ಶಾಲಾ ಕೊಠಡಿ ನಿರ್ಮಿಸಲು ಕೈಗಾರಿಕೆಗಳಿಗೆ ಮನವಿ

Team Udayavani, Dec 13, 2019, 4:59 PM IST

rn-tdy-1

ರಾಮನಗರ: ಜಿಲ್ಲಾ ಪಂಚಾಯ್ತಿ ಅನುದಾನದಲ್ಲಿ ತಾಲೂಕಿನ ಬಿಡದಿ ಹೋಬಳಿ ಕಂಚುಗಾರನಹಳ್ಳಿ ,ಗ್ರಾಮದಲ್ಲಿ ನಿರ್ಮಿಸಿರುವ ಶಾಲೆಯ ಕಟ್ಟಡಕ್ಕೆ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿಕೊಡುವಂತೆ ಬಿಡದಿ ಕೈಗಾರಿಕಾ ಸಂಘಕ್ಕೆ ಮನವಿ ಮಾಡುವುದಾಗಿ ಶಾಸಕ ಎ.ಮಂಜುನಾಥ್‌ ತಿಳಿಸಿದರು.

ಕಂಚುಗಾರನಹಳ್ಳಿಯಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ 2 ಕೊಠಡಿಗಳ ಸರ್ಕಾರಿ ಶಾಲೆಯ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು,ದಾಖಲಾತಿ ಹೆಚ್ಚಳವಾಗುವ ಸಾಧ್ಯತೆ ಇರುವುದರಿಂದ ಹೆಚ್ಚುವರಿ ಕೊಠಡಿಗಳನ್ನು ಸಿ.ಎಸ್‌. ಆರ್‌.ನಿಧಿಯಲ್ಲಿ ನಿರ್ಮಿಸಿಕೊಡಲು ಕೈಗಾರಿಕೆಗಳಿಗೆ ಮನವಿ ಮಾಡುವುದಾಗಿ ತಿಳಿಸಿದ್ದು, ಕಾಂಪೌಂಡ್‌ ಗೋಡೆ ಎತ್ತರಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ಬಹುತೇಕ ಶಾಲಾ ಕಟ್ಟಡಗಳ ಮೇಲ್ಚಾವಣಿಗೆ ಚುರುಕಿಹಾಕದೆ ಬಿಡುತ್ತಿರುವುದರಿಂದ ಅಲ್ಪಾವಧಿಯಲ್ಲಿಯೇ ಕಟ್ಟಡಗಳು ಶಿಥಿಲವಾಗುತ್ತಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಶಾಸಕರು, ಶಾಲಾ ಕಟ್ಟಡಗಳಿಗೆ ಚುರುಕಿ ಹಾಕುವುದು ಕಡ್ಡಾಯವಾಗಬೇಕು ಎಂದರು. ಶಾಲಾ ಕಟ್ಟಡ ಕಾಮಗಾರಿ ಬಗ್ಗೆ ಮುತುವರ್ಜಿ ವಹಿಸಿದ ಗ್ರಾಮಸ್ಥರ ಬಗ್ಗೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಕಂಚುಗಾರನಹಳ್ಳಿ ಆಯ್ಕೆಯಾಗಿದ್ದು, ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಜಿಪಂ ತಾಪಂ ಮತ್ತು ತಮ್ಮ ಶಾಸಕ ನಿಧಿಗಳನ್ನು ಸಮರ್ಪಕವಾಗಿ ಬಳಕೆ ಮಾಡಲಾಗಿದೆ. ಬೀದಿ ದೀಪ ನಿರ್ವಹಣೆ, ಸ್ವತ್ಛತೆ ಕಾಪಾಡುವುದು ಸೇರಿದಂತೆ ಸಣ್ಣ ಪುಟ್ಟ ಸಮಸ್ಯೆಗಳಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ಪರಿಹಾರ ಕಲ್ಪಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಎಂ ಆಗಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವ ವಹಿಸಿದ್ದ ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಬಿಡದಿ ಹೋಬಳಿ ಅಭಿವೃದ್ಧಿಗೆ 40 ಕೋಟಿಗಳ ಅನುದಾನ ಬಿಡುಗಡೆ ಮಾಡಿದ್ದರು. ಈಗಿನ ಬಿಜೆಪಿ ಸರಕಾರ ಆದನ್ನು ತಡೆ ಹಿಡಿದಿದೆ. ಆದರೆ ತಾವು ಸರ್ಕಾರದ ಮಟ್ಟದಲ್ಲಿ ಹೋರಾಟ ಮಾಡಿ 40 ಕೋಟಿ ಜೊತೆಗೆ 30 ಕೋಟಿ ರೂಗಳ ಯೋಜನೆ ಸೇರಿಸಿ 70 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಭೈರಮಂಗಲ, ಇಟ್ಟಮಡು, ಹೆಗ್ಗಡಗೆರೆ ಮುಂತಾದ ಗ್ರಾಮಗಳ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಜಿಪಂ ಸದಸ್ಯ ಎಂ.ಎನ್‌.ಮಂಜುನಾಥ್‌, ಬೈರ ಮಂಗಲ ವಿಎಸ್‌ಎಸ್‌ಎನ್‌ ಅಧ್ಯಕ್ಷ ಎಚ್‌.ಎಸ್‌. ಸಿದ್ದರಾಜು, ಗ್ರಾಪಂ ಸದಸ್ಯ ಶಿವರಾಮು, ಮುಖಂಡರಾದ ಇಟ್ಟಮಡು ಬಿ.ಗೋಪಾಲ್‌, ರಾಮಯ್ಯ, ಹನುಮಂತು, ನಾಗರಾಜು, ಕಂಚುಗಾರನಹಳ್ಳಿ ಗ್ರಾಪಂ ಪಿಡಿಒ ರಾಮಕೃಷ್ಣಯ್ಯ, ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.