ರಸ್ತೆ ಹೊಂಡಕ್ಕೆ ಮಣ್ಣು ಮುಚ್ಚಿ ಮುಷ್ಕರ

Team Udayavani, Nov 13, 2019, 3:05 PM IST

uk-tdy-2

ಸಿದ್ದಾಪುರ: ಸಂಚಾರಕ್ಕೆ ಕಂಟಕವಾಗಿರುವ ರಸ್ತೆಗಳ ಹೊಂಡ, ತಗ್ಗುಗಳಿಗೆ ಮಣ್ಣು ತುಂಬಿ ಸರಿಪಡಿಸುವ ಕಾರ್ಯಕ್ಕೆ ಮುಂದಾಗುವ ಮೂಲಕ ತಾಲೂಕಿನ ಟೆಂಪೋ ಮಾಲಕ, ಚಾಲಕರ ಸಂಘದ ಸದಸ್ಯರು ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದರು.

ತಮ್ಮ ಕಾರ್ಯದ ಮೂಲಕ ಮುಷ್ಕರ, ಪ್ರತಿಭಟನೆಗಳಿಗೆ ಹೊಸ ಮಾದರಿ ಕೊಟ್ಟರು. ದಿನ ನಿತ್ಯದ ಆದಾಯ, ವೇತನ ನಂಬಿಕೊಂಡ ಟೆಂಪೋ ಮಾಲಕ, ಚಾಲಕರು ಆ ಬಗ್ಗೆ ಚಿಂತಿಸದೇ ಇಡೀ ದಿನ ರಸ್ತೆ ದುರಸ್ತಿ ಮಾಡಿ ಸರಕಾರದ ಕಾರ್ಯವೈಖರಿಗೆ ಕನ್ನಡಿ ಹಿಡಿದಿದ್ದಾರೆ.

ಹೊಂಡಗಳಿಗೆ ಮಣ್ಣು ತುಂಬಿ ಸರಿಪಡಿಸಲು ಸುಮಾರು 30 ಸದಸ್ಯರಿರುವ ಸಂಘ ನಿತ್ಯದ ದುಡಿಮೆ ಪರಿಗಣಿಸದೇ ಮಂಗಳವಾರ ಬೆಳಗ್ಗೆ 9ರಿಂದ ಸಿದ್ದಾಪುರ- ಕುಮಟಾ ರಾಜ್ಯ ಹೆದ್ದಾರಿಯ ಕೆಇಬಿ ಗ್ರೀಡ್‌ ಬಳಿಯಿಂದ ಪಿಕಾಸಿ, ಗುದ್ದಲಿ, ಬುಟ್ಟಿ ಹಿಡಿದು ಕೆಲಸ ಆರಂಭಿಸಿದರು. ಲೋಕೋಪಯೋಗಿ ಇಲಾಖೆ ಮಾಡುವ ಕಾಟಾಚಾರದ ಕೆಲಸದ ಬದಲಾಗಿ ಸಮರ್ಪಕವಾಗಿ ಮಣ್ಣು ತುಂಬಿ ಸರಿಪಡಿಸಿದರು.

