ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ರಾಜೀನಾಮೆ ನೀಡಲಿ

Team Udayavani, Nov 22, 2019, 4:43 PM IST

rn-tdy-1

ಚನ್ನಪಟ್ಟಣ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ಗೆ ಅವಮಾನ ಮಾಡಿರುವ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ವಜಾ ಹಾಗೂ ಸಚಿವ ಸುರೇಶ್‌ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ದಲಿತಪರ ಸಂಘಟನೆಗಳು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದರು.

ಪಟ್ಟಣದ ಡಾ.ಅಂಬೇಡ್ಕರ್‌ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ ಪ್ರತಿಭಟನೆಕಾರರು, ಶಿಕ್ಷಣ ಇಲಾಖೆ ಮತ್ತು ಸಚಿವ ಸುರೇಶ್‌ ಕುಮಾರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜೀನಾಮೆಗೆ ಒತ್ತಾಯ: ಶಿಕ್ಷಣ ಇಲಾಖೆ ದುರುದ್ದೇಶದಿಂದಲೇ ಈ ರೀತಿ ಮಾಡಿದೆ. ಬಿಜೆಪಿ ಸರ್ಕಾರ ಪ್ರತಿ ಬಾರಿ ಡಾ.ಅಂಬೇಡ್ಕರ್‌ಗೆ ಅಪಮಾನ ಮಾಡುತ್ತಿದೆ. ಕೂಡಲೇ ಅಂಬೇಡ್ಕರ್‌ ಬಗ್ಗೆ ಅಧಿಸೂಚನೆ ಪ್ರಕಟಿಸಿರುವ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮನುವಾದಿತನ ಬಹಿರಂಗ: ಮುಖಂಡ ಪಿ. ಜೆ.ಗೋವಿಂದರಾಜು ಮಾತನಾಡಿ, ಡಾ.ಬಿ.ಆರ್‌. ಅಂಬೇಡ್ಕರ್‌, ವಿಶ್ವವೇ ಮೆಚ್ಚುವಂತಹ ಸಂವಿಧಾನ ವನ್ನು ದೇಶಕ್ಕೆ ನೀಡಿದ್ದಾರೆ. ಈ ಮೂಲಕ ದೇಶದ ಸರ್ವರಿಗೂ ಸಮಾನತೆ ಒದಗಿಸಿದ್ದಾರೆ. ನ.26 ರಂದು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಸೂಚಿಸಿರುವ ಉಮಾಶಂಕರ್‌ ಆದೇಶದ ಪುಟ 5, ಖಂಡಿಕೆ 2ರಲ್ಲಿ ಸಂವಿಧಾನವನ್ನು ಡಾ.ಅಂಬೇಡ್ಕರ್‌ ಒಬ್ಬರೇ ಬರೆದಿಲ್ಲ ಎಂದು ಅಂಬೇಡ್ಕರ್‌ ಅವರಿಗೆ ಅವಮಾನಿಸಿ, ಗೊಂದಲ ಸೃಷ್ಟಿಸಿ, ತಾನೊಬ್ಬ ಮನುವಾದಿ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ.ಆದ್ದರಿಂದ ಅವರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ದೇಶದಿಂದಲೇ ಗಡಿಪಾರು ಮಾಡಬೇಕು. ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ನೈತಿಕ ಹೊಣೆ ಹೊತ್ತು, ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಪಡಿಸಿದರು.

ಉಮಾಶಂಕರ್‌ ವಜಾಗೊಳಿಸಿ: ತಾಪಂ ಸದಸ್ಯ ಹನುಮಂತಯ್ಯ ಮಾತನಾಡಿ, ರಾಜ್ಯದ ಎಲ್ಲಶಾಲೆಗಳ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಸುಳ್ಳು ಮಾಹಿತಿ ನೀಡಿ, ಡಾ.ಅಂಬೇಡ್ಕರ್‌ ಮೇಲಿದ್ದ ಅಪಾರ ಗೌರವಕ್ಕೆ ಧಕ್ಕೆ ತರುವ ಹುನ್ನಾರ ಇದಾಗಿದೆ. ಇದು ಮುಂದಿನ ಪೀಳಿಗೆಯನ್ನು ತಪ್ಪುದಾರಿಗೆ ಎಳೆ ಯುವ ಒಳಸಂಚಾಗಿದೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಅಪರಾಧ. ಹೀಗಾಗಿ ಉಮಾ ಶಂಕರ್‌ರನ್ನು ಸರ್ಕಾರ ವಜಾಗೊಳಿಸಬೇಕು ಎಂದರು.

ಪ್ರತಿಭಟನೆ ನಂತರ ಪೊಲೀಸ್‌ ಠಾಣೆಗೆ ತೆರಳಿ ದೂರು ಸಲ್ಲಿಸಲಾಯಿತು. ಮುಖಂಡರಾದ ಯಲಿ ಯೂರು ಜಯಕಾಂತ್‌, ನೀಲಸಂದ್ರ ಸಿದ್ಧರಾಮು, ಸಿದ್ಧರಾಮಯ್ಯ, ಬಿ.ಪಿ.ಸುರೇಶ್‌, ಅಪ್ಪಗೆರೆ ಶಿವ ಮೂರ್ತಿ, ಶ್ರೀನಿವಾಸಮೂರ್ತಿ, ಸತೀಶ್‌, ಸರ್ವೋತ್ತಮ್‌, ಬ್ಯಾಡರಹಳ್ಳಿ ಶಿವಕುಮಾರ್‌, ಬಾಣಗಹಳ್ಳಿ ಜಯಸಿಂಹ, ಕುಂತೂರುದೊಡ್ಡಿ ಕೇಶವಮೂರ್ತಿ, ಚಕ್ಕಲೂರು ಚೌಡಯ್ಯ, ಬಿವಿಎಸ್‌ ಕುಮಾರ್‌, ದಸಂಸ ವೆಂಕಟೇಶ್‌, ನೀಲಕಂಠನಹಳ್ಳಿ, ಮಂಗಳ ವಾರಪೇಟೆ ಕಿರಣ್‌, ಭರತ್‌ ಸೇರಿ ಹಲವರಿದ್ದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.