ಸೇಠ್ ಹತ್ಯೆಗೆ ಹಿಂದೆಯೂ ಹೊಂಚುಹಾಕಿದ್ದ ಆರೋಪಿ


Team Udayavani, Nov 23, 2019, 3:06 AM IST

seth-hatye

ಮೈಸೂರು: ಶಾಸಕ ತನ್ವೀರ್‌ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿ ಫ‌ರ್ಹಾನ್‌ ಪಾಷಾ, ವಾರದ ಹಿಂದೆ ಮುಡಾ ಬಳಿಯೂ ಕಾಣಿಸಿಕೊಂಡಿದ್ದ ಎಂಬ ಸಂಗತಿ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಪೊಲೀಸರಿಗೆ ಒಂದೊಂದಾಗಿ ಸ್ಫೋಟಕ ಮಾಹಿತಿಗಳು ಗೊತ್ತಾಗುತ್ತಿವೆ.

ಇದರಲ್ಲಿ ಆತ ಈ ಹಿಂದೆಯೂ ತನ್ವೀರ್‌ ಸೇಠ್ ಅವರ ಮೇಲೆ ದಾಳಿ ನಡೆಸಲು ಸಂಚು ರೂಪಿಸಲು ಹೊಂಚು ಹಾಕಿದ್ದ ಎಂಬ ಅಂಶವೂ ಸೇರಿದೆ. ಟಿಪ್ಪು ಜಯಂತಿ ಆಚರಣೆಗೆ ಅನುಮತಿ ಕೋರಿ ಮುಡಾ ಬಳಿ ತನ್ವೀರ್‌ ಸೇಠ್ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭ ಪ್ರತಿಭಟನೆ ಸ್ಥಳದಲ್ಲಿ ಫ‌ರ್ಹಾನ್‌ ಪಾಷಾ ಹಾಜರಿದ್ದು, ಹತ್ಯೆಗೆ ಹೊಂಚು ಹಾಕುತ್ತಿದ್ದ. ಜೊತೆಗೆ ಮಿಲಾದ್‌ ಪಾರ್ಕ್‌ ಹಾಗೂ ಸಾಕಷ್ಟು ಸ್ಥಳಗಳಲ್ಲಿ ಫ‌ರ್ಹಾನ್‌ ಪಾಷಾ ಹೊಂಚು ಹಾಕಿದ್ದನೆಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಮತ್ತೆ ಐವರ ಬಂಧನ: ಬಂಧಿತ ಆರೋಪಿ ಫ‌ರ್ಹಾನ್‌ ಪಾಷಾ ನೀಡಿದ ಮಾಹಿತಿ ಮೇರೆಗೆ ಮತ್ತೆ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸ್‌ ವಿಶೇಷ ತನಿಖಾ ತಂಡ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಕ್ರಂ, ಅಬೀದ್‌ ಪಾಷಾ, ನೂರ್‌ ಖಾನ್‌, ಮುಜೀಬ್‌ ಹಾಗೂ ಮುಜಾಮಿಲ್‌ ಎಂಬುವವರನ್ನು ಬಂಧಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ಬಳಿಕ ನ್ಯಾಯಾಧೀಶರು ಬಂಧಿತರನ್ನು ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

ಒಬ್ಟಾತ ರಾಜು ಹತ್ಯೆಯಲ್ಲೂ ಭಾಗಿ: ಬಂಧಿತ ಐವರು ಆರೋಪಿಗಳ ಪೈಕಿ ಅಬೀದ್‌ ಪಾಷಾ ಎಂಬಾತ 3 ವರ್ಷಗಳ ಹಿಂದೆ ಬಿಜೆಪಿ ಕಾರ್ಯ ಕರ್ತ ಕ್ಯಾತಮಾರನಹಳ್ಳಿ ರಾಜು ಹತ್ಯೆಯಲ್ಲೂ ಭಾಗಿಯಾಗಿದ್ದ ಎಂಬ ಸ್ಫೋಟಕ ಮಾಹಿತಿ ತಿಳಿದುಬಂದಿದ್ದು, ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಪ್ರಮುಖ ಆರೋಪಿ ಫ‌ರ್ಹಾನ್‌ ಪಾಷಾನ ಮೊಬೈಲ್‌ ಕರೆಗಳ ಜಾಡು ಹಿಡಿದು ತನಿಖೆ ಕೈಗೊಂಡಿರುವ ಪೊಲೀಸರು, ಪದೇ ಪದೆ ಫೋನ್‌ ಕರೆ ಮಾಡಿದ ಹಾಗೂ ಹೆಚ್ಚಿನ ಸಮಯ ಮಾತನಾಡಿರುವವರ ಸಂಖ್ಯೆ ಪತ್ತೆ ಹಚ್ಚಿ ಅನುಮಾನ ಬಂದವರನ್ನು ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಗುಪ್ತದಳದ ನೆರವು: ಘಟನೆಯ ಸಂಪೂರ್ಣ ಹಾಗೂ ವೈಜ್ಞಾನಿಕ ತನಿಖೆಗೆ ಕೇಂದ್ರ ಗುಪ್ತ ದಳ ಅಧಿಕಾರಿಗಳು ಮೈಸೂರಿಗೆ ಆಗಮಿಸಿದ್ದು, ಮೈಸೂರು ಪೊಲೀಸರಿಗೆ ಪ್ರಕರಣ ಸಂಬಂಧ ತನಿಖೆಗೆ ನೆರವು ನೀಡುತ್ತಿದ್ದಾರೆ. 3 ದಿನಗಳಿಂದ ಮೈಸೂರಿನಲ್ಲಿ ಬೀಡು ಬಿಟ್ಟಿರುವ ಕೇಂದ್ರ ಗುಪ್ತ ದಳದ ಅಧಿಕಾರಿಗಳ ತಂಡದಲ್ಲಿ ಓರ್ವ ಡಿಸಿಪಿ ಹಾಗೂ ಎಸ್‌ಪಿ ದರ್ಜೆಯ ಅಧಿಕಾರಿ ಸೇರಿದಂತೆ ಮೂವರನ್ನೊಳಗೊಂಡ ತಂಡ ಠಿಕಾಣಿ ಹೂಡಿದೆ. ತನ್ವೀರ್‌ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ಪ್ರಕರಣದ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿರುವ ಕೇಂದ್ರ ಗುಪ್ತದಳದ ತಂಡ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.