ಅತಿಕ್ರಮಣ ತೆರವು ಕಾರ್ಯಾರಂಭಕ್ಕೆ ಗಡುವು

Team Udayavani, Dec 16, 2019, 10:40 AM IST

huballi-tdy-3

ಹುಬ್ಬಳ್ಳಿ: ಬಿಆರ್‌ಟಿಎಸ್‌ ರಸ್ತೆ ಹಾಗೂ ಕೇಂದ್ರ ರಸ್ತೆ ನಿಧಿಯಡಿ (ಸಿಆರ್‌ಎಫ್‌) ನಿರ್ಮಿಸಲಾದ ರಸ್ತೆಗಳ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು 10 ದಿನಗಳಲ್ಲಿ ಆರಂಭಿಸಲು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಶಿ ಅಧಿಕಾರಿಗಳಿಗೆ ಗಡುವು ನೀಡಿದರು.

ನಗರದ ಸರ್ಕಿಟ್‌ ಹೌಸ್‌ನಲ್ಲಿ ರವಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅತಿಕ್ರಮಣ ತೆರವಿಗೆ ಎಲ್ಲ ಜನಪ್ರತಿನಿಧಿಗಳು ಬೆಂಬಲಿಸುತ್ತಾರೆ. ಮುಲಾಜಿಲ್ಲದೆ ಅತಿಕ್ರಮಣ ತೆರವು ಮಾಡಬೇಕು. ಅತಿಕ್ರಮಣದಿಂದಾಗಿ ಬಿಆರ್‌ಟಿಎಸ್‌ ಹಾಗೂ ಸಿಆರ್‌ ಎಫ್‌ ರಸ್ತೆಗಳಲ್ಲಿ ಸಂಚಾರ ದುಸ್ತರವಾಗಿದೆ. ಸರಕಾರಿ ಜಾಗ ಅತಿಕ್ರಮಣ ಮಾಡಿಕೊಂಡವರ ಮೇಲೆ ಪೊಲೀಸ್‌ ಇಲಾಖೆ ಸಹಕಾರ ಪಡೆದುಕೊಂಡು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

43 ಕೋಟಿ ವೆಚ್ಚದಲ್ಲಿ ಗೋಕುಲ ರಸ್ತೆ ಅಭಿವೃದ್ಧಿ ಕಾಮಗಾರಿ ಮಾಡುವ ಅವಶ್ಯಕತೆಯಿಲ್ಲ. ವಿನ್ಯಾಸ ಬದಲಾವಣೆ ಮಾಡಿ. ಫುಟ್‌ಪಾತ್‌ಗೆ ಆದ್ಯತೆ ನೀಡಿ. ಸೈಕಲ್‌ ಪಾತ್‌ಗೆ ವಿರೋಧವಿಲ್ಲ. ಆದರೆ ಯಾವುದೇ ಕಾರಣಕ್ಕೂ ರಸ್ತೆಯ ಅಗಲವನ್ನು ಕಡಿಮೆ ಮಾಡಬಾರದು ಎಂದು ತಿಳಿಸಿದರು.

ಎಲ್ಲರೂ ಸರಕಾರಿ ಆಸ್ಪತ್ರೆಗಳನ್ನೇ ಅವಲಂಬಿಸುವ ಅವಶ್ಯಕತೆಯಿಲ್ಲ. ಆರೋಗ್ಯ ವಿಮಾ ಸೌಲಭ್ಯ ನೀಡುತ್ತಿರುವುದರಿಂದ ಆರೋಗ್ಯ ವಿಮಾ ಸಮಾಜ ಮಾಡುವುದು ಕೇಂದ್ರ ಸರಕಾರದ ಉದ್ದೇಶವಾಗಿದೆ. ಆದ್ದರಿಂದ ವಿಮೆ ಹೊಂದಿದವರು ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಹೇಳಿದರು.

ಉಣಕಲ್‌ ಕೆರೆ ಅಭಿವೃದ್ಧಿಯ 3ನೇ ಹಂತದ 45 ಕೋಟಿ ರೂ. ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಿ. ಉಣಕಲ್‌ ಕೆರೆ ದಡದಲ್ಲಿರುವ ದೇವಸ್ಥಾನದ ಸಮೀಪದ ಖಾಸಗಿ ಜಮೀನನ್ನು ಸ್ವಾಧೀನಪಡಿಸಿಕೊಂಡು ಕೆರೆಯನ್ನು ಪ್ರವಾಸಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸಬೇಕು. ಅಲ್ಲಿ ಜಲಸಾಹಸ ಕ್ರೀಡೆಗಳಿಗೆ ಅವಕಾಶ ಕಲ್ಪಿಸಬೇಕಿದೆ ಎಂದರು. ವೈಟ್‌ ಟಾಪಿಂಗ್‌ ರಸ್ತೆಗಳಿಂದ ಕೆಲ ಸಮಸ್ಯೆಗಳು ಉದ್ಭವಿಸುತ್ತಿವೆ. ರಸ್ತೆಗಳ ಎತ್ತರ ಹೆಚ್ಚಾಗುತ್ತಿರುವುದರಿಂದ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ. ಮನೆಗೆ ನೀರು ನುಗ್ಗುವುದೆಂಬ ಭೀತಿ ಜನರಲ್ಲಿದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ವಿಧಾನ ಪರಿಷತ್‌ ಸದಸ್ಯರಾದ ಎಸ್‌.ವಿ. ಸಂಕನೂರ, ಪ್ರದೀಪ ಶೆಟ್ಟರ, ಶಾಸಕ ಪ್ರಸಾದ ಅಬ್ಬಯ್ಯ, ಜಿಲ್ಲಾಧಿಕಾರಿ ದೀಪಾ ಚೋಳನ್‌, ಸ್ಮಾರ್ಟ್‌ ಸಿಟಿ ಎಂ.ಡಿ. ಶಕೀಲ ಅಹ್ಮದ್‌, ಎಸ್‌.ಎಚ್‌. ನರೇಗಲ್‌, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಮೊದಲಾದವರಿದ್ದರು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.