ಡಿ.14 ರಂದು ರಾಷ್ಟ್ರೀಯ ಲೋಕ್‌ ಅದಾಲತ್‌: ನ್ಯಾ| ಕುಲಕರ್ಣಿ

Team Udayavani, Nov 26, 2019, 11:28 AM IST

dg-tdy-3

ದಾವಣಗೆರೆ: ರಾಷ್ಟ್ರೀಯ ಲೋಕ್‌ ಅದಾಲತ್‌ ಡಿ.14 ರಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಅಂಬಾದಾಸ್‌ ಕುಲಕರ್ಣಿ ಜಿ ತಿಳಿಸಿದ್ದಾರೆ.

ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ರಾಜೀಯಾಗಬಲ್ಲ ಅಪರಾಧ ಪ್ರಕರಣ, ಚೆಕ್‌ ಬೌನ್ಸ್‌, ಮೋಟಾರ್‌ ವಾಹನ ಅಪಘಾತ ಸಂಬಂಧವಾಗಿ ಪರಿಹಾರ, ಉದ್ಯೋಗದಲ್ಲಿ ಪುನರ್‌ ಸ್ಥಾಪಿಸಲ್ಪಡುವ ಪ್ರಕರಣ, ಕಾರ್ಮಿಕ ವಿವಾದ, ಕೌಟುಂಬಿಕ ನ್ಯಾಯಾಲಯದ ಪ್ರಕರಣ, ಬ್ಯಾಂಕ್‌ ಹಣ ವಸೂಲಾತಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಂಡು ಶೀಘ್ರ ಪರಿಹಾರ ಪಡೆಯಲು ಲೋಕ ಅದಾಲತ್‌ ಉತ್ತಮ ಅವಕಾಶ. ಜಿಲ್ಲೆಯ ನಾಗರಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಕೌಟುಂಬಿಕ ಪ್ರಕರಣ ಸೇರಿದಂತೆ ಯಾವುದೇ ರಾಜೀ ಪ್ರಕರಣಗಳಲ್ಲಿ ಕಕ್ಷಿದಾರನ ವಿರುದ್ಧ ತೀರ್ಪು ನೀಡಲಾಗುವುದಿಲ್ಲ. ಕೊಲೆ, ದರೋಡೆ, ಫೋಕ್ಸೋ, ಅಟ್ರಾಸಿಟಿ ಸೇರಿದಂತೆ ಘೋರ ಕ್ರಿಮಿನಲ್‌ ಪ್ರಕರಣಗಳು ಅದಾಲತ್‌ ವ್ಯಾಪ್ತಿಗೆ ಬರುವುದಿಲ್ಲ. ರಾಜೀ ಸಂಧಾನ ಮೂಲಕ ಅರೆ ಕ್ರಿಮಿನಲ್‌ ಮತ್ತು ಅರೆ ಸಿವಿಲ್‌ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು. ರಾಜೀ ಸಂಧಾನದಿಂದ ಕಕ್ಷಿದಾರರು ಹಾಗೂ ನ್ಯಾಯಾಲಯದ ಸಮಯ, ಹಣ ಉಳಿತಾಯ ಆಗುತ್ತದೆ. ಕಕ್ಷಿದಾರ ನ್ಯಾಯಾಲಯದಲ್ಲಿ ದಾವೆಹೂಡುವಾಗ ಪಾವತಿಸಿದ ಪೂರ್ಣ ಶುಲ್ಕವನ್ನು ರಾಜೀ ಆದ ನಂತರ ಮರು ಪಾವತಿಸಲಾಗುವುದು ಹಾಗೂ ಇಬ್ಬರೂ ದ್ವೇಷ ಮರೆತು ಅನ್ಯೋನ್ಯವಾಗಿ ಇರುವ ಅವಕಾಶ ದೊರೆಯುತ್ತದೆ ಎಂದು ತಿಳಿಸಿದರು.

ಡಿ.14 ರಂದು ಎರಡನೇ ಶನಿವಾರವಾಗಿದ್ದು,ಬೇರೆ ಯಾವುದೇ ಕಲಾಪಗಳು ನಡೆಯದೇ ಸಂಪೂರ್ಣವಾಗಿ ಲೋಕ ಅದಾಲತ್‌ ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ನ್ಯಾಯಾಧೀಶರು ಕಲಾಪ ನಡೆಸುವರು. ತಾಲೂಕು ಮಟ್ಟದಲ್ಲೂ ಅದಾಲತ್‌ ನಡೆಯಲಿದೆ. ನ್ಯಾಯಾಧೀಶರೊಂದಿಗೆ ವಕೀಲರು ಮತ್ತು ಕಕ್ಷಿದಾರರೂ ಕಲಾಪದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಲೋಕ ಅದಾಲತ್‌ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಕಡಿಮೆ ಇದ್ದು, ಮಾಧ್ಯಮದ ಮೂಲಕ ಹೆಚ್ಚಿನ ಪ್ರಚಾರ ಮತ್ತು ಮಾಹಿತಿ ನೀಡುವ ಮೂಲಕ ಅರಿವನ್ನು ಹೆಚ್ಚಿಸಬೇಕು. ಇದೇ ನ. 30 ರಂದು ತಾವು ನಿವೃತ್ತಿ ಹೊಂದಲಿದ್ದು, ಸಣ್ಣ ಪುಟ್ಟ ಪ್ರಕರಣಗಳ ಕುರಿತು ರಾಜೀ ಸಂಧಾನದ ಮೂಲಕ ವ್ಯಾಜ್ಯ ಪರಿಹರಿಸಿಕೊಳ್ಳುವುದರಿಂದ ನ್ಯಾಯಾಲಯಕ್ಕೆ ಬರುವ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು ಎನ್‌.ಬಡಿಗೇರ್‌, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್‌ .ಟಿ.ಮಂಜುನಾಥ್‌, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್‌.ಎಚ್‌.ಅರುಣ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.