ಕನ್ನಡ ಭಾಷೆ ಉತ್ತುಂಗಕ್ಕೇರಿಸಿದವರು ಕವಿಗಳು

ಚುಂಚನಗಿರಿ ಮಠದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕವಿ ಡಾ.ಚಂದ್ರಶೇಖರ ಕಂಬಾರರ ಅಭಿಮತ

Team Udayavani, Nov 14, 2019, 6:06 PM IST

14-November-27

ನಾಗಮಂಗಲ: ಕನ್ನಡ ಭಾಷೆ ಉತ್ತುಂಗಕ್ಕೆ ಕೊಂಡೊಯ್ದ ಕೀರ್ತಿ ನಮ್ಮ ಕವಿಗಳಾದ ಶಿವರಾಮ ಕಾರಂತರು ಹಾಗೂ ಕುವೆಂಪು ಅವರಿಗೆ ಸಲ್ಲುತ್ತದೆ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಹೇಳಿದರು.

ತಾಲೂಕಿನ ಬಿಜಿ ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆದಿ ಚುಂಚನಗಿರಿ ವಿಶ್ವವಿದ್ಯಾಲಯದ ಸಮೂಹ ಶಿಕ್ಷಣ ಸಂಸ್ಥೆಗಳು ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ-2019 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೆಳೆಸುವುದು ನಮ್ಮ ಕೆಲಸ: ಕನ್ನಡ ಭಾಷೆ ಇಷ್ಟು ಎತ್ತರಕ್ಕೆ ಬೆಳೆಯಲು, ಹಾಗೆಯೇ ನಾವು ಮರೆತಿದ್ದ ಭಾಷಾಭಿಮಾನ ಮತ್ತೆ ಮರುಕಳಿಸುವಂತೆ ಮಾಡಿದ್ದು ನಮ್ಮ ಕವಿಗಳಾದ ಶಿವರಾಮ ಕಾರಂತರು ಹಾಗೂ ಕುವೆಂಪುರವರು. ಅವರು ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಅಪಾರ, ಹೀಗೆ ಕನ್ನಡದ ಉಳಿವಿಗೆ ನಮ್ಮ ಹಲವು ಸಾಹಿತಿಗಳು, ಕವಿಗಳು ಕೊಡುಗೆ ನೀಡಿದ್ದಾರೆ.

ನಾವು ಈ ಭಾಷೆಯನ್ನು ಉಳಿಸಿ, ಬೆಳೆಸುವ ಮೂಲಕ ಯುವ ಪೀಳಿಗೆಗೆ ಧಾರೆ ಎರೆಯುವ ಕೆಲಸ ಮಾಡಬೇಕು ಎಂದು ಹೇಳಿದರು. ವಿವಿಧತೆಯಲ್ಲಿ ಏಕತೆ: ದೇಶಕ್ಕೆ ಭವ್ಯ ಪರಂಪರೆ ಇದೆ. ವಂದೇ ಮಾತರಂ ಹಾಡು ನಮ್ಮ ಭಾರತ ಖಂಡಕ್ಕೆ ಬಹಳ ಹೊಂದಿಕೊಳ್ಳುತ್ತದೆ. ಇದಕ್ಕೆ ಕಾರಣ ಭಾರತ ದೇಶದಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್‌ ಸೇರಿದಂತೆ ಎಲ್ಲರೂ ಸಹಬಾಳ್ವೆಯಿಂದ ಕೂಡಿ ಬಾಳುತ್ತಿದ್ದೇವೆ. ಭಾರತ ದೇಶದಲ್ಲಿ 64 ಸಾವಿರ ಜಾತಿ, 2 ಸಾವಿರಕ್ಕೂ ಹೆಚ್ಚಿನ ಭಾಷೆ ಹಾಗೂ 33 ಕೋಟಿ ದೇವತೆಗಳ ತವರೂರು ಭಾರತ ದೇಶ. ಎಲ್ಲಾ ಸಮಾಜ ಹೀಗೆ ಒಂದಾಗಿ ಹೋದಾಗ ಮಾತ್ರ ಈ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹನಿಗವನ ಸಾಹಿತಿ ದುಂಡಿರಾಜ್‌ ಮಾತನಾಡಿದರು. ಅಲ್ಲದೇ ವಿದ್ಯಾರ್ಥಿಗಳಿಗೆ ಕೆಲ ಹನಿಗವನ ಹೇಳಿ ರಂಜಿಸಿದರು. ಇದೇ ವೇಳೆ ಗಣ್ಯರು ಆರೋಗ್ಯ ಸುಧೆ ಕೃತಿ ಬಿಡುಗಡೆ ಮಾಡಿದರು.

ಸಾಂಸ್ಕೃತಿಕ ಕಾರ್ಯಕ್ರಮ: ಕಾರ್ಯಕ್ರಮಕ್ಕೂ ಮುನ್ನ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ನೃತ್ಯ, ಭರತನಾಟ್ಯ, ಕನ್ನಡ ಕುರಿತಾದ ಹಾಡುಗಳು, ಏಕಪಾತ್ರಾಭಿನಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ಪುರುಶೋತ್ತಮಾನಂದನಾಥ ಸ್ವಾಮೀಜಿ, ಶಾಸಕ ಸುರೇಶ್‌ಗೌಡ, ಆದಿಚುಂಚನಗಿರಿ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಚಂದ್ರಶೇಖರಶೆಟ್ಟಿ, ರಿಜಿಸ್ಟಾರ್‌ ಸುಬ್ಬರಾಯ, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ಶಿವರಾಮು, ಎಂಜಿನೀಯರ್‌ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಕೆ.ನರೇಂದ್ರ, ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ರಮೇಶ್‌, ಪ್ರೊ.ರಾಮು ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.