ಭದ್ರಾ ಯೋಜನೆ ನಿರಾಶ್ರಿತರ ಬದುಕು ದುಸ್ತರ

ಭದ್ರಾ ಮೇಲ್ದಂಡೆ ಯೋಜನೆ ನಿರಾಶ್ರಿತರು, ಅಧಿ ಕಾರಿಗಳ ಸಭೆಯಲ್ಲಿ ಶಾಸಕ ಟಿ.ಡಿ.ರಾಜೇಗೌಡ ಬೇಸರ

Team Udayavani, Dec 18, 2019, 4:13 PM IST

18-Decemebr-13

ಎನ್‌.ಆರ್‌.ಪುರ: ಭದ್ರಾ ಹಿನ್ನೀರಿನಿಂದ ನಿರಾಶ್ರಿತರಾದವರನ್ನು ಭದ್ರಾ ಮೇಲ್ದಂಡೆ ಯೋಜನೆ ಹೆಸರಲ್ಲಿ ಮತ್ತೂಮ್ಮೆ ನಿರಾಶ್ರಿತರನ್ನಾಗಿ ಮಾಡಿರುವುದರಿಂದ ಇಲ್ಲಿನ ಜನರ ಬದುಕು ದುಸ್ತರವಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಬೇಸರ ವ್ಯಕ್ತಪಡಿಸಿದರು.

ಮುತ್ತಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾತ್ಕೊàಳಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ನಿರಾಶ್ರಿತರು, ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಜನಪ್ರತಿನಿ ಧಿಗಳ ಸಭೆಯಲ್ಲಿ ಮಾತನಾಡಿದರು. ಭದ್ರಾ ಮತ್ತು ತುಂಗಾ ನದಿಗಳ ಯೋಜನೆಯಿಂದ ನಿರಾಶ್ರಿತರ ಬಗ್ಗೆ ಇಂಜಿನಿಯರ್‌ ಹಾಗೂ ಕಂಪನಿಯವರು ಸಹಾನೂಭೂತಿ ಹೊಂದಬೇಕೇ ಹೊರತು, ಅವರನ್ನು ಹೆದರಿಸುವ ಕೆಲಸ ಮಾಡಬಾರದು ಎಂದರು.

ಕಾಲುವೆ ನಿರ್ಮಾಣಕ್ಕೆ ದೊಡ್ಡ ಪ್ರಮಾಣದಲ್ಲಿ ಮಣ್ಣನ್ನು ತೆಗೆದಿರುವುದರಿಂದ ಗದ್ದೆಯ ಮೇಲೆ ಮಣ್ಣು ಬೀಳುವುದನ್ನು ತಪ್ಪಿಸಲು ಕಂಪನಿಯವರು ಸಿಮೆಂಟ್‌ ವಾಲ್‌ ನಿರ್ಮಿಸಬೇಕು. ಈ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿ ತೋಡಿ ಮಣ್ಣು ತೆಗೆದಿರುವುದರಿಂದ ಇಲ್ಲಿನ ರೈತರ ನೀರಾವರಿ ಮೂಲ ಬತ್ತಿ ಹೋಗುವ ಆತಂಕ ಕಾಡುತ್ತಿದೆ ಎಂದರು.

ಆರಂಭದಲ್ಲಿ ಬೇಕಾಬಿಟ್ಟಿ ಸರ್ವೆ ಮಾಡಿರುವುದರಿಂದ ರೈತರಿಗೆ ತೊಂದರೆಯಾಗಿದ್ದು, ಇದಕ್ಕೆ ಅಂದಿನ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ ಎಂದು ದೂರಿದರು.

