ಷಷ್ಠಿ ದಿನ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ನಾಗದರ್ಶನ!

Team Udayavani, Dec 4, 2019, 6:17 PM IST

4-December-28

ಮೂಡಿಗೆರೆ: ಚಂಪಾ ಷಷ್ಠಿಯ ದಿನ ತಾಲೂಕಿನ ಗೋಣಿಬೀಡು ಅಗ್ರಹಾರದ ಸುಬ್ರಹ್ಮಣ್ಯ ದೇವಾಲಯದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ.

ಸುಬ್ರಹ್ಮಣ್ಯ ಷಷ್ಠಿಯ ದಿನ ಸಾವಿರಾರು ಭಕ್ತರಿರುವಾಗಲೇ ನಾಗರಹಾವೊಂದು ದೇವಾಲಯಕ್ಕೆ ಆಗಮಿಸಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸೋಮವಾರ ದೇವಾಲಯದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಸಾರ್ವಜನಿಕರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಆದರೆ, ಜನಸಾಗರದ ಮಧ್ಯೆ ನಾಗರಹಾವೊಂದು ತನ್ನ ನೆಚ್ಚಿನ ದೈವ ಆದಿ ಸುಬ್ರಹ್ಮಣ್ಯೇಶ್ವರನ ದರ್ಶನಕ್ಕಾಗಿ ಆಗಮಿಸಿದಾಗ ಭಕ್ತರು ದಂಗಾದರು. ನಂತರ ಸುಬ್ರಹ್ಮಣ್ಯ ಸ್ವಾಮಿ ಹಾಗೂ ನಾಗದೇವನಿಗೂ ಉಘೇ ಉಘೇ ಎನ್ನುತ್ತ ಕೈಮುಗಿದು ನಿಂತರು.

ಪ್ರತಿ ವರ್ಷ ಸುಬ್ರಹ್ಮಣ್ಯ ಷಷ್ಠಿಯ ದಿನ ನಾಗರಹಾವು ದೇವಾಲಯಕ್ಕೆ ಆಗಮಿಸುವ ಸಂಪ್ರದಾಯವಿದೆ. ಅದೇ ರೀತಿ ಈ ವರ್ಷವೂ ಕೂಡ ನಾಗರಹಾವು ಬಂದಿತ್ತು ಎನ್ನಲಾಗಿದೆ. ಆದರೆ, ಈ ಬಾರಿ ಆಗಮಿಸಿದ ಹಾವಿನ ಹೆಡೆಯ ಭಾಗದಲ್ಲಿ ವಿಭೂತಿ ಪಟ್ಟೆ ಕಂಡು ಎಲ್ಲರಿಗೂ ಅಚ್ಚರಿಯಾಗಿದೆ.

ಸರಸರನೆ ಹರಿದಾಡಿಕೊಂಡು ಬಂದ ನಾಗರ ಕೆಲವೇ ಕ್ಷಣಗಳಲ್ಲಿ ವಾಪಸ್‌ ಹೊರಟುಹೋಗಿದೆ. ವಿಷಯ ತಿಳಿಯುತ್ತಿದ್ದಂತೆ ಈ ವಿಶೇಷವನ್ನು ಕಾಣಲು ಸಾರ್ವಜನಿಕರು ಆಗಮಿಸಿದರಾದರೂ ನಂತರ ಆಗಮಿಸಿದ ಭಕ್ತಾದಿಗಳಿಗೆ ನಾಗರ ದರ್ಶನ ವಾಗಿಲ್ಲ. ಈ ಅಚ್ಚರಿಯ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಹಾವು ಸಾಧಾರಣ ಅಳತೆಯುಳ್ಳದ್ದಾಗಿದ್ದು, ತುಂಬಾ ಚಟುವಟಿಕೆಯದ್ದಾಗಿತ್ತು. ಇದು ದೈವಕ್ಕೆ ಸಂಬಂಧಿಸಿದ ಹಾವು ಎನ್ನುತ್ತ, ಇದನ್ನು ಬೇರೆ ಯಾರಾದರೂ ಮಾಡಿದ್ದಾರೆ ಎನ್ನಲು, ಇಂತಹ ಚುರುಕಾದ ಹಾವಿಗೆ ವಿಭೂತಿ ಹಚ್ಚಿ ದೇವಸ್ಥಾನಕ್ಕೆ ಬರುವಂತೆ ಹೇಳುವ ಪರಿಣಿತರು ಸ್ಥಳೀಯವಾಗಿ ಯಾರೂ ಇಲ್ಲ ಎನ್ನುವುದು ಭಕ್ತರ ವಾದ. ಹಾವಿನ ಹೆಡೆಯ ಮೇಲ್ಭಾಗದಲ್ಲಿ ಮೂರು ಬೆರಳಿನಲ್ಲಿ ಹಚ್ಚಿದ ವಿಭೂತಿ ಪಟ್ಟೆಯಂತೆ ಇರುವ ಚಿತ್ರ ಚರ್ಮದ ಒಳಭಾಗದಲ್ಲಿ ಇರುವುದು ಕಂಡುಬಂದಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.