ನೆರೆಗೆ ಹಾನಿಗೊಳಗಾದ ಧರ್ಮಸ್ಥಳ ಸ್ನಾನಘಟ್ಟದ ಕಿಂಡಿ ಅಣೆಕಟ್ಟು ವೀಕ್ಷಿಸಿದ ಅಶ್ವತ್ಥ ನಾರಾಯಣ

Team Udayavani, Nov 26, 2019, 2:29 PM IST

dcm

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಮಾರ್ಗ ಮಧ್ಯ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರು ಬೆಳ್ತಂಗಡಿ ಶಾಸಕರ ಕಚೇರಿ ಶ್ರಮಿಕಕ್ಕೆ ಭೇಟಿ ನೀಡಿದರು.  ಈ ವೇಳೆ ಶಾಸಕ ಹರೀಶ್ ಪೂಂಜ ಅವರನ್ನು ಸ್ವಾಗತಿಸಿದರು.

ಈ ವೇಳೆ ತಾಲೂಕು ಬಿಜೆಪಿ ಅಧ್ಯಕ್ಷ ಜಯಂತ ಕೋಟ್ಯಾನ್, ಹಿರಿಯ ಮುಖಂಡರಾದ ಕುಶಾಲಪ್ಪ ಗೌಡ, ಶಾರದಾ ರೈ, ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಬಾಲಕೃಷ್ಣ ಶೆಟ್ಟಿ ಸವಣಾಲು, ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ್ ಕಲ್ಮ.ಜ, ಜಯಂತ ಗೌಡ, ಸುಬ್ತಹ್ಮ ಗೌಡ ಕೈಕುರೆ, ಸೀತಾರಾಮ್ ಬೆಳಾಲು, ರಾಜೇಶ್ ನವಶಕ್ತಿ ಮತ್ತಿರರು ಇದ್ದರು. ಬಳಿಕ ನೆರೆ ಸಂದರ್ಭ ಹಾನಿಗೊಳಗಾದ ಧರ್ಮಸ್ಥಳ ಸ್ನಾನ ಘಟ್ಟ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

 ಧರ್ಮಸ್ಥಳ ಕಿಂಡಿ ಅಣೆಕಟ್ಟು ವೀಕ್ಷಣೆ
ಮಳೆಗಾಲಕ್ಕೂ ಮುನ್ನ ಹಾನಿಗೊಳಗಾದ ಧರ್ಮಸ್ಥಳ ಸ್ನಾಘಟ್ಟ ಸಮೀಪದ ಕಿಂಡಿ ಅಣೆಕಟ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು. ಈ ಪ್ರದೇಶವು ಮಳೆ ಕಾಡಾಗಿರುವುದರಿಂದ ಪ್ರವಾಸೋದ್ಯಮ ದೃಷ್ಟಿಯಿಂದ ಹಾಗೂ ಯುವ ಸಮೂಹಕ್ಕೆ ಕೌಶಲ್ಯ ಅಭಿವೃದ್ಧಿಗಾಗಿ ಶಾಸಕ ಹರೀಶ್ ಪೂಂಜ ಅವರ ಸಲಹೆಯಂತೆ ಕೈಗಾರಿಕೆ ಮತ್ತು ಉದ್ಯೋಗ ಲಭ್ಯತೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಚಾರ್ಮಾಡಿ ರಸ್ತೆ ಹಾಗೂ ಬೇಸಗೆಯಲ್ಲಿ ಧರ್ಮಸ್ಥಳ ಕ್ಷೇತ್ರ‌ ಸೇರಿದಂತೆ ಈ ಭಾಗದ ಜನತೆಗೆ ನೀರು ಪೂರೈಕೆಗೆ ನೆರಿಯಾ ಹೊಳೆಗೆ ಕಿಂಡಿ ಅಣೆಕಟ್ಟು ಕಟ್ಟುವ ಪ್ರಸ್ತಾವ ಕುರಿತು ಮಾದ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಹಿಂದೆ 14 ಕೋಟಿ ರೂ. ಘೋಷಣೆಯಾಗಿತ್ತು. ಆದರೆ ಸದ್ಯ ಕ್ಯಾಬಿನೆಟ್ ನಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆ ಬಾರದಂತೆ ಹೊಸ ಯೋಜನೆ ವಿಚಾರ ಕ್ಯಾಬಿನೆಟ್ ಮುಂದಿಟ್ಟು ಅಗತ್ಯ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗುತ್ತದೆ ಎಂದರು.

ಚಾರ್ಮಾಡಿ ಸೇರಿದಂತೆ ಈ ಭಾಗದ ಎಲ್ಲಾ ರಸ್ತೆಗಳ ಸಂಪೂರ್ಣ ಅಭಿವೃದ್ಧಿಗೆ ಅರಣ್ಯ ಇಲಾಖೆ ತೊಡಕು ವಿಚಾರವಾಗಿ ಮಾದ್ಯಮದ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು, ಮಳೆಯಾಶ್ರಿತ ಪ್ರದೇಶವಾದ್ದರಿಂದ ಈಭಾಗದ ರಸ್ತೆ ಹದಗೆಟ್ಟಿದೆ. ಸಂಪೂರ್ಣ ರಸ್ತೆ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದರು.

ಧರ್ಮಸ್ಥಳ ಸುರೇಂದ್ರ ಕುಮಾರ್, ಆಪ್ತ ಕಾರ್ಯದರ್ಶಿ ವೀರು ಶೆಟ್ಡಿ ಮತ್ತು ಕೃಷ್ಣ ಸಿಂಗ್, ಆಪ್ತ ಕಾರ್ಯದರ್ಶಿ ಮಹಾವೀರ್, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಪ್ರಶಾಂತ್ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಶ್ರೀನಿವಾಸ್ ರಾವ್ ಸುಧಾಕರ್, ಎ.ಎಸ್.ಪಿ ಸೈದುಲ್ ಅಡಾವತ್,  ವೃತ್ತ ನಿರೀಕ್ಷಕ ಗಣಪತಿ ಶಾಸ್ತ್ರೀ, ನಗರ ನೀರು ಸರಬರಾಜು ಯೋಜನೆಯ ಎ.ಇ.ಇ. ಶ.ಸುದ್ದೀನ್, ಎ.ಇ.ಇ. ರಕ್ಷಿತ್ ರಾವ್, ಜಿಡಬ್ಲ್ಯೂಡಿ ಎಇಇ ಶಿವಪ್ರಸಾದ್ ಅಜಿಲ, ಧರ್ಮಸ್ಥಳ ಗ್ರಾ.ಪಂ. ಚಂದನ್ ಕಾಮತ್, ರಾಜೇಂದ್ರ ಜೈನ್, ಸುಭಾಶ ಚಂದ್ರ ಜೈನ್, ಪಿಡಿಒ ಉಮೇಶ್, ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.