ಗದಲ್ಲಿ ಧೂಳು ಹೆಚ್ಚಾಗಿದೆ. ಬಸ್‌, ಲಾರಿ ಇತರೇ ವಾಹನಗಳು ಸಂಚರಿಸಿದರೆ ರಸ್ತೆಯೇ ಕಾಣದಷ್ಟು ಧೂಳು ಏಳುತ್ತದೆ. ಧೂಳಿನಿಂದಾಗಿ ಜನ ತೊಂದರೆ ಅನುಭವಿಸುತ್ತಿದ್ದರೂ ಪುರಸಭೆ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಧೂಳಿನಿಂದ ಶ್ವಾಸಕೋಶ, ಉಸಿರಾಟ ಹಾಗೂ ಚರ್ಮರೋಗಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ.

ಮುಖ್ಯ ರಸ್ತೆಗಳಲ್ಲಿನ ಗುಂಡಿಗಳನ್ನು ಮರಂ ಮಣ್ಣು ಹಾಕಿ ಮುಚ್ಚಿದ್ದು, ಇದೀಗ ಅದೇ ಮಣ್ಣು ವಾಹನಗಳ ಓಡಾಟದಿಂದ ಮೇಲೇಳುತ್ತಿರುವುದು ಮತ್ತೂಂದು ಸಮಸ್ಯೆಗೆ ಕಾರಣವಾಗಿದೆ. ಅಲ್ಲದೇ ಮುಖ್ಯ ರಸ್ತೆಗಳ ಅಕ್ಕಪಕ್ಕದಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆಗಾಲದಲ್ಲಿ ಚರಂಡಿ ತುಂಬಿ ರಸ್ತೆಗೆ ಹರಿಯುವ ಸಂದರ್ಭದಲ್ಲಿ ಮಣ್ಣು ರಸ್ತೆಯಲ್ಲಿ ಹರಡಿಕೊಳ್ಳುತ್ತದೆ. ಒಣಗಿದ ಮೇಲೆ ವಾಹನಗಳ ಓಡಾಟದಿಂದ ಧೂಳು ಮೇಲೇಳುತ್ತಿದೆ.

ರಸ್ತೆ ಬದಿಯ ಅಂಗಡಿಕಾರರು ನಿತ್ಯ ಧೂಳು ಜಾಡಿಸಿ ಬೇಸತ್ತು ಹೋಗಿದ್ದಾರೆ. ಧೂಳಿನ ಭಯಕ್ಕೆ ಬೆಳಗ್ಗೆಯಿಂದ ರಾತ್ರಿಯವರೆಗೂ ಮೂಗಿಗೆ ಬಟ್ಟೆ ಕಟ್ಟಿಕೊಂಡೇ ವ್ಯಾಪಾರ ಮಾಡುವ ದುಸ್ಥಿತಿ ಎದುರಾಗಿದೆ. ಧೂಳಿನ ಹಾವಳಿ ವಿಪರೀತವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ನೀರು ಸಿಂಪಡಿಸಿ ಧೂಳು ನಿಯಂತ್ರಿಸಬೇಕಿದೆ. ಇಲ್ಲವೇ ಧೂಳು ಹೀರುವ ಯಂತ್ರದ ಮೂಲಕ ರಸ್ತೆಯ ಮೇಲಿನ ಮಣ್ಣು ತೆರವುಗೊಳಿಸಬೇಕಿರುವುದು ಅಗತ್ಯವಾಗಿದೆ.

ಸಂಚಾರ ದಟ್ಟಣೆಯಿಂದ ರಸ್ತೆಗಳಲ್ಲಿ ಧೂಳು ವ್ಯಾಪಕವಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದರೆ ಪುರಸಭೆ ಅಧಿಕಾರಿಗಳು ಇದಕ್ಕೂ ತಮಗೂ ಸಂಬಂಧವೇ ಇಲ್ಲ ಎನ್ನುವಂತೆ ಇದ್ದರೆ. ಹೆಚ್ಚು ಧೂಳಿನಿಂದ ಅನಾರೋಗ್ಯದ ತೊಂದರೆಗಳಿಗೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಕೆಮ್ಮು, ದಮ್ಮು ತೊಂದರೆ ಕಾಣಿಸಿಕೊಳ್ಳುತ್ತಿದೆ. ದಿನ ಕಳೆದಂತೆ ಅಲರ್ಜಿಕ್‌ ಬ್ರಾಕೈಟೀಸ್‌ ಆಗುವ ಸಾಧ್ಯತೆಗಳಿವೆ. ಅಲ್ಲದೇ ಡರ್ಮಾಟೈಟೀಸ್‌ ನಂತಹ ಚರ್ಮ ವ್ಯಾಧಿ ಯೂ ಆಗಬಹುದು ಎನ್ನುತ್ತಾರೆ ವೈದ್ಯರು.

ಟಾಪ್ ನ್ಯೂಸ್

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.