ಶಿಕ್ಷಣ ಇಲಾಖೆ ಸುತ್ತೋಲೆ ಖಂಡಿಸಿ ಪ್ರತಿಭಟನೆ


Team Udayavani, Nov 15, 2019, 2:50 PM IST

br-tdy-2

ದೇವನಹಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಖಂಡಿಸಿ, ತಾಲೂಕು ಪ್ರಜಾ ವಿಮೋಚನಾ ಚಳುವಳಿ ಸ್ವಾಭಿಮಾನ, ರಿಪಬ್ಲಿಕನ್‌ ಸೇನೆ , ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಮಿನಿ ವಿಧಾನ ಸೌಧದ ಆವರಣದ ಅಂಬೇಡ್ಕರ್‌ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್‌ರಿಗೆ ಅಪಮಾನ: ಭಾರತದ ಸಂವಿಧಾನವನ್ನು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಬರೆದಿದ್ದಾರೆ ಎಂದು ತಿಳಿದಿದ್ದರೂ, ಉದ್ದೇಶಪೂರ್ವಕವಾಗಿ ಶಿಕ್ಷಣ ಇಲಾಖೆ ಅಂಬೇಡ್ಕರ್‌ ಸಂವಿಧಾನವನ್ನು ಬರೆದಿಲ್ಲ. ಅವರು ಕೇವಲ ಸಂವಿಧಾನ ಕರುಡು ಸಮಿತಿಯ ಅಧ್ಯಕ್ಷರಾಗಿದ್ದರಷ್ಟೇ, ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ನಮ್ಮ ಸಂವಿಧಾನವನ್ನು ಬರೆಯಲಾಗಿದೆ ಎಂದು ಮುದ್ರಿಸಿ ಸುತ್ತೋಲೆ ಹೊರಡಿಸುವ ಮೂಲಕ ಸರ್ಕಾರ ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದೆ ಎಂದು ಘೋಷಣೆ ಕೂಗಿದರು. ಹಾಗೂ ಮಕ್ಕಳ ಮನಸ್ಸಿನಲ್ಲಿ ಮನುವಾದಿ ಬೀಜವನನು ಬಿತ್ತಲು ಹೊರಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವಜಾ ಮಾಡಲು ಆಗ್ರಹ: ಈ ಸುತ್ತೋಲೆ ಹೊರಡಿಸಲು ಕಾರಣವಾದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಅವರನ್ನು ಕೂಡಲೇ ವಜಾ ಗೋಳಿಸಬೇಕು ಎಂದು ಆಗ್ರಹಿಸಿದರು.  ಸಚಿವರಿಗೆ ಇಲಾಖೆಯ ಮೇಲೆ ಹಿಡಿತವಿಲ್ಲ: ಮೇಲೆ ಶಿಕ್ಷಣಇಲಾಖೆ ಮತ್ತು ಸರ್ಕಾರದ ನಡವಳಿಕೆಗಳು ಬದಲಾಗದಿದ್ದರೆ, ನಾಡಿನ ಎಲ್ಲಾ ದಲಿತ ಸಂಘಟನೆಗಳೊಂದಿಗೆ ಶಿಕ್ಷಣ ಇಲಾಖೆಯ ವಿರುದ್ಧ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ. ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸಚಿವರಾಗಿದ್ದರೂ ಸಹ ಇಲಾಖೆಯ ಮೇಲೆ ಹಿಡಿತವಿಲ್ಲ. ಇಲಾಖೆಯ ಅಧಿಕಾರಿಗಳದ್ದು ಆಡಿದ್ದೇ ಆಟ ಎಂಬಂತಾಗಿದೆ. ಬಿಜೆಪಿ ಸರ್ಕಾರದ ಈ ಅಂಬೇಡ್ಕರ್‌ ಸುತ್ತೋಲೆ ವಿರುದ್ಧ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಜಾಣ ಮೌನವಹಿಸಿ,ಪರೋಕ್ಷವಾಗಿ ಬಿಜೆಪಿಗೆ ಬೆಂಬಲಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ವಿರೋಧಿ: ಇತಿಹಾಸ ಅರಿಯದ ಇಂತಹ ದಲಿತ  ವಿರೋಧಿ ಅಧಿಕಾರಿಗಳು ಶಿಕ್ಷಣ ಇಲಾಖೆಯನ್ನು ಹಾಳು ಮಾಡಿಮಕ್ಕಳಲ್ಲಿ ಅಂಬೇಡ್ಕರ್‌ ಸಾಧನೆಯನ್ನು ಗೌಣ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು. ಪ್ರತಿಭಟನೆಯಲ್ಲಿ ರಿಪಬ್ಲಿಕನ್‌ ಸೇನೆಯ ರಾಜ್ಯಾಧ್ಯಕ್ಷ ಜಿಗಣಿ ಶಂಕರ್‌,ಪ್ರಜಾ ವಿಮೋಚನಾ ಚಳುವಳಿ ಸ್ವಾಭಿಮಾನ ರಾಜ್ಯಾಧ್ಯಕ್ಷ ಮುನಿ ಆಂಜನಪ್ಪ ,ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಿವಿಸಿ ಸ್ವಾಭಿಮಾನ ಅಧ್ಯಕ್ಷ ಹನುಮಣ್ಣ ಗುಳ್ಯ, ತಾಲೂಕು ಪಿವಿಸಿ ಸ್ವಾಭಿಮಾನ ಅಧ್ಯಕ್ಷ ಸೋಲೂರು ನಾಗರಾಜ್‌, ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ಸುಕನ್ಯಮ್ಮ, ಜಿಲ್ಲಾ ಜಾಲ ಹೋಬಳಿ ಅಧ್ಯಕ್ಷ ನಾರಾಯಣಸ್ವಾಮಿ, ಯಲಹಂಕ ಅಧ್ಯಕ್ಷ ಕಾಂತರಾಜು, ಕಾರ್ಯದರ್ಶಿ ವೆಂಕಟೇಶ್‌, ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ಆಯೂಫ್‌ ಖಾನ್‌, ಸಂಘಟನಾ ಕಾರ್ಯದರ್ಶಿ ಚನ್ನ ಮರಿಯಪ್ಪ, ಮಹಿಳಾ ಅಧ್ಯಕ್ಷೆ ಮುನಿ ಲಕ್ಷ್ಮಮ್ಮ ಸೇರಿದಂತೆ ಮತ್ತಿತರರು ಭಾಗವವಹಿಸಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.