ಟಿ.ಎನ್.ಶೇಷನ್ ನಿಧನಕ್ಕೆ ಗಣ್ಯರ ಕಂಬನಿ
Team Udayavani, Nov 12, 2019, 3:03 AM IST
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್.ಶೇಷನ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ. ಟಿ.ಎನ್.ಶೇಷನ್ ಭಾರತೀಯ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅವರ ಕೊಡುಗೆ ಅವಿಸ್ಮರಣೀಯ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ.
ಅವರ ಬಂಧು ವರ್ಗಕ್ಕೆ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಶೇಷನ್ ಅವರ ನಿಧನಕ್ಕೆ ಕಂಬನಿ ಮಿಡಿದಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಭಾರತೀಯ ಚುನಾವಣಾ ಕ್ಷೇತ್ರದಲ್ಲಿ ಬಹಳಷ್ಟು ಸುಧಾರಣೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಟಿ.ಎನ್.ಶೇಷನ್ 1996ರಲ್ಲಿ ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿಗೆ ಭಾಜನರಾಗಿದ್ದರು. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸಂತಾಪ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.