ಪರವಾನಗಿ ಇಲ್ಲದ ಶಾಲೆ ಮೇಲೆ ದಾಳಿ


Team Udayavani, Dec 19, 2019, 3:00 AM IST

paravanagi

ಕುಣಿಗಲ್‌: ಅನುಮತಿ ಪಡೆಯದೆ ಹಲವು ವರ್ಷಗಳಿಂದ ಶಾಲೆ ನಡೆಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹರೀಶ್‌ನಾಯ್ಕ ಹಾಗೂ ಬಿಇಒ ತಿಮ್ಮರಾಜು ನಿಸರ್ಗ ವಿದ್ಯಾಸಂಸ್ಥೆ ಮೇಲೆ ದಿಢೀರ್‌ ದಾಳಿ ನಡೆಸಿ ದಾಖಲೆ ಪರಿಸೀಲಿಸಿದರು. ಹುಲಿಯೂರುದರ್ಗ ಹೋಬಳಿ ಉಜ್ಜನಿ ಮಾರ್ಗದ ಕೆಬ್ಬಳ್ಳಿಕ್ರಾಸ್‌ನಲ್ಲಿ ಇರುವ ನಿಸರ್ಗ ಖಾಸಗಿ ಶಾಲೆಯಲ್ಲಿ 6,7,8ನೇ ತರಗತಿಗಳಿಗೆ ಅನುಮತಿ ಪಡೆಯದೆ ಹಾಗೂ ಶಾಲಾ ವಾಹನಗಳಿಗೂ ಸಮರ್ಪಕ ದಾಖಲಾತಿ ಇಲ್ಲ.

ಜೊತೆಗೆ ಶಾಲಾ ಜಾಗ ಭೂಪರಿವರ್ತನೆ ಮಾಡಿಸದೇ ಕಾನೂನು ಬಾಹಿರವಾಗಿ ಶಾಲೆ ನಡೆಸಲಾಗುತ್ತಿದೆ ಎಂದು ತಾಪಂ ಸದಸ್ಯ ಕುಮಾರ್‌ ಅವರು ಸಾಕಷ್ಟು ಬಾರಿ ತಾಪಂ ಸಭೆಯಲ್ಲಿ ಪ್ರಸ್ತಾಪಿಸಿ ತನಿಖೆಗೆ ಒತ್ತಾಯಿಸಿದ್ದರು. ಈ ಸಂಬಂಧ ತಾಪಂ ಅಧ್ಯಕ್ಷ ಹರೀಶ್‌ ನಾಯ್ಕ, ಬಿಇಒ ತಿಮ್ಮರಾಜು. ಇಸಿಒ ಕರುಣಾಕರ್‌, ಸಿಆರ್‌ಪಿ ಪ್ರಕಾಶ್‌, ಕುಮಾರ್‌ ಅವರನ್ನೊಳಗೊಂಡ ತಂಡ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಾಖಲೆ ಇಲ್ಲ!: ಶಾಲಾ ವಾಹನಗಳಿಗೆ ವಿಮೆ ಇಲ್ಲದಿರುವುದು, ಚಾಲಕರ ದಾಖಲಾತಿ ಇಲ್ಲದಿರುವುದು ಜೊತೆಗೆ ಶೌಚಗೃಹಗಳಿಗೆ ಬಾಗಿಲು ಇಲ್ಲದಿರುವುದು, ತೆರೆದ ಸಂಪ್‌ ಇರುವುದು ಕಂಡು ಬಂದಿದೆ. ಅಲ್ಲದೇ 6,7,8ನೇ ತರಗತಿಗೆ ಅನುಮತಿ ಪಡಯದೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತನೆ ಮಾಡದೆ ತರಗತಿ ನಡೆಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಶಾಲೆ ಮುಖ್ಯಶಿಕ್ಷಕ ಶ್ರೀನಿವಾಸ್‌ ಯಾವುದಕ್ಕೂ ಸಮರ್ಪಕ ದಾಖಲಾತಿ ನೀಡದೇ ಸಮಜಾಯಿಷಿ ನೀಡಿದರು. ಇದರಿಂದ ಅಸಮಾಧಾನಗೊಂಡ ಅಧಿಕಾರಿಗಳ ತಂಡ ದಾಖಲೆ ಒದಗಿಸುವಂತೆ ತಾಕೀತು ಮಾಡಿತು.

ಕ್ರಿಮಿನಲ್‌ ಪ್ರಕರಣ ಎಚ್ಚರಿಕೆ: ಎರಡು ದಿನಗಳಲ್ಲಿ ದಾಖಲೆ ಒದಗಿಸುತ್ತೇವೆ ಎಂದು ಮುಖ್ಯಶಿಕ್ಷಕ ಶ್ರೀನಿವಾಸ್‌ ಮನವಿ ಮಾಡಿದರು. ಇದಕ್ಕೆ ಒಪ್ಪಿದ ಬಿಇ ತಿಮ್ಮರಾಜು, ಎರಡು ದಿನದ ಒಳಗೆ ಅಗತ್ಯವಿರುವ ದಾಖಲೆ ಒದಗಿಸದಿದ್ದರೆ ನಿಮ್ಮ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದೆಂದು ಎಚ್ಚರಿಕೆ ನೀಡಿದರು.

ಮುಲಾಜಿಲ್ಲದೆ ಕ್ರಮ: ಬಿಇಒ ತಿಮ್ಮರಾಜು ಮಾತನಾಡಿ, 6,7,8ನೇ ತರಗತಿ ರದ್ದು ಮಾಡುವಂತೆ ಆದೇಶಿಸಿದ್ದರೂ ಕಾನೂನು ಬಾಹಿರವಾಗಿ ತರಗತಿ ನಡೆಸುತ್ತಿದ್ದಾರೆ. ಮಕ್ಕಳ ಪೋಷಕರೂ ಶಾಲೆಯ ಬಗ್ಗೆ ತಿಳಿದುಕೊಳ್ಳದೇ ಅನುಮತಿ ಇಲ್ಲದ ಶಾಲೆಗೆ ಸೇರಿಸಿದರೆ ಮುಂದೆ ಸರ್ಕಾರಿ ಕೆಲಸ ಸಿಕ್ಕಿ ಪರಿಶೀಲನಾ ವೇಳೆ ದಾಖಲೆ ಸಿಗದೇ ಕೆಲಸದಿಂದ ವಂಚಿತರಾಗಬೇಕಾಗುತ್ತದೆ. ಶಾಲೆ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಯಾವುದೇ ಶಾಲೆಯಾಗಲಿ ನಿಯಮ ನಿಭಂದನೆಗೆ ಒಳಪಟ್ಟು ನಡೆಯಬೇಕು. ಅನುಮತಿ ಇಲ್ಲದೇ ಶಾಲೆ ನಡೆಸಿ ಮಕ್ಕಳ ಭವಿಷ್ಯ ಕಲ್ಲು ಹಾಕುವ ಕೆಲಸ ಮಾಡಬಾರದು. ಇದು ಒಳೆಯ ಬೆಳವಣಿಗೆಯಲ್ಲ. ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಈ ಕ್ರಮ ಅನಿವಾರ್ಯವಾಗಿದೆ. ತಾಲೂಕಿನಲ್ಲಿ ಇಂತಹ ನಕಲಿ ಶಾಲೆಗಳ ವಿರುದ್ದ ದಾಳಿ ಮುಂದುವರಿಸಲಾಗುವುದು.
-ಹರೀಶ್‌ ನಾಯ್ಕ, ತಾಪಂ ಅಧ್ಯಕ್ಷ

ಟಾಪ್ ನ್ಯೂಸ್

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.