ಉಪ ಚುನಾವಣೆಯಲ್ಲಿ ಡಿಕೆಶಿ ಚಾಣಾಕ್ಷ ನಡೆ


Team Udayavani, Nov 27, 2019, 3:10 AM IST

upachunavanee

ಬೆಂಗಳೂರು: 15 ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರಿದ್ದು, ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಘಟಾನುಘಟಿ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಹಿರಿಯ ನಾಯಕರ ನಡುವಿನ ಮುನಿಸಿನಿಂದ ಪ್ರಚಾರದಲ್ಲಿ ಗೊಂದಲ ಮುಂದುವರಿದಿದ್ದು, ಈ ನಡುವೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಕೂಡ ಪ್ರಚಾರ ಕೈಗೊಳ್ಳುವಲ್ಲಿ ಚಾಣಾಕ್ಷ ನಡೆ ಇಡುತ್ತಿದ್ದಾರೆ.

ಆಯ್ದ ಕ್ಷೇತ್ರಗಳಲ್ಲಿ ಮಾತ್ರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮದೇ ಪ್ರತ್ಯೇಕ ಕಾರ್ಯತಂತ್ರ ರೂಪಿಸುತ್ತಿದ್ದಾರೆ. 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದರೂ ದಕ್ಷಿಣ ಕರ್ನಾಟಕದ ಭಾಗದಲ್ಲಿ ಮಾತ್ರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಡಿಕೆಶಿ ನಿರ್ಧರಿಸಿ ದ್ದಾರೆ. ಹುಣಸೂರು, ಕೆ.ಆರ್‌.ಪೇಟೆ, ಕೆ.ಆರ್‌.ಪುರ, ಚಿಕ್ಕಬಳ್ಳಾಪುರ, ಶಿವಾಜಿನಗರ, ಮಹಾಲಕ್ಷ್ಮೀ ಲೇಔಟ್‌ ಹಾಗೂ ರಾಣಿಬೆನ್ನೂರು ಕ್ಷೇತ್ರಗಳಲ್ಲಿ ಮಾತ್ರ ಪ್ರಚಾರ ನಡೆಸಲು ನಿರ್ಧರಿಸಿದ್ದಾರೆ.

ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಕಾಂಗ್ರೆಸ್‌ನ ಒಂದು ವರ್ಗದಲ್ಲಿ ಉತ್ಸಾಹ ಹೆಚ್ಚಾಗಿತ್ತು. ಅಷ್ಟೇ ಅಲ್ಲದೇ ಸಿದ್ದರಾಮಯ್ಯ ಅವರಿಗೆ ಪರ್ಯಾಯ ನಾಯಕರಾಗಿ ಅವರನ್ನು ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸಿದ್ದರು. ಅದಕ್ಕೆ ಪೂರಕ ಎನ್ನುವಂತೆ ಡಿ.ಕೆ.ಶಿವಕುಮಾರ್‌ ಜೈಲಿನಿಂದ ಜಾಮೀನಿನ ಮೇಲೆ ವಾಪಸ್‌ ಬಂದ ಮೇಲೆ ಪಕ್ಷದ ವತಿಯಿಂದ ಅದ್ಧೂರಿ ಸ್ವಾಗತ ನೀಡಿ, ಜಿಲ್ಲೆಗಳಿಗೆ ಭೇಟಿ ನೀಡಿದಾಗ ಅದ್ಧೂರಿ ಕಾರ್ಯ ಕ್ರಮಗಳನ್ನು ಆಯೋಜಿಸುವ ಮೂಲಕ ಉಪ ಚುನಾ ವಣೆ ಯಲ್ಲಿ ಡಿ.ಕೆ.ಶಿವಕುಮಾರ್‌ ಪ್ರಭಾವ ಬಳಸಿ ಕೊಳ್ಳಲು ಅನೇಕ ನಾಯಕರು ಕಸರತ್ತು ನಡೆಸಿದ್ದರು.

ಪ್ರತ್ಯೇಕ ಅಸ್ತಿತ್ವದ ಲೆಕ್ಕಾಚಾರ: ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರನ್ನು 15 ಕ್ಷೇತ್ರಗಳಲ್ಲಿ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ. ಎಂ.ಬಿ. ಪಾಟೀಲ್‌, ಎಚ್‌.ಕೆ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್‌, ಡಾ.ಎಚ್‌.ಸಿ. ಮಹದೇವಪ್ಪ, ಎಸ್‌.ಆರ್‌. ಪಾಟೀಲ್‌, ಆರ್‌.ವಿ. ದೇಶಪಾಂಡೆ ಸೇರಿ ಪಕ್ಷದ ಹಿರಿಯ ನಾಯಕರಿಗೆ ಕ್ಷೇತ್ರಗಳ ಉಸ್ತುವಾರಿ ವಹಿಸಲಾಗಿದೆ.

