ರಂಗನಾಥಸ್ವಾಮಿ ಬಡಾವಣೆಗೆ ಬೇಕಿದೆ ಸೌಕರ್ಯ

Team Udayavani, Nov 25, 2019, 4:41 PM IST

rn-tdy-2

ಮಾಗಡಿ: ತಿರುಮಲೆಯ ಪ್ರಸಿದ್ಧ ರಂಗನಾಥಸ್ವಾಮಿ ಬಡಾವಣೆಯ ನಾಗರಿಕರು ಮೂಲ ಸೌಕರ್ಯಗಳ ಕೊರತೆಯಿಂದ ಸಮಸ್ಯೆ ಎದುರಿಸುತ್ತಿದ್ದು, ಪುರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳು ಸಮಸ್ಯೆ ಗಳ ನಿವಾರಣೆಯತ್ತ ನಿರ್ಲಕ್ಷ್ಯ ತೋರಿದ್ದಾರೆ ಎಂದು ನಾಗರಿಕರು ಆರೋಪಿಸಿದ್ದಾರೆ.

ಕಾಂಕ್ರೀಟ್‌ ರಸ್ತೆ ಇಲ್ಲ: ಬಡಾವಣೆ ನಿರ್ಮಾಣವಾಗಿ 45 ವರ್ಷಗಳು ಕಳೆದರೂ ಸಹ ಇನ್ನೂ ಮುಖ್ಯ ರಸ್ತೆಯಾಗಲಿ ಅಥವಾ ಸಂಪರ್ಕ ರಸ್ತೆಗಳು ಅಭಿವೃದ್ಧಿ ಕಂಡಿಲ್ಲ. ಕಳೆದ ಮೂರು ವರ್ಷಗಳ ಹಿಂದೆ ಮುಖ್ಯ ರಸ್ತೆ ಡಾಂಬರೀಕರಣಕ್ಕೆ ಜಲ್ಲಿ ತಂದು ಸುರಿದು ಕಾಮಗಾರಿ ಕೈಗೊಳ್ಳದೆ ಕೈ ಬೀಡಲಾಗಿದೆ. ಆದರೂ ಕಾಮಗಾರಿ ಬಿಲ್‌ ಪಾವತಿಯಾಗಿದೆ ಎಂಬ ಆರೋಪವಿದ್ದು, ಉಳಿದ ಸಂಪರ್ಕ ರಸ್ತೆಗಳು ಸಹ ಡಾಂಬರೀಕರಣಗೊಂಡಿಲ್ಲ. ಜಲ್ಲಿಕಲ್ಲು ಮಣ್ಣಿನ ರಸ್ತೆಯಲ್ಲಿಯೇ ಸಂಚರಿಸಬೇಕಾದ ಪರಿಸ್ಥಿತಿ ಈ ಬಡಾವಣೆಯ ನಿವಾಸಿಗಳದ್ದಾಗಿದೆ.

ಚರಂಡಿಗಳೇ ಇಲ್ಲ: ಇಷ್ಟು ವರ್ಷ ಕಳೆದರೂ ಸಹ ಇನ್ನೂ ಎಷ್ಟೋ ಕಡೆ ಚರಂಡಿಗಳು ನಿರ್ಮಾಣ ವಾಗಿಲ್ಲ. ಮಳೆ ಬಿದ್ದರೆ ನೀರೆಲ್ಲ ರಸ್ತೆ ಮೇಲೆ ಹರಿದು ಹೋಗುವಂತ ಪರಿಸ್ಥಿತಿ ಇದೆ. ಕೆಲವು ಚರಂಡಿ ಬದಿಗಳಲ್ಲಿ ಗಿಡಗಂಟಿಗಳು ಎದೆಯತ್ತರಕ್ಕೆ ಬೆಳೆದು ನಿಂತಿದ್ದು, ವಿಷ ಜಂತುಗಳ ಆವಾಸ ಸ್ಥಾನವಾಗಿದೆ. ಚರಂಡಿಯಿಂದ ಸೂಸುವ ದುರ್ವಾಸನೆಯ ನಡವೆಯೇ ಮಕ್ಕಳು ಶಾಲೆಗೆ ನಡೆದು ಹೋಗುವಂತ ದುಸ್ಥಿತಿ ನಿರ್ಮಾಣವಾಗಿದೆ.

