ಸಿದ್ದರಾಮಯ್ಯ ಅವರು ಇಂದು ಯಾರಿಗೂ ಬೇಡವಾದ ಕೂಸು: ಶೋಭಾ ಕರಂದ್ಲಾಜೆ

ಪ್ರತಿಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ

Team Udayavani, Dec 2, 2019, 8:07 PM IST

Shobha-Karandlaje-750-14

ಬೆಂಗಳೂರು: ರಾಜ್ಯದಲ್ಲಿ ಪ್ರತಿಪಕ್ಷಗಳು ಮತದಾರರ ದಾರಿ ತಪ್ಪಿಸುತ್ತಿವೆ. ಕಾಂಗ್ರೆಸ್‌ನವರು 62, ಜೆಡಿಎಸ್‌ನವರು 34 ಸ್ಥಾನವಿಟ್ಟುಕೊಂಡು ಸರ್ಕಾರ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯನವರು ತಾವೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕಾಂಗ್ರೆಸ್‌ ನಾಯಕರಿಂದ ಹೇಳಿಸಲಿ ನೋಡೋಣ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದರು.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು 62 ಶಾಸಕರನ್ನಿಟ್ಟುಕೊಂಡು ಮುಖ್ಯಮಂತ್ರಿಯಾಗುವ ಹಗಲುಗನಸು ಕಾಣುತ್ತಿದ್ದಾರೆ. ವಿಧಾನಸಭೆಯಲ್ಲಿ ಬಹುಮತಕ್ಕೆ 113 ಸ್ಥಾನ ಅಗತ್ಯವಿದೆ. ಅವರ ಬಳಿ 62 ಶಾಸಕ ಬಲವಿದ್ದು, ಯಾವ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪ್ರಶ್ನಿಸಿದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರಿಗೆ ಬೆಂಬಲ ಕೊಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಡಿಸಿದ್ದಾರೆ. ಸಿದ್ದರಾಮಯ್ಯ ಅವರು ಇಂದು ಯಾರಿಗೂ ಬೇಡವಾದ ಕೂಸು. ಕಾಂಗ್ರೆಸ್‌ನಲ್ಲೂ ಅವರು ಯಾರಿಗೂ ಬೇಕಿಲ್ಲ. ಪ್ರತಿಪಕ್ಷ ಸ್ಥಾನ ಉಳಿಸಿಕೊಳ್ಳಲು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಗೋಕಾಕ್‌ನಲ್ಲಿ ಜೆಡಿಎಸ್‌ ಅಭ್ಯರ್ಥಿ ಅಶೋಕ್‌ ಪೂಜಾರಿಯನ್ನು ಮಂತ್ರಿ ಮಾಡುವುದಾಗಿ ಹೇಳಿದ್ದು, ಯಾವ ಸರ್ಕಾರದಲ್ಲಿ ಮಂತ್ರಿ ಮಾಡುತ್ತಾರೆ? ಅವರಿಗೆ ಬೆಂಬಲ ನೀಡುವವರು ಯಾರು? ಹಿಂದೆ 14 ತಿಂಗಳ ಕಾಲ ಮೈತ್ರಿ ಆಡಳಿತ ನಡೆಸಿ ಅಧಿಕಾರ ಕಳೆದುಕೊಂಡಿದ್ದಾರೆ. ಉಭಯ ನಾಯಕರು ಜನರನ್ನು ಮರುಳು ಮಾಡುವುದನ್ನು ಕಲೆಯನ್ನಾಗಿ ಮಾಡಿಕೊಂಡಿದ್ದು, ಅವರ ಮಾತುಗಳಿಗೆ ಯಾವುದೇ ಬದ್ಧತೆ ಇಲ್ಲ ಎಂದು ತಿಳಿಸಿದರು.

ಡಿ.9ರಂದು ಜನತೆಗೆ ಶುಭ ಸುದ್ದಿ
ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಡಿ.9ರ ನಂತರ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದಾರೆ. ಹಾಗಾದರೆ ಯಾವ ಸಿಹಿ ಸುದ್ದಿ ಬರಲಿದೆ? ಕಾಂಗ್ರೆಸ್‌ನವರಿಗೆ ಇಂದಿಗೂ ಸಿಹಿ ಸುದ್ದಿ ಎಂದರೆ ಸಿದ್ದರಾಮಯ್ಯ ಅವರನ್ನು ಕೆಳಗಿಸುವುದು, ಮನೆಗೆ ಕಳುಹಿಸುವುದು. ಈ ಸುದ್ದಿಗಾಗಿ ಕಾಂಗ್ರೆಸ್‌ನವರು ಕಾಯುತ್ತಿದ್ದಾರೆ.

ಸಿದ್ದರಾಮಯ್ಯ ಅವರ ಆಡಳಿತವೆಂದರೆ ಜಾತಿ ರಾಜಕಾರಣ. ಬೇಡವೆಂದರೂ ಟಿಪ್ಪು ಜಯಂತಿ ಆಚರಿಸಿದರು. ವೀರಶೈವ- ಲಿಂಗಾಯಿತರನ್ನು ಒಡೆಯುವ ಪ್ರಯತ್ನ ಮಾಡಿದರು. ಕುಮಾರಸ್ವಾಮಿಯವರು ಅದನ್ನೇ ಮುಂದುವರಿಸಿದರು. ಡಿ. 9ರ ನಂತರ ರಾಜ್ಯದ ಜನತೆಗೆ ಶುಭ ಸುದ್ದಿ ಸಿಗಲಿದೆ ಎಂದು ಹೇಳಿದರು.

