ಮನಪಾ ಚುನಾವಣೆ: ಇನ್ನೂ ಆರು ತಿಂಗಳು ಮತಯಂತ್ರ ಭದ್ರ!


Team Udayavani, Nov 15, 2019, 9:10 PM IST

tt-8

ಮಹಾನಗರ: ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ನಡೆದು ಫಲಿತಾಂಶ ಬಂದರೂ ಮತಯಂತ್ರಗಳಿಗೆ ಇನ್ನೂ ಆರು ತಿಂಗಳು ಕಾಲ ಭದ್ರತೆ ಮುಂದುವರಿಯಲಿದೆ.

ಫಲಿತಾಂಶದ ಬಗ್ಗೆ ರಾಜಕೀಯ ಪಕ್ಷಗಳು ನ್ಯಾಯಾಲಯಕ್ಕೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶವಿದೆ. ನ್ಯಾಯಾಲಯಕ್ಕೆ ಯಾರಾದರೂ ಆಕ್ಷೇಪಣೆ ಸಲ್ಲಿಸಿ, ನ್ಯಾಯಾಲಯವು ವಿಚಾರಣೆಯನ್ನು ಕೈಗೆತ್ತಿಕೊಂಡರೆ ಆ ಕ್ಷಣದಿಂದ ಮತಯಂತ್ರಗಳನ್ನು ಜಿಲ್ಲಾಡಳಿತವು ಅತ್ಯಂತ ಭದ್ರತೆಯಿಂದ ನೋಡಿಕೊಳ್ಳಬೇಕು. ವಿಚಾರಣೆ ಪೂರ್ಣಗೊಳ್ಳುವವರೆಗೆ ಆ ಯಂತ್ರಗಳ ಮತಗಳನ್ನು ಅಳಿಸುವುದು ಅಥವಾ ಇತರ ಚುನಾವಣೆಗೆ ಬಳಸುವಂತಿಲ್ಲ. ಒಂದುವೇಳೆ ನ್ಯಾಯಾಲಯವು ಮರು ಎಣಿಕೆ ಮಾಡಲು ಸೂಚಿಸಿದರೆ ಅದಕ್ಕೆ ಕ್ರಮ ಕೈಗೊಳ್ಳಬೇಕಾಗಿದೆ. ಆ ಕಾರಣಕ್ಕಾಗಿ ಮತಯಂತ್ರಗಳನ್ನು ಆರು ತಿಂಗಳುಗಳ ಕಾಲ ಭದ್ರವಾಗಿ ನೋಡಿಕೊಳ್ಳಲಾಗುತ್ತದೆ.

ಪಾಲಿಕೆ ಚುನಾವಣೆಯ ಹಿನ್ನೆಲೆಯಲ್ಲಿ 448 ಮತಗಟ್ಟೆಗಳಿಗೆ ಸಂಬಂಧಿಸಿದಂತೆ ಒಟ್ಟು 448 ಇವಿಎಂ ಮಿಷನ್‌ ಹಾಗೂ ಹೆಚ್ಚುವರಿಯಾಗಿ 150 ಇವಿಎಂ ಮಿಷನ್‌ಗಳನ್ನು ಬಳಸಲಾಗಿತ್ತು. ಮತ ಎಣಿಕೆ ಗುರುವಾರ ಮಧ್ಯಾಹ್ನ ವೇಳೆಗೆ ರೋಜಾರಿಯೋ ಶಾಲೆಯಲ್ಲಿ ಪೂರ್ಣ ಗೊಂಡಿತ್ತು. ಫಲಿತಾಂಶ ಘೋಷಣೆ ಯಾದ ಬಳಿಕ ಮತ ಯಂತ್ರಗಳನ್ನು ಪೊಲೀಸ್‌ ಭದ್ರತೆಯ ಮೂಲಕ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ (ಹಳೆಯ ಕಟ್ಟಡ) ಸ್ಟ್ರಾಂಗ್‌ರೂಂನಲ್ಲಿ ಇರಿಸಲಾಗಿದೆ.

ಮತಯಂತ್ರಗಳನ್ನು ಇರಿಸಲಾಗಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸ್ಟ್ರಾಂಗ್‌ ರೂಂ ವ್ಯಾಪ್ತಿಯಲ್ಲಿ ಮುಂದಿನ ದಿನದಲ್ಲಿ ಬಿಗಿಭದ್ರತೆ ಇರುತ್ತದೆ. ಕೊಠಡಿ ಸುತ್ತ ಸಿಸಿ ಕೆಮರಾ ಅಳವಡಿಸಲಾಗಿದೆ. ಪೊಲೀಸ್‌ ಭದ್ರತೆ ಇರಲಿದೆ. ಯಾವುದೇ ಕಾರಣಕ್ಕೂ ಸ್ಟ್ರಾಂಗ್‌ ರೂಂ ತೆರೆಯುವಂತಿಲ್ಲ. ಮತ ಎಣಿಕೆ ಆದ ಬಳಿಕ ನ್ಯಾಯಾಲಯದಲ್ಲಿ ಆಕ್ಷೇಪಣೆ ಇಲ್ಲದ ಮತಯಂತ್ರಗಳನ್ನು ಮತ್ತೂಂದು ಚುನಾವಣೆಗೆ ಬಳಸಲಾಗುತ್ತದೆ.

ಈ ಕ್ರಮಗಳು ಮುಗಿದ ಬಳಿಕ ಅಂದರೆ ಆರು ತಿಂಗಳುಗಳ ಬಳಿಕ ಚುನಾವಣ ಆಯೋಗದ ಸೂಚನೆಯಂತೆ ಆ ಮತಯಂತ್ರಗಳನ್ನು ಇತರ ಚುನಾವಣೆಗಳಿಗೆ ಬಳಸುವುದು ಅಥವಾ ಬೇರೆ ಭಾಗಗಳಿಗೆ ಕಳುಹಿಸುವುದು ನಿರ್ಧಾರವಾಗುತ್ತದೆ.

ಮತಯಂತ್ರಕ್ಕೆ ಭದ್ರತೆ
ಫಲಿತಾಂಶದ ಬಗ್ಗೆ ರಾಜಕೀಯ ಪಕ್ಷಗಳು ನ್ಯಾಯಾಲಯಕ್ಕೆ ಆಕ್ಷೇಪಣೆ ಅರ್ಜಿ ಸಲ್ಲಿಸುವ ಸಾಧ್ಯತೆ ಇರುವುದರಿಂದ ಮತಯಂತ್ರಗಳನ್ನು ಆರು ತಿಂಗಳು ಭದ್ರತೆಯಲ್ಲಿ ಇರಿಸಲಾಗುತ್ತದೆ. ಆ ಬಳಿಕ ಚುನಾವಣಾ ಆಯೋಗದ ಆದೇಶದಂತೆ ಕ್ರಮ ಜರಗಿಸಲಾಗುತ್ತದೆ.
 - ಗಾಯತ್ರಿ ನಾಯಕ್‌, ವಿಶೇಷ ಚುನಾವಣಾಧಿಕಾರಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.