ಜಾಣಕುರುಡು ಪ್ರದರ್ಶನ: ಬಹುತೇಕ ಕಡೆ ಗಿಡಗಂಟಿಗಳು ಬೆಳೆದುನಿಂತಿದ್ದರೂ ಸ್ವತ್ಛಗೊಳಿಸುವ ಗೋಜಿಗೆ ಹೋಗದೆ ಸಹ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಇದರಿಂದಾಗಿ ವಿಷ ಜಂತುಗಳು ಮನೆಯೊಳಗೆ ಪ್ರವೇಶಿಸುತ್ತವೆ ಎಂಬ ಭಯದಿಂದ ನಿವಾಸಿಗಳು ಮನೆಯ ಬಾಗಿಲು ಹಾಕಿಕೊಂಡೆ ಇರಬೇಕಿದೆ. ಒಂದೆಡೆ ಚರಂಡಿ ಸ್ವತ್ಛಗೊಳಿಸುತ್ತಿಲ್ಲ. ಮತ್ತೂಂದೆಡೆ ರಸ್ತೆಗಳು ಡಾಂಬರ್‌ ಕಂಡಿಲ್ಲ. ಜೊತೆಗೆ ಬೀದಿ ದೀಪಗಳು ಉರಿಯುತ್ತಿಲ್ಲ. ರಾತ್ರಿ ವೇಳೆ ಈ ರಸ್ತೆಗಳಲ್ಲಿ ಸಂಚರಿಸಲಾಗುತ್ತಿಲ್ಲ ಎಂಬ ದೂರುಗಳನ್ನು ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ, ಅಧಿಕಾರಿಗಳು ಮಾತ್ರ ತಮಗೂ ಇದಕ್ಕೂ ಸಂಬಂಧವಿಲ್ಲ ಎಂಬಂತೆ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ.

ನಿತ್ಯ ಈ ರಸ್ತೆಯಲ್ಲಿ ಪ್ರಸಿದ್ಧ ರಂಗನಾಥಸ್ವಾಮಿ ದರ್ಶನಕ್ಕೆ ಭಕ್ತರ ದಂಡೇ ಆಗಮಿಸುತ್ತದೆ. ರಸ್ತೆ ಬದಿಯಲ್ಲಿ ಮುಳ್ಳಿನ ಬೇಲಿ ಬೆಳೆದು ನಿಂತಿದ್ದು, ನಗರದಿಂದ ಬರುವ ಜನರು ಈ ರಸ್ತೆ ಬದಿಯನ್ನು ಗಮನಿಸಿ ಕಾಡಿನಂತೆ ಬಾಸವಾಗುತ್ತಿದೆ ಎನ್ನುತ್ತಾರೆ. ದೂರದೃಷ್ಟಿಯಿಂದ ನಿರ್ಮಾಣವಾಗಿರುವ ಈ ಬಡಾವಣೆಯ ಸ್ಥಿತಿಯೇ ಹೀಗಾದರೆ ಉಳಿದ ಬಡಾವಣೆಗಳ ಸ್ಥಿತಿಯೂ ಹೊರತಾಗಿಲ್ಲ. ಅದರಲ್ಲೂ ಖಾಲಿ ನಿವೇಶನಗಳಂತೂ ನಿಜಕ್ಕೂ ವಿಷಜಂತುಗಳ ಆವಾಸ ಸ್ಥಾನವಾಗಿದೆ. ಪಕ್ಕದ ಮನೆಯ ವಾಸಿಗಳಂತು ಆತಂಕದಿಂದಲೇ ವಾಸಿಸುತ್ತಿದ್ದಾರೆ.

ಹೋರಾಟದ ಎಚ್ಚರಿಕೆ: ಕಾಲ ಕಾಲಕ್ಕೆ ಕಂದಾಯ ಇತರೆ ಶುಲ್ಕವನ್ನು ಪುರಸಭೆಗೆ ಜಮಾ ಮಾಡಿ ಕೊಂಡು ಬರುತ್ತಿದ್ದೇವೆ. ಆದರೂ ಪುರಸಭೆ ತಮಗೆ ಯಾವುದೇ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುತ್ತಿಲ್ಲ. ಹೀಗೆ ಮುಂದುವರೆದರೆ, ಬಡಾವಣೆ ನಾಗರೀಕರಲ್ಲೆರೂ ಸೇರಿ ಪುರಸಭೆ ಮುಂದೆ ಪ್ರತಿಭಟನಾ ಹಮ್ಮಿಕೊಳ್ಳಬೇಕಾಗುತ್ತದೆ ಎಂದ ಸ್ಥಳಿಯ ನಾಗರಿಕರು ಎಚ್ಚರಿಕೆ ನೀಡಿದ್ದಾರೆ.

-ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.