ಆದರೆ, ಡಿ.ಕೆ.ಶಿವಕುಮಾರ್‌ ಕೋರ್ಟ್‌ ಪ್ರಕರಣದ ಹಿನ್ನೆಲೆಯಲ್ಲಿ ಯಾವುದೇ ಕ್ಷೇತ್ರದ ಅಧಿಕೃತ ಜವಾಬ್ದಾರಿ ವಹಿಸಿಕೊಳ್ಳದೇ ತಟಸ್ಥರಾಗಿ ಉಳಿಯುವ ಪ್ರಯತ್ನ ನಡೆಸಿದ್ದಾರೆ. ಅಲ್ಲದೇ ಚುನಾವಣಾ ಪ್ರಚಾರ ಕಾರ್ಯಗಳಲ್ಲಿಯೂ ಪ್ರತ್ಯೇಕವಾಗಿ ಪ್ರವಾಸ ಮಾಡುವ ಮೂಲಕ ಚುನಾವಣೆಯಲ್ಲಿ ತಮ್ಮದೇ ಆದ ಅಸ್ತಿತ್ವ ಪ್ರದರ್ಶನ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ತೀರ್ಮಾನಕ್ಕೆ ಹೆಚ್ಚಿನ ಮಾನ್ಯತೆ ದೊರೆತಿರುವುದರಿಂದ ಅವರೇ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲಿ ಎಂದು ಬಹುತೇಕ ಹಿರಿಯ ನಾಯಕರು ತಟಸ್ಥ ನಿಲುವು ತಾಳಿದ್ದಾರೆ. ಆದರೆ, ಡಿ.ಕೆ.ಶಿವಕುಮಾರ್‌ ಎರಡೂ ಬಣಗಳ ನಡುವೆ ಸಮಾನಾಂತರ ಅಂತರ ಕಾಯ್ದು ಕೊಳ್ಳುತ್ತ ತಮ್ಮದೇ ಆದ ಪ್ರತ್ಯೇಕ ಅಸ್ತಿತ್ವ ತೋರಿಸಲು ಲೆಕ್ಕಾಚಾರದ ಮೇಲೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

ಕೋರ್ಟ್‌ ಪ್ರಕರಣ ಕಾರಣ: ಡಿ.ಕೆ.ಶಿವಕುಮಾರ್‌ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ಇನ್ನೂ ಜಾರಿ ನಿರ್ದೇಶನಾಲಯದ ತನಿಖೆ ನಡೆಯುತ್ತಿದ್ದು, ಆಗಾಗ ಕೋರ್ಟ್‌ ವಿಚಾರಣೆಗೆ ಹಾಜರಾಗಬೇಕಾದ ಅನಿವಾರ್ಯತೆಯಿದೆ. ಈ ಕಾರಣಕ್ಕಾಗಿ ಅವರು ಉಪ ಚುನಾವಣೆಯಲ್ಲಿ ಹೆಚ್ಚು ಸಕ್ರಿಯರಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಅವರ ಆಪ್ತ ಮೂಲಗಳ ಮಾಹಿತಿ. ಕೋರ್ಟ್‌ ಪ್ರಕರಣ ನಡೆಯುತ್ತಿದ್ದು ಜಾಮೀನಿನ ಮೇಲೆ ಹೊರಗಡೆ ಇರುವುದರಿಂದ ಈ ಸಂದರ್ಭದಲ್ಲಿ ತೀವ್ರತರನಾದ ಪ್ರಚಾರ ಹಾಗೂ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ವಾಗ್ಧಾಳಿ ಮಾಡುವುದರಿಂದ ಮತ್ತೆ ಇಡಿ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬ ಆತಂಕವೂ ಅವರಿಗೆ ಕಾಡುತ್ತಿದೆ ಎನ್ನಲಾಗಿದೆ.

