ರಸ್ತೆ ತುಂಬಾ ಗುಂಡಿಗಳದ್ದೇ ಕಾರುಬಾರು!

ಬಿಳಗೊಳದಿಂದ ಹ್ಯಾಂಡ್‌ಪೋಸ್ಟ್‌ವರೆಗಿನ ರಸ್ತೆ ಸಂಪೂರ್ಣ ಹಾಳು: ಸವಾರರ ಆರೋಪ

Team Udayavani, Nov 16, 2019, 6:28 PM IST

16-November-33

„ಸುಧೀರ್‌ ಬಿ.ಟಿ. ಮೊದಲ ಮನೆ
ಮೂಡಿಗೆರೆ:
ಪಟ್ಟಣದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-173ಯಲ್ಲಿ ಗುಂಡಿಗಳೇ ತುಂಬಿಕೊಂಡಿದ್ದು, ಗುಂಡಿಗಳಲ್ಲಿ ರಸ್ತೆ ಹುಡುಕಿ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಸವಾರರಿಗೆ ಬಂದೊದಗಿದೆ.

ಕಡೂರಿನಿಂದ ಮೂಡಿಗೆರೆಯ ಹ್ಯಾಂಡ್‌ ಪೋಸ್ಟ್‌ವರೆಗಿನ ರಸ್ತೆಯನ್ನು ಮೇಲ್ದರ್ಜೆಗೇರಿಸಿ ಹಲವು ವರ್ಷಗಳ ನಂತರ 2018ರ ಏಪ್ರಿಲ್‌ ತಿಂಗಳಿನಲ್ಲಿ ಚಿಕ್ಕಮಗಳೂರಿನ ಆಲದಗುಡ್ಡೆಯಿಂದ ಮೂಡಿಗೆರೆಯ ಬಿಳಗುಳದ ಅಂಚಿನವರೆಗೆ ಡಾಂಬರೀಕರಣ ಮಾಡಲಾಗಿತ್ತು. ಅಧಿಕಾರಿಗಳ ದೂರಾಲೋಚನೆಯ ಕೊರತೆಯೋ ಅಥವಾ ಯೋಜನೆ ತಯಾರಿಸುವುದರಲ್ಲಿ ಆದ ತಪ್ಪುಗಳಿಂದಾಗಿಯೋ ಏನೋ ಬಿಳಗೊಳದಿಂದ ಹ್ಯಾಂಡ್‌ಪೋಸ್ಟ್‌ವರೆಗೆ ಮಾತ್ರ ಡಾಂಬರೀಕರಣ ಆಗಿಲ್ಲ.

ಈ ವಿಚಾರವಾಗಿ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮನವಿ ಮಾಡಿ ಹ್ಯಾಂಡ್‌ ಪೋಸ್ಟ್‌ವರೆಗೆ ಡಾಂಬರೀಕರಣ ಮಾಡುವಂತೆ ಅಹವಾಲು ಸಲ್ಲಿಸಿದ್ದರು. ಕೂಡಲೇ ಸೂಕ್ತ ಸ್ಪಂದನೆ ಸಿಕ್ಕಿತಾದರೂ ಕಾರ್ಯ ಮಾತ್ರ ಪ್ರಗತಿಗೆ ಬರಲಿಲ್ಲ. ಇದರ ಪರಿಣಾಮವಾಗಿ ಮೊದಲೇ ಹಾಳಾಗಿದ್ದ ರಸ್ತೆ ಈ ಬಾರಿಯ ಮಳೆಗಾಲದಲ್ಲಿ ಪೂರ್ತಿಯಾಗಿ ಹಾಳಾಗಿದ್ದು, ರಸ್ತೆ ಇದೆ ಎನ್ನುವ ಯಾವುದೇ ಕುರುಹು ಕಾಣಿಸುತ್ತಿಲ್ಲ.

ಬಿಳಗೊಳದಿಂದ ಮೂಡಿಗೆರೆ ಪಟ್ಟಣ ಸೇರಿದಂತೆ ಹ್ಯಾಂಡ್‌ಪೋಸ್ಟ್ ವರೆಗಿನ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ಸ್ಥಳೀಯರು ಮತ್ತು ವಾಹನ ಸವಾರರು ರಸ್ತೆಯಲ್ಲಿ ತಿರುಗಾಡಲು ಹರಸಾಹಸ ಪಡುವಂತಾಗಿದೆ. ಇನ್ನು ಪಾದಚಾರಿಗಳ ಕಥೆ ಊಹೆಗೆ ನಿಲುಕದ್ದಾಗಿದೆ.

ಅಧಿಕಾರಿಗಳ ಬೇಜವಾಬ್ದಾರಿಯಿಂದ ಹೆದ್ದಾರಿ ಮರಣಗುಂಡಿಗಳಾಗಿ ಮಾರ್ಪಾಟಾಗಿವೆ. ಯಾವ ಗುಂಡಿ ಯಾರ ಜೀವ ತೆಗೆಯಲು ಸಿದ್ಧವಾಗಿ ಕುಳಿತಿದೆಯೋ ಎಂಬ ಚಿಂತೆ ಇಲ್ಲಿನ ನಾಗರಿಕರದ್ದು. ಚಿಕ್ಕಮಗಳೂರಿನಲ್ಲಿ ಯುವತಿಯೊಬ್ಬಳು ಇಂಥ ಗುಂಡಿಗಳಿಂದಾಗಿ ಸಾವನ್ನಪ್ಪಿದ ದೃಶ್ಯ ಮರೆಯುವ ಮುನ್ನ ಮತ್ತೂಂದು ಭೀಕರ ಅಪಘಾತ ಸಂಭವಿಸುವ ಮೊದಲು ಗುಂಡಿಗಳನ್ನು ಮುಚ್ಚುವ ಕೆಲಸ ಆಗಬೇಕಿದೆ.

ಹ್ಯಾಂಟ್‌ ಪೋಸ್ಟ್‌ವರೆಗಿನ ರಸ್ತೆ ಗುಂಡಿ ಬಿದ್ದು 2 ವರ್ಷ ಕಳೆದರೂ ಕೂಡ ಅನುದಾನ ಬಿಡುಗಡೆ, ಟೆಂಡರ್‌ ಪ್ರಕ್ರಿಯೆ ಎಂದು ಸರಕಾರದ ಬಗ್ಗೆ ಬೆರಳು ತೋರಿಸುವುದರ ಬದಲು ಲಭ್ಯವಿರುವ ಅನುದಾನ ಬಳಸಿಕೊಂಡು ಗುಂಡಿ ಮುಚ್ಚಿಸುವ ಕೆಲಸ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.