ಅಲ್ಲಿಗೆ ಭೇಟಿ ನೀಡಿದ ಸುದ್ದಿಗಾರರೊಂದಿಗೆ ಸಂಘದ ಅಧ್ಯಕ್ಷ ಗಣೇಶ ಪಿ.ಭಟ್ಟ ಮಾತನಾಡಿ, ಕುಮಟಾ ರಸ್ತೆ ಮಾತ್ರವಲ್ಲದೇ ತಾಲೂಕಿನ ಬಹುತೇಕ ಎಲ್ಲ ರಸ್ತೆಗಳು ಹೊಂಡ ಬಿದ್ದು ಹಾಳಾಗಿವೆ. ವಾಹನ ಸಂಚಾರಕ್ಕೆ ಕಷ್ಟವಾಗಿದೆ. ಲೋಕೋಪಯೋಗಿ ಇಲಾಖೆ ರಸ್ತೆಗಳನ್ನು ಸರಿಪಡಿಸಬಹುದು ಎಂದು ಸಾಕಷ್ಟು ಕಾದರೂ ಅದಕ್ಕೆ ಇಲಾಖೆ ಮುಂದಾಗಲಿಲ್ಲ. ಸರಕಾರಕ್ಕೆ ಈ ಬಗ್ಗೆ ಹಲವು ಬಾರಿ ಬೇಡಿಕೆ ಸಲ್ಲಿಸಿದ್ದರೂ ಪ್ರಯೋಜನವಾಗಲಿಲ್ಲ. ಕೇವಲ ಮುಷ್ಕರ ಮಾಡುವ ಬದಲು ನಮ್ಮ ಶ್ರಮ ಸಾರ್ಥಕವಾಗಬೇಕು ಎನ್ನುವ ದೃಷ್ಟಿಯಿಂದ ಈ ರೀತಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದೇವೆ. ನಮ್ಮಲ್ಲಿ 16 ಟೆಂಪೋಗಳಿದ್ದು ನಮ್ಮ ವಾಹನಗಳ ಸಂಚಾರವನ್ನು ನಿಲ್ಲಿಸಿ ಇಡೀದಿನ ಎಷ್ಟು ಸಾಧ್ಯವೋ ಅಷ್ಟು ರಸ್ತೆಯ ಹೊಂಡಗಳನ್ನು ತುಂಬುತ್ತೇವೆ. ಸರಕಾರ ರಸ್ತೆಗಳ ದುರಸ್ತಿಗೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಇನ್ನಿತರ ರಸ್ತೆಗಳ ಹೊಂಡಗಳನ್ನ ಸರಿಪಡಿಸುವ ಉದ್ದೇಶವಿದೆ ಎಂದರು.

ಲೋಕೋಪಯೋಗಿ ಇಲಾಖೆ ನಿಷ್ಕಾಳಜಿ: ಹಲವು ತಿಂಗಳಿಂದ ತಾಲೂಕಿನ ಎಲ್ಲ ರಸ್ತೆಗಳು ಹಾಳಾಗಿ, ಸಂಚಾರಕ್ಕೆ ಸಮಸ್ಯೆಯಾಗಿದ್ದರೂ ಲೋಕೋಪಯೋಗಿ ಇಲಾಖೆ ಮಾತ್ರ ಕಣ್ಣುಮುಚ್ಚಿ ಕೂತಿದೆ ಎಂದು ಸಾರ್ವಜನಿಕರು ಸಾಕಷ್ಟು ಬಾರಿ ಹೇಳಿದ್ದರು. ಆಗ ಇಲಾಖೆ ಅಧಿಕಾರಿಗಳು ಕೆಲವೆಡೆ ಹೊಂಡ ತುಂಬಿ ಜನರ ಕಣ್ಣು ಕಟ್ಟುವ ಪ್ರಯತ್ನ ಮಾಡಿದ್ದರು.

ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಶೀಘ್ರವಾಗಿ ಕೆಲಸ ಆರಂಭಿಸುತ್ತೇವೆ ಎಂದುಹೇಳಿ ನುಣುಚಿಕೊಂಡಿದ್ದರೇ ಹೊರತು ಎಲ್ಲಿಯೂ ಕಾಮಗಾರಿ ಆರಂಭಿಸಿಲ್ಲ. ಇಲ್ಲಿಯ ಜನಪ್ರತಿನಿಧಿಗಳೂ ಅಧಿಕಾರಿಗಳ ಮಾತುಗಳನ್ನು ಕೇಳಿ ಸುಮ್ಮನುಳಿದರೇ ವಿನಃ ಕಾಮಗಾರಿ ಬಗ್ಗೆ ಗಮನ ಕೊಟ್ಟಿಲ್ಲ. ಈಗ ಟೆಂಪೋ ಸಂಘದವರು ಮಾಡಿದ ಕೆಲಸಕ್ಕೂ ಬಿಲ್‌ ಹಾಕಿ ಹಣ ಹೊಡೆಯುವ ಸಾಧ್ಯತೆಯೂ ಇದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.