ಆರೋಗ್ಯ ಸಮಸ್ಯೆ: ಡಿ.ಕೆ.ಶಿವಕುಮಾರ್‌ ಅವರಿಗೆ ಜೈಲಿನಿಂದ ಹೊರ ಬಂದ ನಂತರ ಎದೆ ನೋವು ಹಾಗೂ ಬೆನ್ನು ನೋವಿನ ಸಮಸ್ಯೆಯೂ ಕಾಡುತ್ತಿದ್ದು, ಹೆಚ್ಚು ಪ್ರವಾಸ ಮಾಡಲು ಆಗುತ್ತಿಲ್ಲ ಎನ್ನಲಾಗಿದೆ. ಅದೇ ಕಾರಣಕ್ಕೆ ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಡಿ.ಕೆ.ಶಿವಕುಮಾರ್‌ ಅವರ ಅಧಿಕೃತ ಪ್ರಚಾರ ವೇಳಾ ಪಟ್ಟಿ ಪ್ರಕಾರ ಡಿಸೆಂಬರ್‌ 1ರಂದು ರಾಣೆಬೆನ್ನೂರು ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುವುದು ಕೂಡ ಅನುಮಾನ ಎಂದು ಹೇಳಲಾಗುತ್ತಿದೆ. ಕೆಪಿಸಿಸಿಯಿಂದ ಯಾವುದೇ ಕ್ಷೇತ್ರದಲ್ಲಿ ಪ್ರಚಾರ ನಡೆಸುವಂತೆ ಅಧಿಕೃತ ಸೂಚನೆ ಇಲ್ಲದಿರುವುದರಿಂದ ಡಿ.ಕೆ.ಶಿವಕುಮಾರ್‌ ಉಪ ಚುನಾವಣೆಯಲ್ಲಿ ತಮ್ಮ ಪ್ರತ್ಯೇಕ ಅಸ್ತಿತ್ವ ಮತ್ತು ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ತಮ್ಮದೇ ಆದ ಚಾಣಾಕ್ಷ ಹೆಜ್ಜೆ ಮುಂದಿಡುತ್ತಿದ್ದಾರೆ ಎನ್ನಲಾಗುತ್ತಿದೆ.

ಬದಲಾದ ಲೆಕ್ಕಾಚಾರ-ಗೋಕಾಕ್‌ನಿಂದ ದೂರ: ಡಿ.ಕೆ.ಶಿವಕುಮಾರ್‌ ಮೈತ್ರಿ ಸರ್ಕಾರದ ಪತನಕ್ಕೆ ಪ್ರಮುಖ ಕಾರಣವಾಗಿರುವ ರಮೇಶ್‌ ಜಾರಕಿಹೊಳಿಯನ್ನು ಸೋಲಿಸುವ ಪಣ ತೊಟ್ಟಿದ್ದರು. ಅಷ್ಟೇ ಅಲ್ಲದೇ ಗೋಕಾಕ್‌ನಲ್ಲಿ ಅವರನ್ನು ಸೋಲಿಸಲು ಬಿಜೆಪಿಯಲ್ಲಿ ಟಿಕೆಟ್‌ ವಂಚಿತ ಅಶೋಕ್‌ ಪೂಜಾರಿಯನ್ನು ಪಕ್ಷಕ್ಕೆ ಕರೆತಂದು ಜಾರಕಿಹೊಳಿ ಕುಟುಂಬಕ್ಕೆ ಠಕ್ಕರ್‌ ನೀಡಲು ಯೋಜನೆ ರೂಪಿಸಿದ್ದರು. ಆದರೆ, ಸತೀಶ್‌ ಜಾರಕಿಹೊಳಿ ಹಾಗೂ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್‌ ಕಾರ್ಯತಂತ್ರಕ್ಕೆ ಅಡ್ಡಿಪಡಿಸಿ, ಲಖನ್‌ ಜಾರಕಿಹೊಳಿಗೆ ಟಿಕೆಟ್‌ ಸಿಗುವಂತೆ ಮಾಡಿದ್ದರಿಂದ ಡಿ.ಕೆ.ಶಿವಕುಮಾರ್‌ ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ಅದೇ ಕಾರಣಕ್ಕೆ ಗೋಕಾಕ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕೆ ತೆರಳದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅದೇ ರೀತಿ ಹೊಸಕೋಟೆಯಲ್ಲಿ ಎಂ.ಟಿ.ಬಿ.ನಾಗರಾಜ್‌ ಅವರನ್ನು ರಣರಂಗದಲ್ಲಿಯೇ ನೋಡಿಕೊಳ್ಳುತ್ತೇನೆಂದು ಹೇಳಿದ್ದ ಡಿ.ಕೆ.ಶಿವಕುಮಾರ್‌, ಶರತ್‌ ಬಚ್ಚೇಗೌಡ ಅವರನ್ನು ಪಕ್ಷಕ್ಕೆ ಕರೆತಂದು ಅಭ್ಯರ್ಥಿಯನ್ನಾಗಿ ಮಾಡಿ ಗೆಲ್ಲಿಸಿಕೊಂಡು ಬರುವ ಕಾರ್ಯತಂತ್ರ ರೂಪಿಸಿದ್ದರು. ಆದರೆ, ಅಲ್ಲಿಯೂ ಅವರ ಲೆಕ್ಕಾಚಾರ ಬದಲಾಗಿರುವುದರಿಂದ ಹೊಸಕೋಟೆಯಿಂದಲೂ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

* ಶಂಕರ ಪಾಗೋಜಿ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.