ಬೆಳಗಾವಿ: ಡಿಕೆಶಿ- ಹೆಚ್ ಡಿಕೆ ಆಕಸ್ಮಿಕ ಭೇಟಿ
Team Udayavani, Dec 2, 2019, 11:49 AM IST
ಬೆಳಗಾವಿ: ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ತೆರಳಬೇಕಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಬೆಂಗಳೂರಿಗೆ ತೆರಳುತ್ತಿದ್ದ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಹವಾಮಾನ ವೈಪರೀತ್ಯದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದ ಇಬ್ಬರು ಕ್ಷಣ ಕಾಲ ಭೇಟಿಯಾಗಿ ಚರ್ಚೆ ನಡೆಸಿದರು.
ಈ ಆಕಸ್ಮಿಕ ಭೇಟಿಯಲ್ಲಿ ಯಾವುದೇ ರಾಜಕೀಯ ವಿಷಯಗಳು ಚರ್ಚೆಗಳು ನಡೆದಿಲ್ಲ ಎನ್ನಲಾಗಿದೆ.