ಪ್ರತಿಯೊಬ್ಬರಿಗೂ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ


Team Udayavani, Nov 27, 2019, 3:00 AM IST

pratoyobbarigu

ಅರಕಲಗೂಡು: ಪ್ರತಿಯೊಬ್ಬರಿಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಬೃಹತ್‌ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಶಾಸಕ ಎ.ಟಿ. ರಾಮಸ್ವಾಮಿ ತಿಳಿಸಿದರು. ಪಟ್ಟಣದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ತಾಲೂಕು ಆಡಳಿತ, ಹಾಸನ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

12-13 ಸಾವಿರ ಜನರು ಆರೋಗ್ಯ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಶಿಬಿರದಲ್ಲಿ ತಪಾಸಣೆಗೊಳಗಾದ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದಲ್ಲಿ, ಹಾಸನ ಮತ್ತು ಬೆಂಗಳೂರಿಗೆ ಕಳುಹಿಸಿ ಉಚಿತ ಚಿಕಿತ್ಸೆ ಕೊಡಿಸಲಾಗುತ್ತದೆ ಎಂದು ತಿಳಿಸಿದರು.

500ಕ್ಕೂ ಹೆಚ್ಚು ವೈದ್ಯರಿಂದ ತಪಾಸಣೆ: ಈ ಶಿಬಿರದಲ್ಲಿ ಸುಮಾರು 22 ವಿಭಾಗದ ನುರಿತ 500 ಕ್ಕೂ ಹೆಚ್ಚು ವೈದ್ಯರು ಪಾಲ್ಗೊಂಡಿದ್ದರು. ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ 40-50 ಲಕ್ಷ ಬೆಲೆಯ ಉಚಿತ ಔಷಧಿ ವಿತರಿಸಲಾಗಿದೆ ಎಂದರು.

ಕಣ್ಣು, ಕ್ಯಾನ್ಸರ್‌, ಮೂಳೆ ತಜ್ಞರಿಗೆ ಬೇಡಿಕೆ: ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬಹುತೇಕ ರೋಗಿಗಳು ಕಣ್ಣು ಮತ್ತು ಕ್ಯಾನ್ಸರ್‌ ಹಾಗೂ ಕೀಲು ಮತ್ತು ಮೂಳೆ ತಪಾಸಣಾ ಕೊಠಡಿಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯವರು ಎರಡು ಬಸ್‌ಗಳಲ್ಲಿ ಉಪಯುಕ್ತ ತಂತ್ರಜ್ಞಾನವುಳ್ಳ ಯಂತ್ರಗಳೊಂದಿಗೆ ಆಗಮಿಸಿ ಸ್ಥಳದಲ್ಲೇ ಕ್ಯಾನ್ಸರ್‌ ರೋಗದ ಬಗ್ಗೆ ತಪಾಸಣೆಗೆ ಮುಂದಾದರು. ಸಾವಿರಾರು ಮಹಿಳೆಯರು ತಪಾಸಣೆ ಮಾಡಿಸಿಕೊಂಡರು. ಅದೇ ರೀತಿ ಕಣ್ಣು ಮತ್ತು ಮೂಳೆ ಪರೀಕ್ಷೆಗೂ ಜನರು ಸಾಲುಗಟ್ಟಿ ನಿಂತಿದ್ದರು.

ಕಾರ್ಯಕ್ರಮದಲ್ಲಿ ಚಿಲುಮೆ ಮಠಾದ್ಯಕ್ಷರಾದ ಜಯದೇವ ಸ್ವಾಮೀಜಿ, ಬಸವಾಪಟ್ಟಣ ತೋಂಟದಾರ್ಯ ಮಠದ ಬಸವಲಿಂಗ ಶಿವಯೋಗಿಗಳು, ಕೆಸವತ್ತೂರು ಮಠದ ಬಸವರಾಜೇಂದ್ರ ಸ್ವಾಮೀಜಿ, ಕಿರಿಕೊಡ್ಲಿ ಮಠದ ಸದಾ ಶಿವ ಸ್ವಾಮೀಜಿ, ಹಾಗೂ ವೈದ್ಯಾಧಿಕಾರಿಗಳಾದ ಡಾ. ರವಿಕುಮಾರ್‌, ಡಾ.ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್‌ಕುಮಾರ್‌, ತಾಲೂಕು ಆರೋಗ್ಯಧಿಕಾರಿ ಸ್ವಾಮೀಗೌಡ, ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿ ಸುರೇಶ್‌ಬಾಬು ಮೊದಲಾದವರು ಭಾಗವಹಿಸಿದರು.

ಶಾಸಕ ರಾಮಸ್ವಾಮಿ ಹುಟ್ಟುಹಬ್ಬ: ಶಾಸಕ ಎ.ಟಿ.ರಾಮಸ್ವಾಮಿಯವರು ಇಂದು 69 ನೇ ಹುಟ್ಟು ಹಬ್ಬವನ್ನ ಕಾರ್ಯಕರ್ತರು ಸರಳವಾಗಿ ಆಚರಿಸಿದರು, ಎಂದೂ ಹುಟ್ಟುಹಬ್ಬಕ್ಕೆ ಆದ್ಯತೆ ನೀಡದ ಎ.ಟಿ. ರಾಮಸ್ವಾಮಿ ಕಾರ್ಯಕರ್ತರ ಒತ್ತಡದ ಮೇರೆಗೆ ಕೇಕ್‌ ಕತ್ತರಿಸಿಕೊಳ್ಳುವ ಮೂಲಕ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು.

ಗ್ರಾಮೀಣ ಜನರಿಗೆ ನೆರವು: ಕೃಷಿ ಚಟುವಟಿಕೆಯಲ್ಲಿ ತೊಡಗುವ ಗ್ರಾಮೀಣ ಭಾಗದ ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ಇದನ್ನು ಮನಗಂಡು ಪ್ರತಿ ಗ್ರಾಮಗಳಲ್ಲೂ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಯಿತು. ಗ್ರಾಮೀಣ ಜನರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ತಾಲೂಕು ಮಟ್ಟದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಉಚಿತ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ರಾಮಸ್ವಾಮಿ ಹೇಳಿದರು.

ಸರ್ಕಾರಿ ಕಾಲೇಜು ಮೈದಾನದಲ್ಲಿ ಜನ ಜಾತ್ರೆ: ಆರೋಗ್ಯ ತಪಾಸಣಾ ಶಿಬಿರಕ್ಕೆ ಗ್ರಾಮೀಣ ಪ್ರದೇಶಗಳಿಂದ ವಾಹನ ಸೌಲಭ್ಯ ಕಲ್ಪಿಸಿದ್ದರಿಂದ 12 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರಿಂದ ಸರ್ಕಾರಿ ಕಾಲೇಜು ಮೈದಾನದಲ್ಲಿ ಜನ ಜಾತ್ರೆ ಉಂಟಾಗಿತ್ತು. ಆರೋಗ್ಯ ತಪಾಸಣೆಗೆ ಬಂದವರಿಗೆ ತಿಂಡಿ, ಊಟ, ಮಜ್ಜಿಗೆ ಮತ್ತು ನೀರನ್ನು ಸಮರ್ಪಕವಾಗಿ ವಿತರಿಸಲು ವಿವಿಧ ಇಲಾಖಾ ಸಿಬ್ಬಂದಿ ಹಾಗೂ ಸ್ವಯಂ ಸೇವಕರನ್ನು ನೇಮಿಸಲಾಗಿತ್ತು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.