ರಾಜ್ಯದ ಆಡಳಿತ ಸ್ಥಿರತೆಗಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ಮುಂದುವರಿಯಬೇಕು. ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಯಡಿಯೂರಪ್ಪನವರ ನಾಯಕತ್ವದಲ್ಲಿ ರಾಜ್ಯದಲ್ಲಿ ಹೊಸ ಬದಲಾವಣೆಯಾಗಲಿದೆ. ಜನರ ದಾರಿ ತಪ್ಪಿಸುತ್ತಿರುವ ಕಾಂಗ್ರೆಸ್‌, ಜೆಡಿಎಸ್‌ಗೆ ತಕ್ಕ ಪಾಠ ಕಲಿಸಬೇಕು. ಒಂದೆರಡು ಕಡೆ ಕಾಂಗ್ರೆಸ್‌, ಜೆಡಿಎಸ್‌ ಗೆದ್ದರೂ ಏನೂ ವ್ಯತ್ಯಾಸವಾಗದು. ಬಿಜೆಪಿ ಅಭ್ಯರ್ಥಿಗಳು ಗೆದ್ದರೆ ಸಚಿವರಾಗಲಿದ್ದಾರೆ ಎಂದು ತಿಳಿಸಿದರು.

“ಮತ್ತೆ ಮೈತ್ರಿ ಸರ್ಕಾರ ರಚನೆಯಾಗಬೇಕಾದರೆ ಸಿದ್ದರಾಮಯ್ಯ ಹಾಗೂ ನಾನು ಒಟ್ಟಿಗೆ ಸೇರಬೇಕಲ್ಲವೇ. ಹಿಂದಿನ ತಪ್ಪುಗಳಿಂದ ನಮಗೆ ತಿಳಿವಳಿಕೆ ಬಂದಿದೆ’ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಹೇಳಿಕೆ ಸ್ವಾಗತಿಸಿದ ಶೋಭಾ ಕರಂದ್ಲಾಜೆ, ದೇವೇಗೌಡರು ಅನುಭವಿ ನಾಯಕರು. ಕುಮಾರಸ್ವಾಮಿಯವರು ಕಾಂಗ್ರೆಸ್‌ನೊಂದಿಗೆ ಸರ್ಕಾರ ರಚಿಸಿ ಎಷ್ಟು ಹಿಂಸೆ ಅನುಭವಿಸಿದರು ಎಂದು ಕಣ್ಣಾರೆ ಕಂಡಿದ್ದಾರೆ. ಎಲ್ಲರೊಂದಿಗೆ ಸರ್ಕಾರ, ರಾಜಕೀಯ ಮಾಡಿ ಅವರಿಗೆ ಅನುಭವವಿದ್ದು, ಅದರ ಆಧಾರದಲ್ಲಿ ಮಾತನಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.

ಉಪಚುನಾವಣೆ ನಡೆದಿರುವ 15 ಕ್ಷೇತ್ರದಲ್ಲಿನ ಸರ್ಕಾರಿ ಮತ್ತು ಖಾಸಗಿ ಕಂಪೆನಿ ಉದ್ಯೋಗಿಗಳಿಗೆ ಸಂಬಳಸಹಿತ ರಜೆ ನೀಡಬೇಕು ಎಂದು ಆಯೋಗ ಸೂಚನೆ ನೀಡಿದೆ. ಸಂಬಂಧಪಟ್ಟ ಇಲಾಖೆಗಳು, ಉದ್ಯಮಿಗಳು ಸಂಬಳಸಹಿತ ರಜೆ ನೀಡಬೇಕು ಎಂದು ಮನವಿ ಮಾಡಿದರು.

ಉಪಚುನಾವಣೆ ಬಳಿಕ ಸರ್ಕಾರಕ್ಕೆ ಬಹುಮತ ಬರಲಿದೆ. ಬಿಜೆಪಿ ಬೇರೆ ಆಯ್ಕೆ ಬಗ್ಗೆ ಯೋಚಿಸುವುದಿಲ್ಲ. ಜೆಡಿಎಸ್‌ ಬೆಂಬಲದ ಬಗ್ಗೆಯೂ ಚರ್ಚೆ ಮಾಡುವುದಿಲ್ಲ. ಎಲ್ಲೆಡೆ ತ್ರಿಕೋನ ಸ್ಪರ್ಧೆ ಎದುರಿಸುತ್ತಿದ್ದೇವೆ. ಕೆಲವೆಡೆ ಕಾಂಗ್ರೆಸ್‌- ಜೆಡಿಎಸ್‌ ಹೊಂದಾಣಿಕೆ ಮಾಡಿಕೊಳ್ಳಬಹುದು. ಆದರೆ ಉಭಯ ಪಕ್ಷಗಳ ನಾಯಕರು ಹೊಂದಾಣಿಕೆ ಮಾಡಿಕೊಂಡರೂ ಕಾರ್ಯಕರ್ತರು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಏನೇ ಗೊಂದಲ ಮೂಡಿಸಲು ಯತ್ನಿಸಿದರೂ ನಮಗೆ ಅನುಕೂಲವಾಗಲಿದೆ ಎಂದು ಹೇಳಿದರು. ರಾಜ್ಯ ಬಿಜೆಪಿ ಮಾಧ್ಯಮ ವಿಭಾಗದ ಸಂಚಾಲಕ ಎ.ಎಚ್‌. ಆನಂದ್‌, ಸಹ ವಕ್ತಾರ ಎಸ್‌.ಪ್ರಕಾಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.