ಕಾಲುವೆ ನಿರ್ಮಾಣ ಮಾಡುವ ಮೊದಲು ಚರಂಡಿ ನಿರ್ಮಿಸಿ,ನಂತರ ರಸ್ತೆ ಮಾಡಿದ ಮೇಲೆ ಕಾಲುವೆ ನಿರ್ಮಾಣ ಮಾಡಬೇಕು. ರೈತರ ಜಮೀನುಗಳಿಗೆ ಮಣ್ಣು ಬೀಳದಂತೆ ತಡೆಯಬೇಕು. ಪರಿಹಾರ ನೀಡುವಾಗ ಹಳೆ ಮನೆ, ಹೊಸ ಮನೆ ಎಂಬ ಭೆದ ಮಾಡದೆ ಎಲ್ಲರಿಗೂ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೆಲವರು ಗುಡಿಸಲು ಕಟ್ಟಿಕೊಂಡು ಕೆಲಸಕ್ಕಾಗಿ ಬೇರೆಕಡೆ ಹೋಗಿದ್ದು, ಅಂತವರ ಗುಡಿಸಲುಗಳಿಗೂ ಪರಿಹಾರ ನೀಡಬೇಕು. ಇಲ್ಲಿನ ಎಲ್ಲಾ ನಿರಾಶ್ರಿತರೂ ಬಡವರಾಗಿದ್ದು, ಅಂತಹವರ ಕಣ್ಣಲ್ಲಿ ನೀರು ಹಾಕಿಸಬೇಡಿ. ದೇವರ ನಿಮಗೆ ಒಳ್ಳೆಯದು ಮಾಡುವುದಿಲ್ಲ. ಕಾನೂನಿಗಿಂತ ಮಾನವೀಯತೆ ಮುಖ್ಯ. ಇವರಿಗೆ ಹೊಸದಾಗಿ ಬದುಕನ್ನು ಕಟ್ಟಿಕೊಳ್ಳಲು 2 ಎಕರೆ ಜಾಗ ಸರ್ಕಾರದಿಂದ ಹುಡುಕಲು ಅ ಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಖಾಸಗಿಯವರು ಜಾಗ ನೀಡಲು ಮುಂದೆ ಬಂದರೆ ಖರೀದಿಸಲು 30 ಲಕ್ಷ ರೂ.ಮೀಸಲಿಡಬೇಕು ಎಂದರು.

ಮನೆ ನಿರ್ಮಾಣ ಮಾಡಲು ಸಚಿವರೊಂದಿಗೆ ಚರ್ಚೆ ಮಾಡಿದ್ದು, ಪ್ರತಿ ಮನೆ ನಿರ್ಮಾಣಕ್ಕೆ 3ಲಕ್ಷ ರೂ. ನೀಡುವ ಭರವಸೆ ನೀಡಿದ್ದಾರೆ ಎಂದರು. ಈ ಭಾಗದ ರಸ್ತೆ ಸಂಪೂರ್ಣ ಹಾಳಾಗಿದ್ದು, 5ಕಿ.ಮೀ. ರಸ್ತೆ, ಕಾಲೋನಿಗಳಿಗೆ ಸಿಸಿ ರಸ್ತೆ ನಿರ್ಮಾಣ, ರಂಗ ಮಂದಿರ ಹಾಗೂ ಇಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗುವುದು. ಇಲ್ಲಿನ ಕೆರೆ ಸಂಪೂರ್ಣ ಹಾಳಾಗಿದ್ದು, ರೈತರಿಗೆ ದುರಸ್ತಿ ಮಾಡಿಕೋಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ನಿರಾಶ್ರಿತರಾದ ಚಂದ್ರು, ಶೇಖರ್‌ ಮಾತನಾಡಿ, ನಮ್ಮ ಸಮಸ್ಯೆಗಳನ್ನು ಅರಿಯಲು ನಮ್ಮ ಗ್ರಾಮಕ್ಕೆ ಭೇಟಿ ನೀಡಿ ಕಾಡಿನಲ್ಲಿ ನಡೆದುಕೊಂಡು ಬಂದ ಶಾಸಕರನ್ನು ಗ್ರಾಮಸ್ಥರ ಪರವಾಗಿ ಅಭಿನಂದಿಸಲಾಗುವುದು ಎಂದರು.

ಜಿಪಂ ಸದಸ್ಯ ಪಿ.ಆರ್‌.ಸದಾಶಿವ ಮಾತನಾಡಿ, ಈ ಭಾಗದ ಜನರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್‌ ಸದಸ್ಯೆ ಲಲಿತಾ ನಾಗರಾಜ್‌, ಪಟ್ಟಣ ಪಂಚಾಯತ್‌ ಸದಸ್ಯ ಪ್ರಶಾಂತ್‌ ಶೆಟ್ಟಿ, ಮುಖಂಡರಾದ ಎಸ್‌.ಡಿ. ರಾಜೇಂದ್ರ, ಬಿ.ಎಸ್‌.ಸುಬ್ರಹ್ಮಣ್ಯ, ಗ್ರಾಮಸ್ಥರಾದ ವೆಂಕಟೇಶ್‌, ಹರೀಶ್‌, ಚಂದ್ರಶೇಖರ್‌, ಇಇ ಮಂಜಪ್ಪ, ಎಇಇ ಲೋಹಿತಾಶ್ವ, ಇಂಜಿಯರ್‌ ಗಳಾದ ಅಕ್ಷಯ್‌,ನಿತ್ಯಾ, ತಾಲೂಕು ಪಂಚಾಯತ್‌ ಇಒ ನಯನ, ವಲಯ ಅರಣ್ಯಾ ಧಿಕಾರಿ ರಂಗನಾಥ್‌, ಆರ್‌ಐ ವಿರೂಪಾಕ್ಷ ಸೇರಿದಂತೆ ತಾಲೂಕಿನ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.